ತಾವೇ ತೋಡಿದ ಹಳ್ಳದಲ್ಲಿ ಇಂಥವರು ಬಿದ್ದಾಗ, ಅಯ್ಯೋ‌ ಪಾಪ ಎಂದೆನಿಸುತ್ತಷ್ಟೆ: ಸಿಟಿ ರವಿಗೆ ಜೆಡಿಎಸ್ ಟಾಂಗ್

 ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಬಾಡೂಟ ಸೇವಿಸಿ ಭಟ್ಕಳದ ನಾಗಬನ ಹಾಗೂ ಕರಿಬಂಟ ಹನುಮನ ದೇವಸ್ಥಾನಕ್ಕೆ ಹೋಗಿದ್ದಾರೆ ಎಂಬ ಸುದ್ದಿ ಇದೀಗ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಬಾಡೂಟ ಸೇವಿಸುವಾಗ ತೆಗೆದ ಪಟವು ಪ್ರಕಟವಾಗಿದ್ದು, ಸಿ.ಟಿ.ರವಿಯವರೆ, ಸತ್ಯ ಬಹಿರಂಗಪಡಿಸುವಿರೆ? ಎಂದು ಜೆಡಿಎಸ್ ಒತ್ತಾಯಿಸಿದೆ.
ಸಿಟಿ ರವಿ ಬಾಡೂಟ ಸವಿದರು ಎನ್ನಲಾದ ಫೋಟೋ
ಸಿಟಿ ರವಿ ಬಾಡೂಟ ಸವಿದರು ಎನ್ನಲಾದ ಫೋಟೋ

ಬೆಂಗಳೂರು:  ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಬಾಡೂಟ ಸೇವಿಸಿ ಭಟ್ಕಳದ ನಾಗಬನ ಹಾಗೂ ಕರಿಬಂಟ ಹನುಮನ ದೇವಸ್ಥಾನಕ್ಕೆ ಹೋಗಿದ್ದಾರೆ ಎಂಬ ಸುದ್ದಿ ಇದೀಗ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಬಾಡೂಟ ಸೇವಿಸುವಾಗ ತೆಗೆದ ಪಟವು ಪ್ರಕಟವಾಗಿದ್ದು, ಸಿ.ಟಿ.ರವಿಯವರೆ, ಸತ್ಯ ಬಹಿರಂಗಪಡಿಸುವಿರೆ? ಎಂದು ಜೆಡಿಎಸ್ ಒತ್ತಾಯಿಸಿದೆ.

ಈ ಸಂಬಂಧ ಜೆಡಿಎಸ್ ಜಾಲತಾಣ ಟ್ವಿಟರ್ ನಲ್ಲಿ ಸರಣಿ ಟ್ವೀಟ್ ಮಾಡಲಾಗಿದ್ದು,  ನೀವು ತಿಂದ ಮಾಂಸ ಯಾವುದು ಎಂದು ಹೇಳುತ್ತೀರಾ, ರವಿಯವರೆ? ಆಹಾರ ಸೇವನೆ ವೈಯಕ್ತಿಕ ವಿಷಯ. ನಂಬಿಕೆಗಳು ಅಷ್ಟೆ. ಆದರೆ, ಎಲ್ಲದರ ಕಲಸುಮೇಲೋಗರ ಮಾಡಿ, ಜನರನ್ನು ದಿಕ್ಕು ತಪ್ಪಿಸುವ ಹೇಸಿಗೆ ರಾಜಕಾರಣ ಮಾಡುವವರಿಗೆ ಅನಿವಾರ್ಯವಾಗಿ ಈ ಪ್ರಶ್ನೆ ಕೇಳಬೇಕಿದೆ ಎಂದು ಟ್ವೀಟ್ ಮಾಡಲಾಗಿದೆ. 

ಆಹಾರ ಸಂಸ್ಕ್ರತಿ, ದೈವ ನಂಬಿಕೆಗಳನ್ನು ರಾಜಕಾರಣಕ್ಕೆ ಬಳಸುವ, ಆ ಮೂಲಕ ಜನರ ಭಾವನೆಗಳನ್ನು ಕೆರಳಿಸಿ ಅಧಿಕಾರ ಪಡೆಯುವ ಕೊಳಕು ರಾಜಕಾರಣ ಬಿಜೆಪಿಯವರ ಕಾರ್ಯವೈಖರಿ. ತಾವೇ ತೋಡಿದ ಹಳ್ಳದಲ್ಲಿ ಇಂಥವರು ಬಿದ್ದಾಗ, ಅಯ್ಯೋ‌ ಪಾಪ ಎಂದೆನಿಸುತ್ತಷ್ಟೆ! ಎಂದು ಟಾಂಗ್ ನೀಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com