ಚಿತ್ರದುರ್ಗ: ಎಸ್ ಸಿ, ಎಸ್ ಟಿ ಐಕ್ಯತಾ ಸಮಾವೇಶ, ಬಿಜೆಪಿ ವಿರುದ್ಧ ಹರಿಹಾಯ್ದ ಕೈ ನಾಯಕರು

ಕೋಟೆನಾಡು ಚಿತ್ರದುರ್ಗದ ಮುರುಘಾ ರಾಜೇಂದ್ರ ಕ್ರೀಡಾಂಗಣದಲ್ಲಿಂದು ಕಾಂಗ್ರೆಸ್ ಪಕ್ಷದ ಪರಿಶಿಷ್ಟ ಸಮುದಾಯಗಳ ಐಕ್ಯತಾ ಸಮಾವೇಶ ನಡೆಯಿತು.ಈ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಕೈ ನಾಯಕರು ಬಿಜೆಪಿ ವಿರುದ್ಧ ಹರಿಹಾಯ್ದರು.
ಎಸ್ ಸಿ, ಎಸ್ ಟಿ ಐಕ್ಯತಾ ಸಮಾವೇಶದಲ್ಲಿ ಕಾಂಗ್ರೆಸ್ ನಾಯಕರು
ಎಸ್ ಸಿ, ಎಸ್ ಟಿ ಐಕ್ಯತಾ ಸಮಾವೇಶದಲ್ಲಿ ಕಾಂಗ್ರೆಸ್ ನಾಯಕರು

ಚಿತ್ರದುರ್ಗ:  ಕೋಟೆನಾಡು ಚಿತ್ರದುರ್ಗದ ಮುರುಘಾ ರಾಜೇಂದ್ರ ಕ್ರೀಡಾಂಗಣದಲ್ಲಿಂದು ಕಾಂಗ್ರೆಸ್ ಪಕ್ಷದ ಪರಿಶಿಷ್ಟ ಸಮುದಾಯಗಳ ಐಕ್ಯತಾ ಸಮಾವೇಶ ನಡೆಯಿತು.ಈ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಕೈ ನಾಯಕರು ಬಿಜೆಪಿ ವಿರುದ್ಧ ಹರಿಹಾಯ್ದರು.

ದೇಶದಲ್ಲಿ ಸಂವಿಧಾನ, ಪ್ರಜಾಪ್ರಭುತ್ವ ಉಳಿಯಬೇಕು ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದರು. ಪರಿಶಿಷ್ಟ ಸಮುದಾಯದವರು ಛಿದ್ರವಾದರೆ ಕೇಳುವವರು ಯಾರೂ ಇರುವುದಿಲ್ಲ. ಪರಿಶಿಷ್ಟರಲ್ಲಿ ಒಗ್ಗಟ್ಟು ಇಲ್ಲದಿದ್ದರೆ ನಿಮ್ಮನ್ನು ಬ್ರಿಟೀಷರಂತೆ ತುಂಡು ತುಂಡಾಗಿ ವಿಭಜಿಸಿ ಒಡೆದು ಆಳುತ್ತಾರೆ ಎಂದರು.

ನಾವು ದಲಿತರು, ಶೋಷಿತರು, ಹಿಂದುಳಿದವರ ಜತೆ ಅಧಿಕಾರವನ್ನು ಹಂಚಿಕೊಳ್ಳುತ್ತದೆ. ಇದು ಕಾಂಗ್ರೆಸ್ ಪಕ್ಷದ ಬದ್ಧತೆ ಎಂದು ಎಐಸಿಸಿ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಹೇಳಿದರೆ, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಎಲ್ಲ ಸಮಾಜದವರು ಅಧಿಕಾರಕ್ಕೆ ಬಂದಂತೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವ ಕುಮಾರ್ ನುಡಿದರು. ಶೋಷಿತ ಸಮುದಾಯಗಳ ಜನರ ಸಮಾನತೆಯ ಕೂಗಿಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ದನಿಗೂಡಿಸಿದರು. 

ಹೆಚ್ಚಿನ ಸಂಖ್ಯೆಯ ಪರಿಶಿಷ್ಟರು ಸೇರುವ ಮೂಲಕ ಸಂವಿಧಾನಕ್ಕೆ ಕೈ ಹಾಕಿದರೆ ಭಸ್ಮವಾಗುತ್ತೀರ' ಎಂಬ ಸ್ಪಷ್ಟ ಸಂದೇಶವನ್ನು ಮೋದಿ ಹಾಗೂ ಆರ್ ಎಸ್ ಎಸ್ ಗೆ ರವಾನಿಸಿದ್ದೀರಿ ಎಂದು ಬಿ.ಕೆ. ಹರಿಪ್ರಸಾದ್ ತಿಳಿಸಿದರು. ಕಾಂಗ್ರೆಸ್ ಸರ್ಕಾರ ಬಂದ ಮೊದಲ ಅಧಿವೇಶನದಲ್ಲೇ ಸದಾಶಿವ ಆಯೋಗದ ವರದಿಯನ್ನು ವಿಧಾನಮಂಡಲದಲ್ಲಿ ಮಂಡಿಸಲಾಗುವುದು. ಆ ಮೂಲಕ ಈ ಸಮುದಾಯದ ಜನರಿಗೆ ರಕ್ಷಣೆ ಹಾಗೂ ಮೀಸಲಾತಿ ನೀಡಲಾಗುವುದು ಎಂದು ಮಾಜಿ ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ತಿಳಿಸಿದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com