ಪರಮೇಶ್ವರ್ ಪುತ್ರಿಯ ಫೋಟೋ ಹಾಕಿ ಅವಹೇಳನಕಾರಿ ಕಾಮೆಂಟ್: ಚುನಾವಣೆ ಹೊತ್ತಲ್ಲಿ ಮಾಜಿ ಡಿಸಿಎಂ ಗೆ ಮುಜುಗರ ತರಲು ವಿರೋಧಿಗಳ ಷಡ್ಯಂತ್ರ!

ಕರ್ನಾಟಕ ವಿಧಾನಸಭೆ ಚುನಾವಣೆಗೆ ಮುನ್ನ ಕಾಂಗ್ರೆಸ್ ಪಕ್ಷದ ಮಾಜಿ ಉಪಮುಖ್ಯಮಂತ್ರಿ ಡಾ ಜಿ ಪರಮೇಶ್ವರ ಅವರು ತಮ್ಮ ವಿರೋಧಿಗಳಿಂದ ವಿಶಿಷ್ಟ ಸವಾಲು ಎದುರಿಸುತ್ತಿದ್ದಾರೆ.
ಜಿ.ಪರಮೇಶ್ವರ್
ಜಿ.ಪರಮೇಶ್ವರ್

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಗೆ ಮುನ್ನ ಕಾಂಗ್ರೆಸ್ ಪಕ್ಷದ ಮಾಜಿ ಉಪಮುಖ್ಯಮಂತ್ರಿ ಡಾ ಜಿ ಪರಮೇಶ್ವರ ಅವರು ತಮ್ಮ ವಿರೋಧಿಗಳಿಂದ ವಿಶಿಷ್ಟ ಸವಾಲು ಎದುರಿಸುತ್ತಿದ್ದಾರೆ.

ಅವರು ಉದ್ದೇಶಪೂರ್ವಕವಾಗಿ ಅವರನ್ನು ಮುಜುಗರಕ್ಕೀಡುಮಾಡಲು ಸಾಮಾಜಿಕ ಮಾಧ್ಯಮದಲ್ಲಿ ತಮ್ಮ ಮಗಳ ವೈಯಕ್ತಿಕ ಮಾಹಿತಿಯನ್ನು ದುರುಪಯೋಗದಿಂದ ಅಪ್‌ಲೋಡ್ ಮಾಡಿದ್ದರಿಂದ ಹಿರಿಯ ನಾಯಕ ಪರಮೇಶ್ವರ್ ಬೇಸರಗೊಂಡಿದ್ದಾರೆ.

ಈ ಹಿನ್ನೆಲೆಯಲ್ಲಿ ಪರಮೇಶ್ವರ್ ಬೆಂಬಲಿಗರು ಮುಂದಿನ ಕ್ರಮ ಕೈಗೊಳ್ಳುವಂತೆ ಕೊರಟಗೆರೆ ವಿಧಾನಸಭಾ ಕ್ಷೇತ್ರದ ಪೊಲೀಸರಿಗೆ ಹಾಗೂ ಬೆಂಗಳೂರಿನ  ಸೈಬರ್ ಕ್ರೈಂ ಪೊಲೀಸರಿಗೆ ಖಾಸಗಿ ದೂರು ನೀಡಿದ್ದಾರೆ.

ಪರಮೇಶ್ವರ್ ಆಪ್ತ ಬೆಂಬಲಿಗರಲ್ಲಿ ಒಬ್ಬರಾದ ಸೋಮಶೇಖರ್ ಬಿ ಎನ್,  ಫೆ.21 ರಂದು ಬೆಂಗಳೂರಿನ ಮೊದಲ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ನ್ಯಾಯಾಲಯಕ್ಕೆ ಖಾಸಗಿ ದೂರು ಸಲ್ಲಿಸಿದರು. 2022 ರ ಡಿಸೆಂಬರ್ 29 ರಿಂದ ದುಷ್ಕರ್ಮಿಗಳು ಸಾಮಾಜಿಕ ಮಾಧ್ಯಮದಲ್ಲಿ ವಿಶೇಷವಾಗಿ ಯೂಟ್ಯೂಬ್‌ಗೆ ವಿಡಿಯೋ ಅಪ್ ಲೋಡ್ ಮಾಡಿದ್ದಾರೆ, ಈ ಸಂಬಂಧ ಅವರು ಆರು ಮಂದಿಯ ಹೆಸರನ್ನು ಸಹ ಉಲ್ಲೇಖಿಸಿದ್ದಾರೆ.

ನಕಲಿ ಖಾತೆ ತೆರೆದು ಡಾ. ಜಿ ಪರಮೇಶ್ವರ್ ಹಾಗೂ ಅವರ ಮಗಳ ಬಗ್ಗೆ ಅವಹೇಳನಕಾರಿ ಕಾಮೆಂಟ್​ ಮಾಡುವ ಮೂಲಕ ತೇಜೋವಧೆ ಮಾಡುವ ಪ್ರಯತ್ನ ಮಾಡಲಾಗುತ್ತಿದೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ನಕಲಿ ಖಾತೆ ತೆಗೆದು ಅವಹೇಳನಕಾರಿ ಕಾಮೆಂಟ್ ಮಾಡುವ ದುಷ್ಕರ್ಮಿಗಳ ವಿರುದ್ಧ ಕ್ರಮಕೈಗೊಳ್ಳುವಂತೆ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು ಮಾಡಲಾಗಿದೆ.

ಸಾಮಾಜಿಕ ಜಾಲತಾಣಗಳಾದ ಫೇಸ್‌ಬುಕ್, ಯೂಟ್ಯೂಬ್‌ಗಳಲ್ಲಿ ನಕಲಿ ಖಾತೆ ತೆರೆದು ಅವಹೇಳನಕಾರಿಯಾಗಿ ವಿಡಿಯೋಗಳನ್ನು ಹಾಕಲಾಗುತ್ತಿದೆ. ಅಲ್ಲದೆ ಈ ವಿಡಿಯೋಗಳಲ್ಲಿ ಪರಮೇಶ್ವರ್ ಹಾಗೂ ಶನಾ ಪರಮೇಶ್ವರ್ ಅವರ ಕುರಿತ ಕೆಟ್ಟದಾಗಿ ಕಾಮೆಂಟ್​ ಮಾಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಅದರಲ್ಲೂ ಚುನಾವಣಾ ಸಂದರ್ಭದಲ್ಲಿ ಪರಮೇಶ್ವರ್ ಅವರನ್ನು ರಾಜಕೀಯ ಕುಗ್ಗಿಸುವ ಪ್ರಯತ್ನ ನಡೆಸಲಾಗುತ್ತಿದೆ ಎಂದು ರಘುವೀರ್ ಕೊರಟಗೆರೆ ಹೇಳಿದ್ದಾರೆ. ನಮ್ಮ ವಿರೋಧಿಗಳು ಕೆಲಕಾಲದಿಂದ ಇಂತಹ ಕೆಲಸ ಮಾಡುತ್ತಿದ್ದಾರೆ, ನಾವು ದೂರು ನೀಡಿದ ನಂತರ ನಿಲ್ಲಿಸಿದ್ದಾರೆ ಎಂದು ಹೇಳಿದ್ದಾರೆ.

ಪರಮೇಶ್ವರ ಅವರ ಮಗ ಕೆಲವು ವರ್ಷಗಳ ಹಿಂದೆ ಲಿಂಗ ಬದಲಾವಣೆಯ ಶಸ್ತ್ರಚಿಕಿತ್ಸೆಗೆ ಒಳಗಾಗಿ ಹೆಣ್ಣಾಗಿ ಬದಲಾಗಿದ್ದಾರೆ. ಈಗ ಚುನಾವಣೆಯ ಹಿನ್ನೆಲೆಯಲ್ಲಿ ಅವರ ವಿರೋಧಿಗಳು ಅದನ್ನು ಹೈಲೈಟ್ ಮಾಡಲು ಪ್ರಯತ್ನಿಸುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com