ಗೃಹಜ್ಯೋತಿ, ಗೃಹಲಕ್ಷ್ಮಿ ಯೋಜನೆ ಭರವಸೆ: ಫೆ.16 ರಿಂದ ಮನೆ ಮನೆಗೆ ತೆರಳಿ 'ಗ್ಯಾರಂಟಿ ಕಾರ್ಡ್' ನೀಡಲು ಕಾಂಗ್ರೆಸ್ ಮುಂದು!

ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿದ್ದು, ಚುನಾವಣೆಗೆ ಭರ್ಜರಿ ಸಿದ್ಧತೆ ನಡೆಸಿರುವ ಕಾಂಗ್ರೆಸ್ ನಾಯಕರು ಅಬ್ಬರ ಪ್ರಚಾರ ನಡೆಸುತ್ತಿದ್ದಾರೆ. ಈಗಾಗಲೇ ಗೃಹ ಜ್ಯೋತಿ, ಗೃಹಲಕ್ಷ್ಮೀ ಯೋಜನೆಗಳನ್ನು ಘೋಷಣೆ ಮಾಡಿರುವ ಕಾಂಗ್ರೆಸ್, ಇದೀಗ ಮನೆ ಮನೆ ತೆರಳಿ ಗ್ಯಾರಂಟಿ ಕಾರ್ಡ್ ನೀಡಲು ಮುಂದಾಗಿದೆ ಎಂದು ತಿಳಿದುಬಂದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿದ್ದು, ಚುನಾವಣೆಗೆ ಭರ್ಜರಿ ಸಿದ್ಧತೆ ನಡೆಸಿರುವ ಕಾಂಗ್ರೆಸ್ ನಾಯಕರು ಅಬ್ಬರ ಪ್ರಚಾರ ನಡೆಸುತ್ತಿದ್ದಾರೆ. ಈಗಾಗಲೇ ಗೃಹ ಜ್ಯೋತಿ, ಗೃಹಲಕ್ಷ್ಮೀ ಯೋಜನೆಗಳನ್ನು ಘೋಷಣೆ ಮಾಡಿರುವ ಕಾಂಗ್ರೆಸ್, ಇದೀಗ ಮನೆ ಮನೆ ತೆರಳಿ ಗ್ಯಾರಂಟಿ ಕಾರ್ಡ್ ನೀಡಲು ಮುಂದಾಗಿದೆ ಎಂದು ತಿಳಿದುಬಂದಿದೆ.

ಫೆ.16ರಿಂದ ಜನರ ಮನೆ ಮನೆಗೆ ತೆರಳಲಿರುವ ರಾಜ್ಯ ಕಾಂಗ್ರೆಸ್ ನಾಯಕರು, ಈ ವೇಳೆ ಗ್ಯಾರಂಟಿ ಕಾರ್ಡ್ ಗಳನ್ನು ವಿತರಿಸಲು ನಿರ್ಧರಿಸಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ.

ಅಬ್ಬರ ಪ್ರಚಾರಕ್ಕೆ ಮುಂದಾಗಿರುವ ಕಾಂಗ್ರೆಸ್ ತನ್ನ ಎಲ್ಲಾ ಮುಖಂಡರು ಮತ್ತು ಕಾರ್ಯಕರ್ತರನ್ನು ಪ್ರಚಾರಕ್ಕಾಗಿ ಇಳಿಸಲು ಮುಂದಾಗಿದ್ದು, ಎಲ್ಲಾ ಮನೆಗಳಿಗೂ ಗ್ಯಾಂಟಿ ಕಾರ್ಡ್ ವಿತರಿಸುವ ಕಾರ್ಯವನ್ನು ಮಾರ್ಚ್ 10 ರೊಳಗೆ ಪೂರ್ಣಗೊಳಿಸಲುವ ಗುರಿಯನ್ನಿಟ್ಟುಕೊಂಡಿದೆ ಎಂದು ವರದಿಗಳು ತಿಳಿಸಿವೆ.

ಕಾಂಗ್ರೆಸ್ ಪಕ್ಷ ಈಗಾಗಲೇ ಎರಡು ಐತಿಹಾಸಿಕ ಗ್ಯಾರಂಟಿ ಯೋಜನೆ ಘೋಷಿಸಿದ್ದು, ಗೃಹಜ್ಯೋತಿ ಯೋಜನೆ ಮೂಲಕ 200 ಯುನಿಟ್ ವಿದ್ಯುತ್ ಉಚಿತ, ಗೃಹಲಕ್ಷ್ಮಿ ಯೋಜನೆ ಮೂಲಕ ಪ್ರತಿ ಮನೆ ಯಜಮಾನಿಗೆ 2000 ರೂ. ಪ್ರತಿ ತಿಂಗಳು ಕೊಡುವುದಾಗಿ ಘೋಷಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com