ಕೋಲಾರದಲ್ಲಿ ಸಿದ್ದರಾಮಯ್ಯಗೆ ಸೋಲು ಖಚಿತ: ಜೆಡಿಎಸ್, ಬಿಜೆಪಿ ನಾಯಕರು

ಕೋಲಾರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಘೋಷಿಸಿದ್ದು, ಸರಿಯಾದ ಸಮೀಕ್ಷೆ ನಡೆಸದೆಯೇ ಕ್ಷೇತ್ರ ಆಯ್ಕೆ ಮಾಡಿಕೊಂಡಿದ್ದಾರೆ, ಈ ನಿರ್ಧಾರ ಸರಿಯಲ್ಲ. ಕ್ಷೇತ್ರ ಆಯ್ಕೆಯಲ್ಲಿ ಸಿದ್ದರಾಮಯ್ಯ ಎಡವಿದ್ದು, ಕೈಸುಟ್ಟುಕೊಳ್ಳಳಿದ್ದಾರೆಂದು ಜೆಡಿಎಸ್ ಅಭ್ಯರ್ಥಿ ಸಿಎಂಆರ್‌ ಶ್ರೀನಾಥ್‌ ಅವರು ಹೇಳಿದ್ದಾರೆ.
ಸಿದ್ದರಾಮಯ್ಯ
ಸಿದ್ದರಾಮಯ್ಯ

ಕೋಲಾರ: ಕೋಲಾರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಘೋಷಿಸಿದ್ದು, ಸರಿಯಾದ ಸಮೀಕ್ಷೆ ನಡೆಸದೆಯೇ ಕ್ಷೇತ್ರ ಆಯ್ಕೆ ಮಾಡಿಕೊಂಡಿದ್ದಾರೆ, ಈ ನಿರ್ಧಾರ ಸರಿಯಲ್ಲ. ಕ್ಷೇತ್ರ ಆಯ್ಕೆಯಲ್ಲಿ ಸಿದ್ದರಾಮಯ್ಯ ಎಡವಿದ್ದು, ಕೈಸುಟ್ಟುಕೊಳ್ಳಳಿದ್ದಾರೆಂದು ಜೆಡಿಎಸ್ ಅಭ್ಯರ್ಥಿ ಸಿಎಂಆರ್‌ ಶ್ರೀನಾಥ್‌ ಅವರು ಹೇಳಿದ್ದಾರೆ.

ಕಳೆದ ಹಲವಾರು ವರ್ಷಗಳಿಂದ ಕ್ಷೇತ್ರದಲ್ಲಿ ಶ್ರಮಿಸುತ್ತಿದ್ದೇನೆ. 2018ರ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಕೆ.ಶ್ರೀನಿವಾಸಗೌಡ ಅವರು ಭರ್ಜರಿ ಬಹುಮತದಿಂದ ಗೆಲುವು ಸಾಧಿಸಿದ್ದರು. ಈ ಗೆಲವು ಪಕ್ಷದ ಅಸ್ಮಿತೆಯಿಂದ ಲಭಿಸಿತ್ತೇ ಹೊರತು ಕ್ಷೇತ್ರದಲ್ಲಿ ಅವರ ಕೆಲಸದಿಂದ ಲಭಿಸಿರಲಿಲ್ಲ. ಈ ಚುನಾವಣೆಯಲ್ಲೂ ಸ್ಥಳೀಯ ಅಭ್ಯರ್ಥಿಯನ್ನೇ ಜನರು ಆಯ್ಕೆ ಮಾಡುತ್ತಾರೆಂದು ಹೇಳಿದ್ದಾರೆ.

ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನೀಡಿದ ಉತ್ತಮ ಆಡಳಿತ ನನಗೆ ಅನುಕೂಲ ಮಾಡಿಕೊಡಲಿದೆ ಎಂದು ತಿಳಿಸಿದ್ದಾರೆ.

ಕೋಲಾರದಿಂದ ಎರಡು ಬಾರಿ ಗೆದ್ದಿರುವ ಬಿಜೆಪಿ ಮುಖಂಡ ವರ್ತೂರು ಪ್ರಕಾಶ್ ಮಾತನಾಡಿ, ಕಳೆದ ಲೋಕಸಭಾ ಚುನಾವಣೆಯಲ್ಲಿ ಕೋಲಾರದಲ್ಲಿ ಸೋತಿದ್ದ ಕಾಂಗ್ರೆಸ್‌ನ ಮಾಜಿ ಸಂಸದ ಕೆ.ಎಚ್.ಮುನಿಯಪ್ಪ ಅವರ ಭವಿಷ್ಯವೇ ಸಿದ್ದರಾಮಯ್ಯ ಅವರಿಗೆ ಎದುರಾಗಲಿದೆ. ''ಕಾಂಗ್ರೆಸ್ ನಾಯಕರು ಸಿದ್ದರಾಮಯ್ಯ ಅವರಿಗೆ ತಪ್ಪು ಮಾಹಿತಿ ರವಾನಿಸಿದ್ದಾರೆ, ಕೋಲಾರದಲ್ಲಿ ಸಿದ್ದರಾಮಯ್ಯ ಅವರಿಗೆ ಸೋಲು ಖಚಿತ ಎಂದು ಹೇಳಿದ್ದಾರೆ.

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್‌ನಲ್ಲಿ ಸ್ಪರ್ಧಿಸಿ ಸೋತಿದ್ದ ಬಿಜೆಪಿ ಟಿಕೆಟ್‌ ಆಕಾಂಕ್ಷಿ ಓಂ ಶಕ್ತಿ ಚಲಪತಿ ಅವರು ಮಾತನಾಡಿ, ಕ್ಷೇತ್ರದಲ್ಲಿ ಬಿಜೆಪಿಗೆ ಉತ್ತಮ ಹಿಡಿತವಿದೆ, ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯ ಯಶಸ್ಸಿನಿಂದ ಇದು ಸಾಬೀತಾಗಿದೆ ಎಂದಿದ್ದಾರೆ.

ಕೋಲಾರ ಕ್ಷೇತ್ರಕ್ಕೂ ಸಿದ್ದರಾಮಯ್ಯ ಅವರಿಗೂ ಯಾವುದೇ ರೀತಿಯ ಸಂಬಂಧವಿಲ್ಲ, ಹೀಗಾಗಿ ಎಲ್ಲ ಸಮುದಾಯಗಳು ಸಿದ್ದರಾಮಯ್ಯ ಅವರನ್ನು ಬೆಂಬಲಿಸುವುದಿಲ್ಲ. ಸಿದ್ದರಾಮಯ್ಯ ಕ್ಷೇತ್ರ ಆಯ್ಕೆ ಮಾಡಿಕೊಳ್ಳುವಲ್ಲಿ ಎಡವಿದ್ದಾರೆ. ಸಿದ್ದರಾಮಯ್ಯ ಅವರಿಗೆ ಪಂಚಾಯಿತಿ ನಾಯಕರ ಪರಿಚಯ ಇಲ್ಲದಿರುವುದರಿಂದ ಮತದಾರರನ್ನು ಒಲಿಸಿಕೊಳ್ಳಲು ಸಾಧ್ಯವಾಗುತ್ತಿವ್ವ ಎಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com