ಕಾಂಗ್ರೆಸ್ ಆಡಳಿತದಲ್ಲಿ ಕರ್ನಾಟಕ ರಾಜ್ಯ ಅತ್ಯಂತ ಹೆಚ್ಚು ಭ್ರಷ್ಟಾಚಾರ ಕಂಡಿದೆ: ಸಿಟಿ ರವಿ
ಕಾಂಗ್ರೆಸ್ ಆಡಳಿತದಲ್ಲಿ ಕರ್ನಾಟಕ ರಾಜ್ಯ ಅತ್ಯಂತ ಹೆಚ್ಚು ಭ್ರಷ್ಟಾಚಾರವನ್ನು ನೋಡಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ಅವರು ಹೇಳಿದ್ದಾರೆ.
Published: 18th February 2023 08:06 AM | Last Updated: 18th February 2023 02:30 PM | A+A A-

ಸಿಟಿ ರವಿ
ಬೆಂಗಳೂರು: ಕಾಂಗ್ರೆಸ್ ಆಡಳಿತದಲ್ಲಿ ಕರ್ನಾಟಕ ರಾಜ್ಯ ಅತ್ಯಂತ ಹೆಚ್ಚು ಭ್ರಷ್ಟಾಚಾರವನ್ನು ನೋಡಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ಅವರು ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಬಿಜೆಪಿ ಆಡಳಿತದಲ್ಲಿ ಭ್ರಷ್ಟಾಚಾರವಿಲ್ಲ ಎಂದು ನಾನು ಹೇಳುತ್ತಿಲ್ಲ, ವ್ಯವಸ್ಥೆಯಲ್ಲಿ ಭ್ರಷ್ಟಾಚಾರವಿದೆ, ಆದರೆ, ಕಾಂಗ್ರೆಸ್‌ಗೆ ಹೋಲಿಸಿದರೆ ಬಿಜೆಪಿ ಆಡಳಿತದಲ್ಲಿ ಭ್ರಷ್ಟಾಚಾರ ಕಡಿಮೆ. ಕಾಂಗ್ರೆಸ್ ಆಡಳಿತದಲ್ಲಿ ರಾಜ್ಯವು ಭಾರಿ ಪ್ರಮಾಣದ ಭ್ರಷ್ಟಾಚಾರವನ್ನು ನೋಡಿದೆ. ರಾಜ್ಯದಲ್ಲಿ ಭ್ರಷ್ಟಾಚಾರ ಹೆಚ್ಚುತ್ತಿರುವುದಕ್ಕೆ ಕಾಂಗ್ರೆಸ್ ಕಾರಣ ಎಂದು ಹೇಳಿದರು.
ಇದೇ ವೇಳೆ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ್ ಅವರ ಹೇಳಿಕೆಯನ್ನು ಅಸಮ್ಮತಿಸಿದ ಅವರು, ಸಿದ್ದರಾಮಯ್ಯ ವಿರುದ್ಧ ಅವರು ನೀಡಿರುವ ಹೇಳಿಕೆಯನ್ನು ಒಪ್ಪಲು ಸಾಧ್ಯವಿಲ್ಲ. ರಾಜಕೀಯ ವಿರೋಧಿಗಳ ವಿರುದ್ಧ ಟೀಕೆ ಮಾಡುವಾಗಲೂ ನಾವು ಸುಸಂಸ್ಕೃತವಾಗಿ ಮಾತನಾಡಬೇಕು ಎಂದು ತಿಳಿಸಿದರು.
ಇದನ್ನೂ ಓದಿ: ಬಿಜೆಪಿಯೇ ಭರವಸೆ ಎನ್ನುತ್ತಿರುವ ಆಡಳಿತ ಪಕ್ಷ: 40 ಪರ್ಸೆಂಟ್ ಕಮಿಷನ್ ಪಕ್ಷ ಎಂದು ಮಸಿ ಬಳಿಯುತ್ತಿರುವ ಕಾಂಗ್ರೆಸ್
ಕಾಂಗ್ರೆಸ್ ಆಡಳಿತದಲ್ಲಿ ಕರ್ನಾಟಕ ರಾಜ್ಯ ಅತ್ಯಂತ ಹೆಚ್ಚು ಭ್ರಷ್ಟಾಚಾರವನ್ನು ನೋಡಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ಅವರು ಹೇಳಿದ್ದಾರೆ.