ಸಾವಿನ ಭಯ ನನಗಿಲ್ಲ; ಕೊಲೆಗಡುಕ ಮನಸ್ಥಿತಿಯ ಬಿಜೆಪಿ ಬಗ್ಗೆ ಜನ ಎಚ್ಚರಗೊಳ್ಳಬೇಕು: ಸಿದ್ದರಾಮಯ್ಯ

ಹತ್ಯೆ ಮಾಡಲು ಕರೆ ನೀಡುವ ಸಚಿವರಿಗೆ ಸಂಪುಟದಲ್ಲಿ ಮುಂದುವರಿಯುವ ಯಾವ ನೈತಿಕತೆಯೂ ಇಲ್ಲ. ರಾಜ್ಯಪಾಲರು ತಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ಥ ನಾರಾಯಣ ಅವರನ್ನು ಸಂಪುಟದಿಂದ ಕಿತ್ತು ಹಾಕಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.
ಸಿದ್ದರಾಮಯ್ಯ
ಸಿದ್ದರಾಮಯ್ಯ

ಬೆಂಗಳೂರು: ಹತ್ಯೆ ಮಾಡಲು ಕರೆ ನೀಡುವ ಸಚಿವರಿಗೆ ಸಂಪುಟದಲ್ಲಿ ಮುಂದುವರಿಯುವ ಯಾವ ನೈತಿಕತೆಯೂ ಇಲ್ಲ. ರಾಜ್ಯಪಾಲರು ತಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ಥ ನಾರಾಯಣ ಅವರನ್ನು ಸಂಪುಟದಿಂದ ಕಿತ್ತು ಹಾಕಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಾವಿನ ಭಯ ನನಗಿಲ್ಲ, ಇಂತಹ ಕೊಲೆಗಡುಕ ಮನಸ್ಥಿತಿಯವರು ಅಧಿಕಾರದಲ್ಲಿದ್ದರೆ ರಾಜ್ಯದ ಯಾವುದೇ ವ್ಯಕ್ತಿ ಸುರಕ್ಷಿತನಲ್ಲ. ಸೋಲಿನ ಭಯದಿಂದ ತತ್ತರಿಸಿಹೋಗಿರುವ ಈ ಕೊಲೆಗಡುಕ ಮನಸ್ಸುಗಳು ಗೆಲುವಿಗಾಗಿ ಯಾರ ಹತ್ಯೆಯನ್ನೂ ಮಾಡಬಹುದು. ಈ ಬಗ್ಗೆ ಜನ ಎಚ್ಚರಗೊಳ್ಳಬೇಕು ಎಂದಿದ್ದಾರೆ.

ಸೈದ್ಧಾಂತಿಕವಾಗಿ ಎದುರಿಸಲಾಗದ ಕಾರಣಕ್ಕಾಗಿಯೇ ಮಹಾತ್ಮ ಗಾಂಧೀಜಿಯವರನ್ನು ಗೋಡ್ಸೆ ಕೊಂದ. ಅದೇ ಗೋಡ್ಸೆ ಸಂತಾನವೇ ವಿದ್ವಾಂಸರಾಗಿದ್ದ ಎಂ.ಎಂ.ಕಲಬರ್ಗಿ ಮತ್ತು ಪತ್ರಕರ್ತೆ ಗೌರಿ ಲಂಕೇಶ್ ಅವರನ್ನು ಹತ್ಯೆ ಮಾಡಿರುವುದು, ಬಿಜೆಪಿಯ ಹೊಡಿ, ಬಡಿ ಸಂಸ್ಕೃತಿ ಅವರ ಬೌದ್ಧಿಕ ದಿವಾಳಿತನದ ಪ್ರತೀಕ ಎಂದು ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸೈದ್ಧಾಂತಿಕವಾಗಿ ನನ್ನನ್ನು ಎದುರಿಸುವ, ಇಲ್ಲವೇ ಸಾಧನೆಯ ಆಧಾರದಲ್ಲಿ ಮತ ಕೇಳುವ ಧಮ್-ತಾಕತ್ ಅವರಿಗೆ ಇಲ್ಲ.   ಅವರದು ಶೂನ್ಯ ಸಾಧನೆ ಮತ್ತು ಪೊಳ್ಳು ಸಿದ್ಧಾಂತ ಎಂದು ಅವರು ಟೀಕಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com