ಕಾಂಗ್ರೆಸ್ ನಿಂದ ಮಹಿಳೆಯರಿಗೆ ಪ್ರತ್ಯೇಕ ಪ್ರಣಾಳಿಕೆ; 'ನಾ ನಾಯಕಿ' ಸಮಾವೇಶಕ್ಕೆ ಪ್ರಿಯಾಂಕಾ ಗಾಂಧಿ ಆಗಮನ
ಬೆಂಗಳೂರಿನ ಅರಮನೆ ಮೈದಾನದಲ್ಲಿ ಜನವರಿ 16 ರಂದು ನಡೆಯುವ 'ನಾ ನಾಯಕಿ' ಸಮಾವೇಶಕ್ಕೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಆಗಮಿಸಲಿದ್ದಾರೆ. ರಾಜ್ಯದ ಮಹಿಳೆಯರ ಸಬಲೀಕರಣಕ್ಕಾಗಿ...
Published: 09th January 2023 05:23 PM | Last Updated: 09th January 2023 05:23 PM | A+A A-

ಪ್ರಿಯಾಂಕಾ ಗಾಂಧಿ ವಾದ್ರಾ
ಬೆಂಗಳೂರು: ಬೆಂಗಳೂರಿನ ಅರಮನೆ ಮೈದಾನದಲ್ಲಿ ಜನವರಿ 16 ರಂದು ನಡೆಯುವ 'ನಾ ನಾಯಕಿ' ಸಮಾವೇಶಕ್ಕೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಆಗಮಿಸಲಿದ್ದಾರೆ. ರಾಜ್ಯದ ಮಹಿಳೆಯರ ಸಬಲೀಕರಣಕ್ಕಾಗಿ ಕಾಂಗ್ರೆಸ್ ಮಹಿಳೆಯರಿಗಾಗಿ ಪ್ರತ್ಯೇಕ ಪ್ರಣಾಳಿಕೆ ಬಿಡುಗಡೆ ಮಾಡುವ ಬಗ್ಗೆ ಯೋಜಿಸುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಸೋಮವಾರ ತಿಳಿಸಿದ್ದಾರೆ.
ಇಂದು ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆಶಿ, ರಾಜ್ಯ ವಿಧಾನಸಭಾ ಚುನಾವಣೆಗೆ ಮುನ್ನ ಎಲ್ಲಾ ಮಹಿಳೆಯರ ಬೆಂಬಲ ಪಡೆಯುವ ಗುರಿಯನ್ನು ಪ್ರಿಯಾಂಕಾ ಗಾಂಧಿ ಅವರು ಹೊಂದಿದ್ದಾರೆ. ಏಪ್ರಿಲ್-ಮೇ ವೇಳೆಗೆ ನಡೆಯಲಿರುವ ಚುನಾವಣೆಗೆ ಮುಂಚಿತವಾಗಿ ಪಕ್ಷ ಮಹಿಳೆಯರಿಗಾಗಿ ಪ್ರತ್ಯೇಕ ಪ್ರಣಾಳಿಕೆ ಬಿಡುಗಡೆ ಮಾಡುವ ಬಗ್ಗೆ ಯೋಜಿಸುತ್ತಿದೆ ಎಂದರು.
ಇದನ್ನು ಓದಿ: ಕೊನೆಗೂ ತಾವು ಸ್ಪರ್ಧಿಸುವ ಕ್ಷೇತ್ರ ಘೋಷಿಸಿದ ಸಿದ್ದರಾಮಯ್ಯ, ಕೋಲಾರದಿಂದಲೇ ಕಣಕ್ಕೆ
ಹೆಣ್ಣು ಸಮಾಜದ ಶಕ್ತಿಯಾಗಿದ್ದು, ಅವರ ಸಬಲೀಕರಣಕ್ಕೆ ಈ ಸಮಾವೇಶ ಹಮ್ಮಿಕೊಂಡಿದ್ದೇವೆ. ಈ ಸಮಾವೇಶಕ್ಕೆ ರಾಷ್ಟ್ರೀಯ ನಾಯಕರನ್ನು ಆಹ್ವಾನಿಸಿದ್ದೇವೆ. ಈಗಾಗಲೇ ಸಾವಿರಾರು ಸಲಹೆಗಳು ಬಂದಿವೆ. ಅವುಗಳನ್ನು ಒಂದು ಸಮಿತಿ ಪರಿಶೀಲನೆ ನಡೆಸುತ್ತಿದೆ. ಮಹಿಳೆಯರಿಗೆ ಪಕ್ಷ ನೀಡುವ ಭರವಸೆಗಳನ್ನು ಸಮಾವೇಶದಲ್ಲಿ ಪ್ರಿಯಾಂಕಾ ಗಾಂಧಿ ಘೋಷಣೆ ಮಾಡಲಿದ್ದಾರೆ ಎಂದ ಅವರು ತಿಳಿಸಿದರು.
ಗ್ರಾಮ ಪಂಚಾಯಿತಿ, ಸಹಕಾರ ಸಂಘಗಳಲ್ಲಿ ಸ್ಪರ್ಧಿಸಿದ ಮಹಿಳಾ ನಾಯಕಿಯರು ಈ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ರಾಜ್ಯದ ಮೂಲೆ ಮೂಲೆಗಳಿಂದ ಪ್ರತಿ ಬೂತ್, ಪಂಚಾಯಿತಿಗಳಿಂದ ಕನಿಷ್ಠ 3 ರಿಂದ 10 ಹೆಣ್ಣು ಮಕ್ಕಳು ಭಾಗವಹಿಸಬೇಕು ಎಂದು ಡಿಕೆಶಿ ಆಹ್ವಾನ ನೀಡಿದರು.