ಬಸನಗೌಡ ಪಾಟೀಲ್ ಯತ್ನಾಳ್.
ರಾಜಕೀಯ
ಕೊನೆಗೂ ಶಾಸಕ ಯತ್ನಾಳ್‌ಗೆ ಬಿಜೆಪಿ ಕೇಂದ್ರ ಶಿಸ್ತು ಸಮಿತಿಯಿಂದ ನೋಟಿಸ್
ಸಚಿವ ಮುರುಗೇಶ್ ನಿರಾಣಿ ಸೇರಿದಂತೆ ಹಲವು ಸ್ವಪಕ್ಷೀಯ ನಾಯಕರ ವಿರುದ್ಧವೇ ತೀವ್ರ ವಾಗ್ದಾಳಿ ನಡೆಸುತ್ತಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಕೊನೆಗೂ ಬಿಜೆಪಿ ಕೇಂದ್ರ ಶಿಸ್ತು ಸಮಿತಿ ನೋಟಿಸ್ ನೀಡಿದೆ.
ಬೆಂಗಳೂರು: ಸಚಿವ ಮುರುಗೇಶ್ ನಿರಾಣಿ ಸೇರಿದಂತೆ ಹಲವು ಸ್ವಪಕ್ಷೀಯ ನಾಯಕರ ವಿರುದ್ಧವೇ ತೀವ್ರ ವಾಗ್ದಾಳಿ ನಡೆಸುತ್ತಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಕೊನೆಗೂ ಬಿಜೆಪಿ ಕೇಂದ್ರ ಶಿಸ್ತು ಸಮಿತಿ ನೋಟಿಸ್ ನೀಡಿದೆ.
ನಿರಾಣಿ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿರುವ ಯತ್ನಾಳ್ ಅವರಿಗೆ ಬಿಜೆಪಿ ಫ್ಯಾಕ್ಸ್ ಮೂಲಕ ನೋಟಿಸ್ ನೀಡಿದ್ದು, ತಮ್ಮ ಹೇಳಿಕೆಗೆ ಸ್ಪಷ್ಟೀಕರಣ ನೀಡುವಂತೆ ಸೂಚಿಸಿದೆ ಎಂದು ತಿಳಿದುಬಂದಿದೆ.
ಪಂಚಮಸಾಲಿ ಮೀಸಲಾತಿ ವಿಚಾರವಾಗಿ ಮಾತನಾಡಿದ್ದ ಯತ್ನಾಳ್, ಸಚಿವ ನಿರಾಣಿ ಅವರ ವಿರುದ್ಧ ಅವಹೇಳನಕಾರಿ ಪದ ಬಳಕೆ ಮಾಡಿದ್ದರು. ಅಲ್ಲದೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಸದಾ ವಿಶೇಷ ವಿಮಾನದಲ್ಲಿ ತಿರುಗಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದರು.
ಪಂಚಮಸಾಲಿ ಮೀಸಲಾತಿಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಅವರ ಪುತ್ರ ವಿಜಯೇಂದ್ರ ಅಡ್ಡಿ ಪಡಿಸುತ್ತಿದ್ದಾರೆ ಎಂದು ಯತ್ನಾಳ್ ಆರೋಪ ಮಾಡಿದ್ದರು.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ