ಬೈಗುಳದಿಂದ ಮುಜುಗರ: ತಮ್ಮ ವಿರುದ್ಧ ಹೇಳಿಕೆ ನೀಡದಂತೆ ಯತ್ನಾಳ್'ಗೆ ನಿರಾಣಿ, ಸಿಸಿ ಪಾಟೀಲ್ ಎಚ್ಚರಿಕೆ

ಪಂಚಮಸಾಲಿ ಲಿಂಗಾಯತರಿಗೆ 2ಎ ಮೀಸಲಾತಿ ವಿಚಾರದಲ್ಲಿ ತಮ್ಮ ಹಾಗೂ ಸಿಎಂ ಬೊಮ್ಮಾಯಿ ವಿರುದ್ಧ ಕೆಟ್ಟದಾಗಿ ಹೇಳಿಕೆ ನೀಡದಂತೆ ಕೈಗಾರಿಕಾ ಸಚಿವ ಮುರಗೇಶ್ ನಿರಾಣಿ ಮತ್ತು ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ್ ಅವರು ಕೇಂದ್ರದ ಮಾಜಿ ಸಚಿವ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಶನಿವಾರ ಎಚ್ಚರಿಕೆ ನೀಡಿದ್ದಾರೆ.
ಬಸನಗೌಡ ಪಾಟೀಲ್ ಯತ್ನಾಳ್.
ಬಸನಗೌಡ ಪಾಟೀಲ್ ಯತ್ನಾಳ್.

ಬೆಂಗಳೂರು: ಪಂಚಮಸಾಲಿ ಲಿಂಗಾಯತರಿಗೆ 2ಎ ಮೀಸಲಾತಿ ವಿಚಾರದಲ್ಲಿ ತಮ್ಮ ಹಾಗೂ ಸಿಎಂ ಬೊಮ್ಮಾಯಿ ವಿರುದ್ಧ ಕೆಟ್ಟದಾಗಿ ಹೇಳಿಕೆ ನೀಡದಂತೆ ಕೈಗಾರಿಕಾ ಸಚಿವ ಮುರಗೇಶ್ ನಿರಾಣಿ ಮತ್ತು ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ್ ಅವರು ಕೇಂದ್ರದ ಮಾಜಿ ಸಚಿವ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಶನಿವಾರ ಎಚ್ಚರಿಕೆ ನೀಡಿದ್ದಾರೆ.

ಪಂಚಮಸಾಲಿಗಳಾದ ನಿರಾಣಿ ಮತ್ತು ಪಾಟೀಲ್ ಅವರು ನಿನ್ನೆಯಷ್ಟೇ ಸಿಎಂ ಬೊಮ್ಮಾಯಿ ಅವರ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದರು. ಈ ವೇಳೆ ಯತ್ನಾಳ್ ಅವರ ಕೀಳುಮಟ್ಟದ ಹೇಳಿಕೆ ವಿರುದ್ಧ ತೀವ್ರ ಅಸಮಾಧಾನ ಹೊರಹಾಕಿದರು ಎಂದು ತಿಳಿದುಬಂದಿದೆ.

ಬೊಮ್ಮಾಯಿಯವರ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಯತ್ನಾಳ್ ಅವರು, ಪಿಂಪ್ ಎಂದು ಆರೋಪ ಮಾಡಿದ್ದ ಯತ್ನಾಳ್‍ಗೆ ಏಕವಚನದಲ್ಲಿ ವಾಗ್ದಾಳಿ ನಡೆಸಿದರು.ತಾಕತ್ತ್ ಇದ್ದರೆ ಕೊರ್ಟ್‍ನಲ್ಲಿರೋ ಸ್ಟೇ ತೆರವು ಮಾಡಲು ಸವಾಲು ಹಾಕಿದರು.

ಯತ್ನಾಳ್ ಗೆ ಪಕ್ಷದಲ್ಲಿ ಇರುವುದು ಇಷ್ಟ ಇಲ್ಲದೇ ಇದ್ದರೆ ಬಿಟ್ಟು ಹೋಗಲಿ. ಯತ್ನಾಳ್ ಯಾರಿಗೆ ಬಿಟ್ಟಿದ್ದಾರೆ, ಎಲ್ಲರ ಬಗ್ಗೆ ಹಗರುವಾಗಿ ಮಾತನಾಡುತ್ತಲೇ ಇದ್ದಾರೆ. ಯಡಿಯೂರಪ್ಪ, ಶೋಭಾ ಕರಂದ್ಲಾಜೆ, ಬೊಮ್ಮಾಯಿ, ಶೆಟ್ಟರ್, ಸೋಮಣ್ಣ ಹೀಗೆ ಎಲ್ಲರ ಮೇಲೂ ಮಾತಾಡಿದ್ದಾರೆ. ನಂತರ ನ್ಯಾಯಾಲಯಕ್ಕೆ ಹೋಗಿ ಕೈಕಾಲು ಹಿಡಿದು ಬಂದಿದ್ದಾರೆ ಎಂದು ಕಿಡಿಕಾರಿದರು.

ನಾನಾಗಿಯೇ ಯತ್ನಾಳ್ ವಿರುದ್ದ ವಾಗ್ದಾಳಿ ಮಾಡಿಲ್ಲ. ಅವರು ನೀಡಿದ ಹೇಳಿಕೆಗೆ ಉತ್ತರ ಕೊಟ್ಟಿದ್ದೇನೆ. ಅವರನ್ನ ಸಹಿಸಿಕೊಂಡಿದ್ದು ಆಗಿದೆ. ಈಗ ನಿರ್ಧಾರ ತೆಗೆದುಕೊಳ್ಳುತ್ತಿದ್ದೇವೆ. ಜೆಡಿಎಸ್ ಗೆ ಹೋಗಿ ಮುಸ್ಲಿಂ ಟೋಪಿ ಹಾಕಿದ್ದು ಎಲ್ಲರಿಗೂ ಗೊತ್ತಿದೆ. ಡೋಂಗಿ ರಾಜಕಾರಣ ಮಾಡುತ್ತಿದ್ದಾರೆ, ನಾವು ಘಟಪ್ರಭ ಮಲಪ್ರಭಾ ನೀರು ಕುಡಿದೇ ಬೆಳದಿದ್ದೇವೆ. ನಮಗೂ ಮಾತನಾಡುವುದಕ್ಕೆ ಬರುತ್ತದೆ, ಸುಮ್ಮನೆ ಇದ್ದೀವಿ ಅಂದರೆ ದೌರ್ಬಲ್ಯ ಅಲ್ಲ. ಯತ್ನಾಳ್ ಏನೂ ಸತ್ಯ ಹರಿಶ್ಚಂದ್ರ ಅಲ್ಲ, ದೊಡ್ಡ ಸಮಾಜದಲ್ಲಿ ಹುಟ್ಟಿದ್ದೀರಿ ಗೌರವದಿಂದ ಮಾತಾಡಿ ಎಂದು ಹೇಳಿದರು.

ಜಯಮೃತ್ಯುಂಜಯ ಸ್ವಾಮೀಜಿ ರಾಜಕೀಯ ಮಾಡುತ್ತಿದ್ದಾರೆ. ಇದರಲ್ಲಿ ಎರಡು ಮಾತಿಲ್ಲ. ಕಾಂಗ್ರೆಸ್ ಸರ್ಕಾರ ಇದ್ದಾಗ ಅಂದಿನ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕಾಂತರಾಜ 2ಎ ಮೀಸಲಾತಿ ನಿರಾಕರಿಸಿದ್ದರು. ಆಗ ಈ ಸ್ವಾಮೀಜಿ ಏನು ಮಾಡುತ್ತಿದ್ದರು? ಈಗ ನಾವು ಹಂತ ಹಂತವಾಗಿ ಮೀಸಲಾತಿ ಬಗ್ಗೆ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತಿದೆ. ಆದ್ರೆ ಸ್ವಾಮೀಜಿ ರಾಜಕೀಯ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com