ಅಮುಲ್, ನಂದಿನಿ ವಿಲೀನ: ಶಾ ವಿರುದ್ಧ ಎಚ್ ಡಿಕೆ, ಡಿಕೆಶಿ ವಾಗ್ದಾಳಿ

ನೆಲ, ಜಲ, ನುಡಿಯ ಬಗ್ಗೆ ಕನ್ನಡ ಮತ್ತು ಕರ್ನಾಟಕದ ಮೇಲೆ ಸದಾ ಪ್ರಹಾರ ನಡೆಸುತ್ತಿರುವ ಬಿಜೆಪಿ ಕನ್ನಡಿಗರ ವಿರುದ್ಧ ತನ್ನ ರಕ್ಕಸ ನೀತಿಗಳನ್ನು ಮುಂದುವರಿಸಿದೆ. ಈಗ ಕರ್ನಾಟಕದ ಹಾಲಿನಲ್ಲೂ ಗುಜರಾತಿನ ಹುಳಿ ಹಿಂಡಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೊರಟಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.
ಅಮಿತ್ ಶಾ, ಎಚ್ ಡಿಕೆ, ಡಿಕೆ ಶಿವಕುಮಾರ್
ಅಮಿತ್ ಶಾ, ಎಚ್ ಡಿಕೆ, ಡಿಕೆ ಶಿವಕುಮಾರ್

ಬೆಂಗಳೂರು: ನೆಲ, ಜಲ, ನುಡಿಯ ಬಗ್ಗೆ ಕನ್ನಡ ಮತ್ತು ಕರ್ನಾಟಕದ ಮೇಲೆ ಸದಾ ಪ್ರಹಾರ ನಡೆಸುತ್ತಿರುವ ಬಿಜೆಪಿ ಕನ್ನಡಿಗರ ವಿರುದ್ಧ ತನ್ನ ರಕ್ಕಸ ನೀತಿಗಳನ್ನು ಮುಂದುವರಿಸಿದೆ. ಈಗ ಕರ್ನಾಟಕದ ಹಾಲಿನಲ್ಲೂ ಗುಜರಾತಿನ ಹುಳಿ ಹಿಂಡಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೊರಟಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

 ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಅವರು, ಬ್ಯಾಂಕಿಂಗ್ ಕ್ಷೇತ್ರದಲ್ಲಿ ದೇಶಕ್ಕೇ ಮಾದರಿಯಾಗಿದ್ದ ಕರ್ನಾಟಕವನ್ನು ಉತ್ತರ ಭಾರತದ ಬ್ಯಾಂಕ್ ಗಳಿಗೆ ಅಡಿಯಾಳನ್ನಾಗಿಸಿ, ಹಿಂದಿ ಭಾಷಿಗರ ಉದ್ಧಾರಕ್ಕಾಗಿ ಕನ್ನಡಿಗರ ಅನ್ನ ಕಸಿದುಕೊಂಡ ಬಿಜೆಪಿ ಈಗ, ನಂದಿನಿಯನ್ನು ಹೊಡೆದುಕೊಂಡು ಹೋಗಲು ಹಿಡನ್ ಅಜೆಂಡಾ ರೂಪಿಸಿದಂತಿದೆ. ಕರ್ನಾಟಕ ಎಂದಿಗೂ ಗುಜರಾತಿನ ವಸಾಹತು ಆಗುವುದಿಲ್ಲ ಎಂದಿದ್ದಾರೆ. 

ಅಮುಲ್ ಜತೆ ನಂದಿನಿ ವಿಲೀನ ಸಾಧ್ಯವಿಲ್ಲ. ನಮ್ಮ ರೈತರ ಅನ್ನ ಕಸಿಯುವ ಕೆಲಸವನ್ನು ಸಹಿಸುವ ಪ್ರಶ್ನೆಯೇ ಇಲ್ಲ. ಕೆಎಂಎಫ್ ಕನ್ನಡಿಗರ ಜೀವನಾಡಿ ಮಾತ್ರವಲ್ಲ, ಸಮಸ್ತ ಕನ್ನಡಿಗರ ಆಸ್ತಿ ಮತ್ತು ಅಸ್ಮಿತೆ. ಅಮಿತ್ ಶಾ ಅವರು ಇದೆಲ್ಲವನ್ನು ಅರ್ಥ ಮಾಡಿಕೊಂಡರೆ ಒಳ್ಳೆಯದು ಎಂದು ಎಚ್ಚರಿಕೆ ನೀಡಿದ್ದಾರೆ.

ಮತ್ತೊಂದೆಡೆ ಇದೇ ವಿಚಾರವಾಗಿ ಪ್ರತಿಕ್ರಿಯಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ನಂದಿನಿ ನಮ್ಮ ರಾಜ್ಯಕ್ಕೆ ಸೇರಿದ್ದು, ಹಾಲು ನೀರು, ನೆಲ ಇದು ನಮ್ಮ ಹಕ್ಕು. ಕೆಎಂಎಫ್ ಲಾಭದಾಯಕವಾಗಿ ನಡೆಯುತ್ತಿದೆ.ಇದನ್ನು ರಾಜ್ಯದ ಹಾಲು ಮಂಡಳಿ ಜೊತೆಗೆ ವಿಲೀನ ಮಾಡುವ ಅವಶ್ಯಕತೆ ಇಲ್ಲ ಎಂದರು. ರೈತರನ್ನು ಶಕ್ತಿಶಾಲಿಯನ್ನಾಗಿ ಮಾಡಬೇಕು. ಅದು ಬಿಟ್ಟು ವಿಲೀನದ ಬಗ್ಗೆ ಮಾತನಾಡುವುದು ಸರಿಯಲ್ಲ, ಇದಕ್ಕೆ ನಾವು ಅವಕಾಶ ಕೊಡಲ್ಲ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com