ರಾಜ್ಯ ಬಿಜೆಪಿ ಸರ್ಕಾರ ಭ್ರಷ್ಟಾಚಾರದಿಂದ 1.5 ಲಕ್ಷ ಕೋಟಿ ರೂ. ಲೂಟಿ: ಪ್ರಿಯಾಂಕಾ ಗಾಂಧಿ ವಾದ್ರಾ ಆರೋಪ
ಬಿಜೆಪಿ ಸರ್ಕಾರವಿರುವ ಕರ್ನಾಟಕದಲ್ಲಿ ಪರಿಸ್ಥಿತಿ ತೀವ್ರ ಹದಗೆಟ್ಟಿರುವುದಾಗಿ ಕೇಳಿದ್ದು, ಭ್ರಷ್ಟಾಚಾರ ಮೂಲಕ ರೂ. 1. 5 ಲಕ್ಷ ಕೋಟಿ ಲೂಟಿ ಮಾಡಲಾಗಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಆರೋಪಿಸಿದ್ದಾರೆ.
Published: 16th January 2023 04:05 PM | Last Updated: 16th January 2023 04:13 PM | A+A A-

ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ
ಬೆಂಗಳೂರು: ಬಿಜೆಪಿ ಸರ್ಕಾರವಿರುವ ಕರ್ನಾಟಕದಲ್ಲಿ ಪರಿಸ್ಥಿತಿ ತೀವ್ರ ಹದಗೆಟ್ಟಿರುವುದಾಗಿ ಕೇಳಿದ್ದು, ಭ್ರಷ್ಟಾಚಾರ ಮೂಲಕ ರೂ. 1. 5 ಲಕ್ಷ ಕೋಟಿ ಲೂಟಿ ಮಾಡಲಾಗಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಆರೋಪಿಸಿದ್ದಾರೆ.
ಇಂತಹ ಸರ್ಕಾರದಿಂದ ನಿಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ, ಉದ್ಯೋಗ ದೊರಕುವ ಭರವಸೆ ಇದೆಯೇ ? ಇವರಿಂದ ಭವಿಷ್ಯ ಉತ್ತಮಗೊಳ್ಳುವ ಭರವಸೆ ಇದೆಯೇ ಎಂದು ಸಭೆಯಲ್ಲಿದ್ದ ಜನರನ್ನು ಪ್ರಶ್ನಿಸಿದರು.
ಇದನ್ನೂ ಓದಿ: ನಾ ನಾಯಕಿ' ಎಂದು ಸ್ವಯಂ ಘೋಷಣೆ ಮಾಡಿಕೊಳ್ಳುತ್ತಿರುವುದು ವಿಪರ್ಯಾಸ: ಕಾಂಗ್ರೆಸ್ ಕಾರ್ಯಕ್ರಮಕ್ಕೆ ಸಿಎಂ ವ್ಯಂಗ್ಯ
ನಗರದ ಅರಮನೆ ಆವರಣದಲ್ಲಿ ಸೋಮವಾರ ಆಯೋಜಿಸಿದ್ದ 'ನಾ ನಾಯಕಿ' ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಅವರು, ಪೊಲೀಸ್ ಸಬ್ ಇನ್ಸ್ ಪೆಕ್ಟರ್ ನೇಮಕಾತಿಯಲ್ಲಿ ನಡೆದಿರುವ ಹಗರಣ ನಾಚಿಕೆಗೇಡಿತನ ಸಂಗತಿ. ಬಿಜೆಪಿ ಸರ್ಕಾರ ಪೊಲೀಸ್ ಪಡೆಗಳನ್ನೂ ಮಾರಾಟಕ್ಕೆ ಇಟ್ಟಿರುವುದಕ್ಕೆ ಇದೇ ಸಾಕ್ಷಿ ಎಂದರು.
I have been told that situation in Karnataka is very bad, Rs 1.5 lakh cr money has been lost through corruption. PSI scam is really shameful, you educate your children & this is what you get from politicians in power: Priyanka Gandhi Vadra, Congress General Secretary pic.twitter.com/dNB0ThD2ZP
— ANI (@ANI) January 16, 2023
ಬಿಜೆಪಿ ಸರ್ಕಾರದ ಅವಧಿಯಲ್ಲಿ ನಿಮ್ಮ ಜೀವನ ಉತ್ತಮವಾಗಿದೆಯೇ? ನಿಮ್ಮ ಜೀವನದಲ್ಲಿ ಏನಾದರೂ ಬದಲಾವಣೆಯಾಗಿದೆಯೇ? ಎಂದು ಪ್ರಶ್ನಿಸಿದ ಅವರು, ಮತದಾನ ಮಾಡುವ ಮೊದಲು ನಿಮ್ಮನ್ನು ಆತ್ಮಾವಲೋಕನ ಮಾಡಿಕೊಳ್ಳಿ ಎಂದು ಪ್ರಿಯಾಂಕಾ ಗಾಂಧಿ ವಾದ್ರಾ ಹೇಳಿದರು.