'ಅಪ್ಪ, ಮಕ್ಕಳು, ಮೊಮ್ಮಕ್ಕಳು, ಹೆಂಡತಿಯರು ಎಲ್ಲರೂ ದೋಚಲು ಶುರು ಮಾಡಿದ್ದಾರೆ; ದೋಚಿದ್ದು, ಬಾಚಿದ್ದು ನಂಬಿಕೊಂಡು ನಾನು ಬದುಕಲ್ಲ'

ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಮತ್ತು ಮಾಸಿ ಸಿಎಂ ಸಿದ್ದರಾಮಯ್ಯ ವಿರುದ್ದ ಕಾನೂನು ಮತ್ತು ಸಂಸದೀಯ ಸಚಿವ ಜೆ.ಸಿ ಮಾಧುಸ್ವಾಮಿ ಹರಿಹಾಯ್ದಿದ್ದಾರೆ.
ಜೆ.ಸಿ ಮಾಧುಸ್ವಾಮಿ
ಜೆ.ಸಿ ಮಾಧುಸ್ವಾಮಿ

ತುಮಕೂರು:  ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಮತ್ತು ಮಾಸಿ ಸಿಎಂ ಸಿದ್ದರಾಮಯ್ಯ ವಿರುದ್ದ ಕಾನೂನು ಮತ್ತು ಸಂಸದೀಯ ಸಚಿವ ಜೆ.ಸಿ ಮಾಧುಸ್ವಾಮಿ ಹರಿಹಾಯ್ದಿದ್ದಾರೆ.

ತುಮಕೂರು ಜಿಲ್ಲೇ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಮತ್ತಿಘಟ್ಟದಲ್ಲಿ ಬಿಜೆಪಿ ವಿಜಯ ಸಂಕಲ್ಪ ಅಭಿಯಾನದಲ್ಲಿ ಮಾತನಾಡಿದ ಅವರು, ಅಪ್ಪ, ಮಕ್ಕಳು, ಮೊಮ್ಮಕ್ಕಳು, ಹೆಂಡತಿಯರು ಎಲ್ಲರೂ ದೋಚಲು ಶುರು ಮಾಡಿದ್ದಾರೆ ಎಂದು ದೇವೇಗೌಡರ ಕುಟುಂಬದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಚಿಕ್ಕನಾಯಕನಹಳ್ಳಿ ತಾಲ್ಲೂಕು ಅಭಿವೃದ್ಧಿಯಾಗಿಲ್ಲ. ಮಾಧುಸ್ವಾಮಿ ಮಾತ್ರ ಅಭಿವೃದ್ಧಿಯಾಗಿದ್ದಾರೆ ಎಂದು ಕುಮಾರಸ್ವಾಮಿ ಬಾಯಿ ಬಡಿದುಕೊಳ್ಳುತ್ತಿದ್ದಾರೆ. ಅವರಪ್ಪನನ್ನು ಲೋಕಸಭಾ ಚುನಾವಣೆಯಲ್ಲಿ ಗೆಲ್ಲಿಸೋಕೆ ಬಾರದವನು, ಈಗ ನಮ್ಮ ಕ್ಷೇತ್ರಕ್ಕೆ ಬಂದು ಭಾಷಣ ಮಾಡುತಿದ್ದಾನೆ ಎಂದು ವಾಗ್ದಾಳಿ ನಡೆಸಿದರು.

ಇವರಪ್ಪನಿಗೆ ಹೊಳೆನರಸೀಪುರದಲ್ಲಿ 50 ರೂಪಾಯಿ ಕೊಟ್ಟು ಅಯ್ನೋರು ಕಾಂಟ್ರಾಕ್ಟ್‌ ಶುರು ಮಾಡಿಸಿದ್ದರು. ನನಗೆ ಆ ಸ್ಥಿತಿ ಬಂದಿಲ್ಲ. ಇವರ ಹಾಗೆ ದೋಚಿದ್ದು, ಬಾಚಿದ್ದು ನಂಬಿಕೊಂಡು ನಾನು ಬದುಕಲ್ಲ ಎಂದರು.

ನಮ್ಮ ಕ್ಷೇತ್ರದಲ್ಲಿ ನಾನು ಯಾರ ಜೊತೆ ಹೋರಾಟ ಮಾಡುತ್ತಿದ್ದೇನೆ ಎಂಬುವುದು ತಿಳಿಯುತ್ತಿಲ್ಲ. ಅದಕ್ಕೆ ನಾನು ಸಿದ್ದರಾಮಯ್ಯ ಅವರನ್ನು ಚಿಕ್ಕನಾಯಕನಹಳ್ಳಿ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಬನ್ನಿ ಎಂದು ಕರೆದಿದ್ದೆ. ಚುನಾವಣೆಯಲ್ಲಿ ಸೆಣಸಾಡುವುದಕ್ಕೂ ಗೌರವ ಇರುತ್ತದೆ’ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com