ಕಾಂಗ್ರೆಸ್ ಸುಳ್ಳು ಭರವಸೆಗಳ ಬಗ್ಗೆ ಮನೆಮನೆಗೆ ತೆರಳಿ ಮಾಹಿತಿ ನೀಡುತ್ತೇವೆ: ಬಿಜೆಪಿ

ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ-ವಾದ್ರಾ ಗೃಹ ಲಕ್ಷ್ಮಿ ಯೋಜನೆಯಡಿ ಕುಟುಂಬದ ಒಬ್ಬ ಮಹಿಳೆಗೆ ಮಾಸಿಕ 2,000 ರೂಪಾಯಿ ನೀಡುವ ಕಾಂಗ್ರೆಸ್ ಯೋಜನೆಯನ್ನು ನಾ ನಾಯಕಿ ಸಮಾವೇಶದಲ್ಲಿ ಅನಾವರಣಗೊಳಿಸಿದ್ದು, ಕಾಂಗ್ರೆಸ್ ಪಕ್ಷದ ಈ ಯೋಜನೆಯನ್ನು ರಾಜ್ಯ ಬಿಜೆಪಿ ಟೊಳ್ಳು ಭರವಸೆಯೆಂದು ಟೀಕೆ ಮಾಡಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಮೈಸೂರು: ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ-ವಾದ್ರಾ ಗೃಹ ಲಕ್ಷ್ಮಿ ಯೋಜನೆಯಡಿ ಕುಟುಂಬದ ಒಬ್ಬ ಮಹಿಳೆಗೆ ಮಾಸಿಕ 2,000 ರೂಪಾಯಿ ನೀಡುವ ಕಾಂಗ್ರೆಸ್ ಯೋಜನೆಯನ್ನು ನಾ ನಾಯಕಿ ಸಮಾವೇಶದಲ್ಲಿ ಅನಾವರಣಗೊಳಿಸಿದ್ದು, ಕಾಂಗ್ರೆಸ್ ಪಕ್ಷದ ಈ ಯೋಜನೆಯನ್ನು ರಾಜ್ಯ ಬಿಜೆಪಿ ಟೊಳ್ಳು ಭರವಸೆಯೆಂದು ಟೀಕೆ ಮಾಡಿದೆ.
 
ವಿಧಾನಸಭಾ ಚುನಾವಣೆಗೂ ಮುನ್ನ ಕಾಂಗ್ರೆಸ್ ನೀಡಿದ ಅವಾಸ್ತವಿಕ ಭರವಸೆಗಳ ಬಗ್ಗೆ ಹಾಗೂ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ನೀಡುತ್ತಿರುವ ಕಲ್ಯಾಣ ಮತ್ತು ಅಭಿವೃದ್ಧಿ ಕಾರ್ಯಕ್ರಮಗಳ ಬಗ್ಗೆ ಮನೆ ಮನೆಗೆ ತೆರಳಿ ಜನರಿಗೆ ಮಾಹಿತಿ ನೀಡುತ್ತೇವೆಂದು ಬಿಜೆಪಿ ಮಹಿಳಾ ಮೋರ್ಚಾ ಕಾರ್ಯಕರ್ತರು ಹೇಳಿದ್ದಾರೆ.  

ನಿನ್ನೆಯಷ್ಟೇ ಸುದ್ದಿಗಾರರೊಂದಿಗೆ ಮಾತನಾಡಿ ಜಿಲ್ಲಾ ಬಿಜೆಪಿ ಅಧ್ಯಕ್ಷೆ ಮಂಗಳಾ ಸೋಮಶೇಖರ್ ಅವರು, ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.

ಕಾಂಗ್ರೆಸ್‌ನ ಘೋಷಣೆಯು ಮಹಿಳೆಯರಿಗೆ ಮಾಡುತ್ತಿರುವ "ವಂಚನೆ"ಯಾಗಿದೆ ಮತ್ತು ಇದು ಚುನಾವಣಾ ಗಿಮಿಕ್ ಹೊರತು ಬೇರೇನೂ ಅಲ್ಲ ಎಂದು ಹೇಳಿದರು. ಅಲ್ಲದೆ, ಬಿಜೆಪಿ ಮಹಿಳೆಯರಿಗಾಗಿ ಯಾವುದೇ ಕಾರ್ಯಕ್ರಮಗಳನ್ನು ಜಾರಿಗೆ ತರುತ್ತಿಲ್ಲ ಎಂಬ ಕಾಂಗ್ರೆಸ್ ಮುಖಂಡರ ಆರೋಪದ ವಿರುದ್ಧ ಕಿಡಿಕಾರಿದರು.

“ಮತ್ತೆ ಅಧಿಕಾರಕ್ಕೆ ಬರಬೇಕೆಂಬ ಹತಾಶೆಯಲ್ಲಿರುವ ಕಾಂಗ್ರೆಸ್ ಸುಳ್ಳು ಭರವಸೆಗಳನ್ನು ನೀಡಲು ಸಿದ್ಧವಾಗಿದೆ. ಪ್ರಿಯಾಂಕ ಗಾಂಧಿಗೆ ಸ್ವಂತ ವರ್ಚಸ್ಸಿಲ್ಲ. ನೆಹರು ಮರಿ ಮೊಮ್ಮಗಳು ಎಂಬುದೊಂದೇ ಗುರುತು. ಕುಟುಂಬದ ಹೆಸರು ಹೇಳಿಕೊಂಡು ತಾವೇ ನಾನು ನಾಯಕಿ ಎಂದು ಹೇಳಿಕೊಳ್ಳುತ್ತಿದ್ದಾರೆ. ರಾಜ್ಯ ಕಾಂಗ್ರೆಸ್‌ ನಾಯಕರು ಇವರನ್ನು ನಾಯಕಿ ಎಂದು ಮೆರವಣಿಗೆ ಮಾಡುತ್ತಿರುವುದೇ ಹಾಸ್ಯಾಸ್ಪದ. ಗ್ರಾಪಂ ಸದಸ್ಯೆಯೂ ಅಲ್ಲದ ಪ್ರಿಯಾಂಕ ಗಾಂಧಿ ಹೋದಲ್ಲೆಲ್ಲಾ ಕಾಂಗ್ರೆಸ್‌ ಸೋತಿದೆ. ಕರ್ನಾಟಕದಲ್ಲೂ ಅದು ಪುನರಾರ್ತನೆ ಆಗಲಿದೆ ಎಂದು ಲೇವಡಿ ಮಾಡಿದರು.

ಕಾಂಗ್ರೆಸ್ ನಾಯಕರೊಬ್ಬರು ಮಹಿಳೆಯನ್ನು ದಿಟ್ಟಿಸಿ ನೋಡಿರುವುದು ನಿಜಕ್ಕೂ ದುರದೃಷ್ಟಕರ. ಇದು ಅವರ ಸೋಲಿನೊಂದಿಗೆ ಕೊನೆಗೊಳ್ಳುತ್ತದೆ ಎಂದು ತಿಳಿಸಿದರು.

ಮಾಜಿ ಪ್ರಧಾನಿ ಇಂದಿರಾಗಾಂಧಿ ಮಹಿಳೆಯರಿಗಾಗಿ ಯಾವುದೇ ಯೋಜನೆಗಳನ್ನು ಜಾರಿಗೆ ತರಲಿಲ್ಲ, ಆದರೆ ತುರ್ತು ಪರಿಸ್ಥಿತಿ ಹೇರಿದರು. ಆದರೆ, ಪ್ರಧಾನಿ ಮೋದಿ ಮಹಿಳೆಯರಿಗೆ ಶೌಚಾಲಯಗಳನ್ನು ನಿರ್ಮಿಸಿದರು. 11 ಮಹಿಳೆಯರನ್ನು ಸಂಪುಟಕ್ಕೆ ಸೇರ್ಪಡೆಗೊಳಿಸಿದರು.

ದೇಶದಲ್ಲಿ ಏಳು ಮಂದಿ ಮಹಿಳಾ ರಾಜ್ಯಪಾಲರಿದ್ದು, ಒಬ್ಬ ಬುಡಕಟ್ಟು ಮಹಿಳೆಯನ್ನು ರಾಷ್ಟ್ರಪತಿಯನ್ನಾಗಿ ಮಾಡಲಾಗಿದೆ. ಬಿಜೆಪಿ ಸರ್ಕಾರ ಮಹಿಳೆಯರ ಹಿತಾಸಕ್ತಿ ಕಾಪಾಡಲು ತ್ರಿವಳಿ ತಲಾಖ್ ಅನ್ನು ನಿಷೇಧಿಸಿತು ಮತ್ತು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಭಾಗ್ಯಲಕ್ಷ್ಮಿ ಯೋಜನೆಯನ್ನು ಜಾರಿಗೆ ತಂದರು, ಇದು ಬಿಜೆಪಿ ಮಹಿಳಾ ಪರ ಸರ್ಕಾರ ಎಂದು ಸಾಬೀತುಪಡಿಸುತ್ತದೆ ಎಂದು ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com