ಜೆಡಿಎಸ್​​ ಮತ್ತೊಂದು ವಿಕೆಟ್ ಪತನ: ಡಿಕೆ ಶಿವಕುಮಾರ್ ವಿರುದ್ಧ ಸ್ಪರ್ಧಿಸಿದ್ದ ದಳಪತಿ 'ಕೈ' ಗಾಹುತಿ!

ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರ ಸಮರ್ಥ ಎದುರಾಳಿ ಎಂದೇ ಪರಿಗಣಿತವಾಗಿದ್ದ ಜೆಡಿಎಸ್‌ನ ಡಿ ಎಂ ವಿಶ್ವನಾಥ್ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.
ವಿಶ್ವನಾಥ್ ಮತ್ತು ಡಿಕೆ ಶಿವಕುಮಾರ್
ವಿಶ್ವನಾಥ್ ಮತ್ತು ಡಿಕೆ ಶಿವಕುಮಾರ್

ಕನಕಪುರ: ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರ ಸಮರ್ಥ ಎದುರಾಳಿ ಎಂದೇ ಪರಿಗಣಿತವಾಗಿದ್ದ ಜೆಡಿಎಸ್‌ನ ಡಿ ಎಂ ವಿಶ್ವನಾಥ್ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.

ಕರ್ನಾಟಕ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆಯೇ ರಾಜ್ಯ ರಾಜಕಾರಣದಲ್ಲಿ ಪಕ್ಷಾಂತರ ಪರ್ವ ಶುರುವಾಗಿದೆ. ವೈ.ಎಸ್​.ವಿ ದತ್ತಾ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರುವುದಾಗಿ ಪ್ರಕಟಿಸಿದ ಬೆನ್ನಲ್ಲೇ ಇದೀಗ ಜೆಡಿಎಸ್​ನ ಮತ್ತೊಂದು ಪ್ರಮುಖ ವಿಕೆಟ್ ಪತನವಾಗಿದೆ.  ರಾಮನಗರ ಜಿಲ್ಲೆಯ ಜೆಡಿಎಸ್​ನ ಪ್ರಭಾವಿ ನಾಯಕ, 2008ರಲ್ಲಿ ಕನಕಪುರ ಕ್ಷೇತ್ರದಿಂದ ಸ್ಪರ್ಧಿಸಿದ್ದ ದೂಂತೂರು ವಿಶ್ವನಾಥ್​, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್  ಸೇರಿದ್ದಾರೆ.

2008ರ ಚುನಾವಣೆಯಲ್ಲಿ ಡಿ ಕೆ ಶಿವಕುಮಾರ್ ಅವರೆದುರು ಜೆಡಿಎಸ್ ಅಭ್ಯರ್ಥಿಯಾಗಿದ್ದ ವಿಶ್ವನಾಥ್, ಕೇವಲ ಎಂಟು ಸಾವಿರ ಮತಗಳ ಅಂತರದಿಂದ ಪರಾಜಯಗೊಂಡಿದ್ದರು. ಅತಿ ಕಡಿಮೆ ಮತಗಳ ಅಂತರದಲ್ಲಿ ಸೋಲನ್ನಪ್ಪಿದ ಕಾರಣ ಹಾಗೂ ವಿಶ್ವನಾಥ್ ಅವರ ಪರವಿದ್ದ ಜನರ ಒಲವಿನ ಹಿನ್ನೆಲೆ ಪರಿಗಣಿಸಿ ಮುಂದಿನ ಚುನಾವಣೆಗಳಲ್ಲಿ ಡಿ ಕೆ ಶಿವಕುಮಾರ್ ಅವರಿಗೆ ಸಮರ್ಥ ಎದುರಾಳಿಯಾಗುವ ಭರವಸೆಯನ್ನು ವಿಶ್ವನಾಥ್ ಮೂಡಿಸಿದ್ದರು. ಆದರೆ ಬದಲಾದ ಪರಿಸ್ಥಿತಿಗಳಿಂದ ಡಿ ಎಂ ವಿಶ್ವನಾಥ್ ಈಗ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.

ವಿಶ್ವನಾಥ್ ಕಾಂಗ್ರೆಸ್ ಸೇರ್ಪಡೆ ಬಳಿ ಮಾತನಾಡಿದ ಡಿಕೆ ಶಿವಕುಮಾರ್, ಕನಕಪುರ ಕ್ಷೇತ್ರದಲ್ಲಿ ನನ್ನ ವಿರುದ್ಧ ಸ್ಪರ್ಧೆ ಮಾಡಿ ಕೇವಲ 7 ಸಾವಿರ ಅಂತರದಿಂದ ಸೋಲು ಅನುಭಸಿದ್ದರು. ವಿಶ್ವನಾಥ್ ತಂದೆ, ಅವರ ತಾತ ನನ್ನ ಪರ ಚುನಾವಣೆ ಪ್ರಚಾರ ಮಾಡಿದ್ದಾರೆ. ಆದರೆ ಜೆಡಿಎಸ್​ನಲ್ಲಿ ನಾಯಕತ್ವ ಬೆಳೆಸಿಕೊಳ್ಳಲು ಹೋಗಿದ್ದರು. ಆದರೆ ಈ ರಾಜ್ಯ, ನಮ್ಮ ಜಿಲ್ಲೆ ಹಾಗೂ ಕ್ಷೇತ್ರವನ್ನು ಗಮನದಲ್ಲಿಟ್ಟುಕೊಂಡು ಕಾಂಗ್ರೆಸ್ ಪಕ್ಷಕ್ಕೆ ಮರಳಿ ಸೇರಿದ್ದಾರೆ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com