ಸ್ಯಾಂಟ್ರೋ ರವಿಯನ್ನು ಪುಣೆಯಿಂದ ಗುಜರಾತ್ ಗೆ ಕರೆಸಿದವರು ಯಾರೆಂಬುದು ಬಹಿರಂಗವಾಗಬೇಕು: ಕುಮಾರಸ್ವಾಮಿ

ರಾಜ್ಯ ವಿಧಾನಸಭಾ ಚುನಾವಣೆ ಸನ್ನಿಹದಲ್ಲಿರುವಂತೆಯೇ 'ಸ್ಯಾಂಟ್ರೋ ರವಿ ಕೇಸ್' ಪ್ರತಿಪಕ್ಷಗಳಿಗೆ ಹೊಸ ಅಸ್ತ್ರ ಸಿಕ್ಕಂತಾಗಿದೆ. ಸ್ಯಾಂಟ್ರೋ ರವಿಯ ಅನೈತಿಕತೆಯ ಧಂದೆ, ವರ್ಗಾವಣೆ ವಿಚಾರವನ್ನು ಮುಂದಿಟ್ಟುಕೊಂಡು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಿವೆ.
ಎಚ್ ಡಿ ಕುಮಾರಸ್ವಾಮಿ
ಎಚ್ ಡಿ ಕುಮಾರಸ್ವಾಮಿ

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ ಸನ್ನಿಹದಲ್ಲಿರುವಂತೆಯೇ 'ಸ್ಯಾಂಟ್ರೋ ರವಿ ಕೇಸ್' ಪ್ರತಿಪಕ್ಷಗಳಿಗೆ ಹೊಸ ಅಸ್ತ್ರ ಸಿಕ್ಕಂತಾಗಿದೆ. ಸ್ಯಾಂಟ್ರೋ ರವಿಯ ಅನೈತಿಕತೆಯ ಧಂದೆ, ವರ್ಗಾವಣೆ ವಿಚಾರವನ್ನು ಮುಂದಿಟ್ಟುಕೊಂಡು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಿವೆ.

ಅದರಲ್ಲೂ ಸ್ಯಾಂಟ್ರೋ ರವಿ ವಿಚಾರವನ್ನು  ರಾಜ್ಯದಲ್ಲಿ ಮೊದಲ ಬಾರಿಗೆ ಬಯಲು ಮಾಡಿದ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ, ಪ್ರತಿದಿನ ಒಂದೊಂದು ಹೊಸ ಮಾಹಿತಿಯನ್ನು ಬಹಿರಂಗ ಮಾಡುತ್ತಿದ್ದಾರೆ.

ಪ್ರೆಸ್ ಕ್ಲಬ್ ನಲ್ಲಿ ಶನಿವಾರ ಮಾಧ್ಯಮ ಸಂವಾದದಲ್ಲಿ ಮಾತನಾಡಿದ ಅವರು, ರಾಜ್ಯದಿಂದ ಪರಾರಿಯಾಗಿದ್ದ ಸ್ಯಾಂಟ್ರೋ ರವಿಯನ್ನು ಪುಣೆಯಿಂದ ಗುಜರಾತ್ ಗೆ ಕರೆಸಿಕೊಳ್ಳಲಾಗಿದೆ. ಅಲ್ಲಿ ಆತನನ್ನು ಬಂಧಿಸುವ ಪ್ರಕ್ರಿಯೆ ನಡೆದಿದೆ. ಅಲ್ಲಿಗೆ ಆತನನ್ನು ಕರೆದುಕೊಂಡು ಬಂದವರು ಯಾರು ಎಂಬುದು ಬಹಿರಂಗವಾಗಬೇಕು ಎಂದರು. 

ಗುಜರಾತ್ ನಲ್ಲಿ ಸ್ಯಾಂಟ್ರೋ ರವಿ ಬಂಧನಕ್ಕೂ ಮುನ್ನ ಆತನಿಗೆ ಏನೋ ಆಶ್ವಾಸನೆ ನೀಡಲಾಗಿದೆ. ಆತನ ಬಂಧನಕ್ಕೂ ಮುನ್ನ ಗೃಹ ಸಚಿವರು ಅಲ್ಲಿಗೆ ಏಕೆ ಹೋಗಿದ್ದರು? ಅವರ ಭೇಟಿಯ ಬಗ್ಗೆ ಅನುಮಾನಗಳಿವೆ. ಗುಜರಾತ್‌ನಲ್ಲೂ ಬಿಜೆಪಿ ಸರ್ಕಾರವಿದೆ. ಬಿಜೆಪಿಯವರು ಏನು ಬೇಕಾದರೂ ಮಾಡುತ್ತಾರೆ ಎಂದರು.

ಸ್ಯಾಂಟ್ರೊ ರವಿಯನ್ನು ಗುಜರಾತ್‌ನಿಂದ ರಾಜ್ಯಕ್ಕೆ ಕರೆತಂದ ಪೊಲೀಸರು  ಮಾಧ್ಯಮಗಳ ಕಣ್ತಪ್ಪಿಸಿ ರಾಜಾತಿಥ್ಯ ಕೊಟ್ಟು ಅಜ್ಞಾತ ಸ್ಥಳಕ್ಕೆ ಕರೆದೊಯ್ದಿದ್ದಾರೆ. ವಿಐಪಿ ಗೇಟ್ ಮೂಲಕ ಸ್ಯಾಂಟ್ರೊ ರವಿಯನ್ನು ಎಲ್ಲರ ಕಣ್ತಪ್ಪಿಸಿ ಕರೆತಂದದ್ದು ಏಕೆ. ವಿಐಪಿ ಗೇಟ್ ಇರುವುದು ಪ್ರಧಾನಿ, ಮುಖ್ಯಮಂತ್ರಿಗಳಿಗೆ ಮಾತ್ರ , ಒಬ್ಬ ಕ್ರಿಮಿನಲ್ ಹಿನ್ನೆಲೆಯ ವ್ಯಕ್ತಿಗೆ ಇಷ್ಟೊಂದೆಲ್ಲ ರಾಜಾತಿಥ್ಯ ಏಕೆ? ಎಂದು ಪ್ರಶ್ನಿಸಿದ ಕುಮಾರಸ್ವಾಮಿ, ಸ್ಯಾಂಟ್ರೊ ರವಿಯನ್ನು ಬಂಧಿಸಿ ಕರೆತಂದಿರುವುದು ಪ್ರಕರಣವನ್ನು ಮುಚ್ಚಿಹಾಕಲು ಎಂದರು.

ಸ್ಯಾಂಟ್ರೊ ರವಿ ರಾಜ್ಯದಿಂದ ಪರಾರಿಯಾಗಲು ಮೈಸೂರು ಪೊಲೀಸರು ಸಹಾಯ ಮಾಡಿದ್ದಾರೆ. ರಾಜ್ಯಬಿಟ್ಟು ಹೋಗುವವರೆಗೂ ಏನು ಮಾಡುತ್ತಿದ್ದರು. ಪೊಲೀಸ್ ಇಲಾಖೆ ಬದುಕಿದೆಯೇ ಎಂದು ಕುಮಾರಸ್ವಾಮಿ ಕಿಡಿಕಾರಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com