ಸ್ಯಾಂಟ್ರೋ ರವಿಯೊಂದಿಗೆ ರಾಜಕಾರಣಿಗಳ ನಂಟು: ತನಿಖೆ ನಡೆಸುವಂತೆ ಸರ್ಕಾರಕ್ಕೆ ಕೆಪಿಸಿಸಿ ಆಗ್ರಹ

ಸ್ಯಾಂಟ್ರೋ ರವಿ ಜೊತೆಗೆ ರಾಜಕಾರಣಿಗಳು ಹಾಗೂ ಅಧಿಕಾರಿಗಳು ನಂಟು ಹೊಂದಿದ್ದು, ಈ ಬಗ್ಗೆ ತನಿಖೆ ನಡೆಸುವಂತೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಬುಧವಾರ ಸರ್ಕಾರಕ್ಕೆ ಆಗ್ರಹಿಸಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಹಾಸನ: ಸ್ಯಾಂಟ್ರೋ ರವಿ ಜೊತೆಗೆ ರಾಜಕಾರಣಿಗಳು ಹಾಗೂ ಅಧಿಕಾರಿಗಳು ನಂಟು ಹೊಂದಿದ್ದು, ಈ ಬಗ್ಗೆ ತನಿಖೆ ನಡೆಸುವಂತೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಬುಧವಾರ ಸರ್ಕಾರಕ್ಕೆ ಆಗ್ರಹಿಸಿದೆ.

ಈ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿದ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಕಾರ್ಯಾಧ್ಯಕ್ಷ ದ್ರುವನಾರಾಯಣ್‌ ಅವರು, ಸ್ಯಾಂಟ್ರೋ ರವಿ ನಡುವೆ ಹಲವು ಪ್ರಕರಣಗಳಿದ್ದು, ಈತನೊಂದಿಗೆ ಹಲವು ಅಧಿಕಾರಿಗಳು ಹಾಗೂ ರಾಜಕಾರಣಿಗಳು ನಂಟು ಹೊಂದಿದ್ದಾರೆ. ಈ ಸಂಬಂಧ ಹಾಲಿ ಹೈಕೋರ್ಟ್‌ನ ನ್ಯಾಯಾಧೀಶರಿಂದ ರಾಜ್ಯ ಸರ್ಕಾರ ತನಿಖೆಗೆ ಆದೇಶಿಸಬೇಕು ಎಂದು ಒತ್ತಾಯಿಸಿದ್ದಾರೆ.

ಅನಗತ್ಯ ವಿಷಯಗಳನ್ನು ಬಿತ್ತರಿಸುವ ಮೂಲಕ ಸರ್ಕಾರ ಸಮಸ್ಯೆ ಮುಚ್ಚಿ ಹಾಕುವ ಪ್ರಯತ್ನ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.

ಬಳಿಕ ಪ್ರಜಾಧ್ವನಿ ಜಂಟಿ ಯಾತ್ರೆ ಕುರಿತು ಮಾತನಾಡಿ, ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ನೇತೃತ್ವದ ಬಸ್ ಯಾತ್ರೆ ಜನವರಿ 21 ರಂದು ಹಾಸನ ಜಿಲ್ಲೆಗೆ ಭೇಟಿ ನೀಡಲಿದೆ ಎಂದು ಮಾಹಿತಿ ನೀಡಿದರು.

ಬಿಜೆಪಿ ಮತ್ತು ಜೆಡಿಎಸ್‌ನ ನಾಯಕರು ಕಾಂಗ್ರೆಸ್‌ಗೆ ಸೇರ್ಪಡೆಗೊಳ್ಳುವ ಸಮಾವೇಶದಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಜನರು ಸೇರುವ ಸಾಧ್ಯತೆಯಿದೆ. ಅರಸೀಕೆರೆ ಜೆಡಿಎಸ್ ಶಾಸಕ ಕೆ.ಎಂ.ಶಿವಲಿಂಗೇಗೌಡ ಅವರು ಕಾಂಗ್ರೆಸ್ ಸೇರುವ ಇಚ್ಛೆ ವ್ಯಕ್ತಪಡಿಸಿದ್ದು, ಈ ಬಗ್ಗೆ ಕಾಂಗ್ರೆಸ್ ಹಿರಿಯ ನಾಯಕರ ಜತೆ ಚರ್ಚಿಸಿದ್ದಾರೆಂದು ತಿಳಿಸಿದರು.

ಜನವರಿ 21 ರಂದು ಹಾಸನಕ್ಕೆ ಭೇಟಿ ನೀಡುತ್ತಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರ ಸಮ್ಮುಖದಲ್ಲಿ ಕೆ.ಎಂ.ಶಿವಲಿಂಗೇಗೌಡ ಕಾಂಗ್ರೆಸ್'ಗೆ ಸೇರ್ಪಡೆಗೊಳ್ಳಲಿದ್ದಾರೆಂದು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com