ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಳ: ನಾಗಮೋಹನದಾಸ ವರದಿ ಜಾರಿಗೆ ಸರ್ಕಾರಕ್ಕೆ ಗಡುವು ನೀಡಿದ ಕಾಂಗ್ರೆಸ್

ನಾಗಮೋಹನ ದಾಸ ವರದಿ ಜಾರಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಜನವರಿ 30ರ ಒಳಗಾಗಿ ಸಂವಿಧಾನದ 9ನೇ ಸೆಡ್ಯೂಲ್'ಗೆ ಸೇರ್ಪಡೆ  ಮಾಡದಿದ್ದರೆ ರಾಜ್ಯ ವ್ಯಾಪಿ ಹೋರಾಟ ಕೈಗೆತ್ತಿಕೊಳ್ಳಲಾಗುತ್ತದೆ ಎಂದು ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ.
ಡಿಕೆ.ಶಿವಕುಮಾರ್ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ.
ಡಿಕೆ.ಶಿವಕುಮಾರ್ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ.

ಚಿತ್ರದುರ್ಗ: ನಾಗಮೋಹನ ದಾಸ ವರದಿ ಜಾರಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಜನವರಿ 30ರ ಒಳಗಾಗಿ ಸಂವಿಧಾನದ 9ನೇ ಸೆಡ್ಯೂಲ್'ಗೆ ಸೇರ್ಪಡೆ  ಮಾಡದಿದ್ದರೆ ರಾಜ್ಯ ವ್ಯಾಪಿ ಹೋರಾಟ ಕೈಗೆತ್ತಿಕೊಳ್ಳಲಾಗುತ್ತದೆ ಎಂದು ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ.

ಇಲ್ಲಿ ನಡೆದ ಎಸ್‌ಸಿ/ಎಸ್‌ಟಿ ಸಮಾವೇಶದಲ್ಲಿ ಮಾತನಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು, ಕೇಂದ್ರ ಸರ್ಕಾರವು ಸಂವಿಧಾನದ ಒಂಬತ್ತನೇ ಶೆಡ್ಯೂಲ್‌ಗೆ ಅಗತ್ಯ ಮಾರ್ಪಾಡುಗಳನ್ನು ತರಬೇಕು, ಎಸ್‌ಸಿಗಳಿಗೆ ಶೇ.15 ರಿಂದ 17 ರವರೆಗೆ ಮತ್ತು ಎಸ್‌ಟಿಗಳಿಗೆ ಶೇ.3 ರಿಂದ 7 ರವರೆಗೆ ಮೀಸಲಾತಿಯನ್ನು ಹೆಚ್ಚಿಸಬೇಕು ಎಂದು ಆಗ್ರಹಿಸಿದರು.

ನ್ಯಾ.ನಾಗಮೋಹನ್ ದಾಸ್ ಸಮಿತಿಯ ಶಿಫಾರಸುಗಳನ್ನು ಅನುಷ್ಠಾನಗೊಳಿಸುವಲ್ಲಿ ಆಗುತ್ತಿರುವ ವಿಳಂಬದ ಬಗ್ಗೆ ಬಿಜೆಪಿಯನ್ನು ಪ್ರಶ್ನಿಸಿದ ಅವರು, 2020 ರಲ್ಲಿ ವರದಿ ಸಲ್ಲಿಸಿದ 2 ವರ್ಷಗಳ 10 ತಿಂಗಳ ನಂತರ ಸರ್ಕಾರ ಈ ಘೋಷಣೆ ಮಾಡಿದೆ. ತುಳಿತಕ್ಕೊಳಗಾದ ವರ್ಗಗಳಿಗೆ ಮಾತ್ರ ನೀಡಬೇಕು ಎಂದು ಹೇಳಿದರು.

ಕೇಂದ್ರದ ಮಾಜಿ ರಾಜ್ಯ ಸಚಿವ ಅನಂತಕುಮಾರ್ ಹೆಗಡೆ ಅವಕು. ಬಿಜೆಪಿ ಅಧಿಕಾರಕ್ಕೆ ಬಂದಿರುವುದು ಸಂವಿಧಾನವನ್ನು ಬದಲಾಯಿಸಲು ಎಂದು ಹೇಳಿದ್ದಾರೆ. ಈ ಹೇಳಿಕೆ ನೀಡಿದ್ದರೂ ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಮೌನವಾಗಿದ್ದಾರೆಂದು ತಿಳಿಸಿದರು.

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಮಾತನಾಡಿ, ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ 136 ಸ್ಥಾನಗಳನ್ನು ಗೆಲ್ಲುವ ವಿಶ್ವಾಸವಿದೆ ಎಂದು ಹೇಳಿದರು. ಕರ್ನಾಟಕ ಮತ್ತು ರಾಷ್ಟ್ರಮಟ್ಟದಲ್ಲಿ ಕಾಂಗ್ರೆಸ್ ಸರ್ಕಾರ ರಚನೆಗೆ ಪ್ರತಿಜ್ಞೆ ಮಾಡುವಂತೆ ಸಾರ್ವಜನಿಕರಲ್ಲಿ ವಿನಂತಿಸಿದರು.

ಗ್ರಾಮ ಮತ್ತು ಬೂತ್ ಮಟ್ಟದಲ್ಲಿ ಪಕ್ಷ ಪ್ರಬಲವಾಗಿದೆ ಮತ್ತು ಚಿತ್ರದುರ್ಗದಲ್ಲಿ 10 ಘೋಷಣೆಗಳನ್ನು ಅಳವಡಿಸಿಕೊಳ್ಳಲಾಗಿದೆ. ಎಸ್‌ಸಿ/ಎಸ್‌ಟಿ ಸಮುದಾಯದ ಉನ್ನತಿಗಾಗಿ ನಾವು ಬದ್ಧರಾಗಿದ್ದೇವೆ ಎಂದು ತಿಳಿಸಿದರು.

ಇದೇ ವೇಳೆ ಸಂವಿಧಾನವನ್ನು ರಕ್ಷಿಸಲು ಸಮಾಜಕ್ಕೆ ಕರೆ ನೀಡಿದ ಅವರು, ಬಿಜೆಪಿ ಭಾವನಾತ್ಮಕ ವಿಷಯಗಳ ಮೇಲೆ ಆಟವಾಡುತ್ತಿದೆ, ಆದರೆ ಕಾಂಗ್ರೆಸ್ ಸಮಾನತೆ ಇರುವ ಬಲಿಷ್ಠ ದೇಶವನ್ನು ನಿರ್ಮಿಸಲು ಬಯಸುತ್ತದೆ. ಬಿಜೆಪಿಯವರ ಸುಳ್ಳಿಗೆ ಮರುಳಾಗಬೇಡಿ. ಅವರು ಯಾವುದೇ ಭರವಸೆಗಳನ್ನು ಈಡೇರಿಸಿಲ್ಲ. ಮೀಸಲಾತಿ ವಿಚಾರದಲ್ಲಿ ಬಿಜೆಪಿ ದಾರಿ ತಪ್ಪಿಸಿ ಗೊಂದಲ ಸೃಷ್ಟಿಸುತ್ತಿದೆ ಎಂದು ಆರೋಪಿಸಿದರು.

ರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆಯ ಯಶಸ್ಸನ್ನು ಸ್ಮರಿಸಿದ ಅವರು, ಮೇಕೆದಾಟು ಪಾದಯಾತ್ರೆ, ಸಿದ್ದರಾಮಯ್ಯನವರ 75 ವರ್ಷಗಳ ನಡಿಗೆ, ಮಹದಾಯಿ, ಕೃಷ್ಣಾ ಜಲ ಹೋರಾಟ ಮತ್ತು ಐಕ್ಯತಾ ಸಮಾವೇಶದ ಇತರ ಪಕ್ಷದ ರ್ಯಾಲಿಗಳ ಬಗ್ಗೆಯೂ ಮಾತನಾಡಿದರು.

ಕರ್ನಾಟಕದಲ್ಲಿ ಮಹಿಳಾ ಶಕ್ತಿಯನ್ನು ಬಲಪಡಿಸಲು ಕಾಂಗ್ರೆಸ್ ಕಾರ್ಯಕ್ರಮವನ್ನು ಆಯೋಜಿಸುತ್ತಿದ್ದು, ಪ್ರತಿ ಪಂಚಾಯಿತಿಯಿಂದ ಇಬ್ಬರು ಮಹಿಳೆಯರನ್ನು ಆಯ್ಕೆ ಮಾಡಲಾಗುತ್ತದೆ. ಮಹಿಳೆಯರಿಗಾಗಿ ಪ್ರತ್ಯೇಕ ಪ್ರಣಾಳಿಕೆಯನ್ನು ರಚಿಸುವಾಗ ಚರ್ಚೆಗಳನ್ನು ಆಹ್ವಾನಿಸಲಾಗುವುದು ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com