KRPP ಪಕ್ಷದಿಂದ 5 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಘೋಷಣೆ ಮಾಡಿದ ಜನಾರ್ಧನ ರೆಡ್ಡಿ

ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಸಂಸ್ಥಾಪಕ ಜನಾರ್ಧನ ರೆಡ್ಡಿ ಗುರುವಾರ ಐದು ವಿಧಾನಸಭಾ ಕ್ಷೇತ್ರಗಳಿಗೆ ತಮ್ಮ ಪಕ್ಷದ ಅಭ್ಯರ್ಥಿಗಳನ್ನು ಘೋಷಣೆ ಮಾಡಿದರು.
ಜನಾರ್ಧನ ರೆಡ್ಡಿ
ಜನಾರ್ಧನ ರೆಡ್ಡಿ

ಕೊಪ್ಪಳ: ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಸಂಸ್ಥಾಪಕ ಜನಾರ್ಧನ ರೆಡ್ಡಿ ಗುರುವಾರ ಐದು ವಿಧಾನಸಭಾ ಕ್ಷೇತ್ರಗಳಿಗೆ ತಮ್ಮ ಪಕ್ಷದ ಅಭ್ಯರ್ಥಿಗಳನ್ನು ಘೋಷಣೆ ಮಾಡಿದರು.

ಬಳ್ಳಾರಿ ಜಿಲ್ಲೆಯ ಸಿರಗುಪ್ಪಕ್ಕೆ ಟಿ. ಧರೆಪ್ಪ ನಾಯಕ, ಕೊಪ್ಪಳ ಜಿಲ್ಲೆಯ ಎಸ್‌ಸಿ ಮೀಸಲು ಕ್ಷೇತ್ರ ಕನಕಗಿರಿಗೆ ಡಾ. ಚಾರುಲ್ ದಾಸರಿ, ವಿಜಯಪುರ ಜಿಲ್ಲೆಯ ನಾಗಠಾಣ ಕ್ಷೇತ್ರಕ್ಕೆ ಶ್ರೀಕಾಂತ್, ರಾಯಚೂರು ಜಿಲ್ಲೆಯ ಸಿಂಧನೂರು ಕ್ಷೇತ್ರಕ್ಕೆ ನೆಕ್ಕಂಟಿ ಮಲ್ಲಿಕಾರ್ಜುನ ಮತ್ತು ಚಿತ್ರದುರ್ಗ ಜಿಲ್ಲೆಯ ಹಿರಿಯೂರಿಗೆ ಎಚ್‌. ಮಹೇಶ್ ಅವರನ್ನು ಕಣಕ್ಕಿಳಿಸಲಾಗುವುದು ಎಂದು ತಿಳಿಸಿದರು.

ಕಲ್ಯಾಣ ಕರ್ನಾಟಕ ಭಾಗಕ್ಕೆ ಆದ್ಯತೆ ಕೊಟ್ಟು ಪ್ರಚಾರ ನಡೆಸುತ್ತಿರುವ ಜನಾರ್ಧನ ರೆಡ್ಡಿ ಈ ಭಾಗದ ಜಿಲ್ಲೆಗಳಲ್ಲಿ ಪ್ರಚಾರ ಸಭೆಗಳನ್ನು ನಡೆಸಿ ಅಲ್ಲಿಯೇ ಅಭ್ಯರ್ಥಿಗಳನ್ನು ಘೋಷಣೆ ಮಾಡಿಕೊಂಡು ಬಂದಿದ್ದಾರೆ.  ಈಗಾಗಲೇ ಸ್ಥಳೀಯವಾಗಿ ಟಿಕೆಟ್ ನೀಡುವ ಬಗ್ಗೆಯೂ ಇವರಿಗೆ ಭರವಸೆ ನೀಡಿದ್ದರು. ಆ ಹೆಸರುಗಳನ್ನು ಈಗ ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ. 

30ರಿಂದ 40 ಅಭ್ಯರ್ಥಿಗಳು ಕಣಕ್ಕೆ
ರಾಜ್ಯದಲ್ಲಿ 30ರಿಂದ 40 ಅಭ್ಯರ್ಥಿಗಳನ್ನು ಕಣಕ್ಕಿಳಿಸುತ್ತೇವೆ. ಮುಂದಿನ ದಿನಗಳಲ್ಲಿ ಯಾವಾದರೂ ಒಂದು ಪಕ್ಷದೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವುದು ಅನಿವಾರ್ಯವಾಗುತ್ತದೆ. ಆಗ ಯಾರೊಂದಿಗೆ ಹೊಂದಾಣಿಕೆ ಮಾಡಿಕೊಂಡು ಸರಕಾರ ರಚಿಸಬೇಕೆಂದು ನಿರ್ಧರಿಸುತ್ತೇವೆ ಎಂದು ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿ ತಿಳಿಸಿದ್ದಾರೆ. 

ಕೆಆರ್ ಪಿ ಪಕ್ಷಕ್ಕೆ ನಿರೀಕ್ಷೆಗೂ ಮೀರಿ ಪಕ್ಷವನ್ನು ಜನ ಸ್ವಾಗತ ಮಾಡ್ತಿದ್ದಾರೆ. ಧರೆಪ್ಪ ನಾಯಕ ಹಿಂದೆ ಆಮ್ ಆದ್ಮಿ ಪಕ್ಷದಲ್ಲಿ ಗುರುತಿಸಿಕೊಂಡಿದ್ದರು. ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದವರನ್ನು ಸಿರಗುಪ್ಪ ಬಳ್ಳಾರಿ ಜಿಲ್ಲೆಯ ಎಸ್ಟಿ ಮೀಸಲು ಕ್ಷೇತ್ರಕ್ಕೆ ಅಧಿಕೃತವಾಗಿ ಘೋಷಿಸಿದರು. ರಾಜ್ಯದ ಒಟ್ಟು 6 ಕಡೆ ಅಭ್ಯರ್ಥಿ ಘೋಷಣೆ ಮಾಡಿದ್ದೇನೆ. ಸಾಮಾನ್ಯ ಕ್ಷೇತ್ರದಲ್ಲಿ ಸ್ಥಳೀಯರಿಗೆ ಅವಕಾಶ ನೀಡುತ್ತೇವೆ. ಕೋಲಾರ, ತುಮಕೂರು ಜಿಲ್ಲೆ ಮತ್ತು ಕಲ್ಯಾಣ ಕರ್ನಾಟಕ‌ ಸೇರಿ ಒಟ್ಟು 30 ರಿಂದ 40 ಕಡೆ ಅಭ್ಯರ್ಥಿ ಹಾಕುತ್ತೇವೆ. ರಾಜ್ಯದ ಜನರಿಗೆ ಬೇಕಾಗಿರೋದು ಅಭಿವೃದ್ಧಿ ಮಾತ್ರ. ನಮ್ಮ ಕಲ್ಯಾಣ ರಾಜ್ಯ ಪ್ರಗತಿಪಕ್ಷದಿಂದ ಅಭಿವೃದ್ಧಿ ದೃಷ್ಟಿಕೋನ ಮಾತ್ರವಿದೆ. ನಾನು ಜನರನ್ನು ನಂಬಬೇಕು. ನಾನು ಜನರಿಗೆ ಒಳ್ಳೇದು ಮಾಡುತ್ತೇನೆ ಎಂದರು.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com