ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾಗಿ ಆರ್ ಅಶೋಕ್ ನೇಮಕ

ಕೆಲವೇ ತಿಂಗಳಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಹಳೇ ಮೈಸೂರು ಭಾಗದಲ್ಲಿ ಹೆಚ್ಚಿನ ಸೀಟು ಗೆಲ್ಲಲು ರಣತಂತ್ರ ರೂಪಿಸುತ್ತಿರುವ ಬಿಜೆಪಿ ಸರ್ಕಾರ, ಈಗ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾಗಿ ಕಂದಾಯ...
ಆರ್ ಅಶೋಕ್
ಆರ್ ಅಶೋಕ್

ಬೆಂಗಳೂರು: ಕೆಲವೇ ತಿಂಗಳಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಹಳೇ ಮೈಸೂರು ಭಾಗದಲ್ಲಿ ಹೆಚ್ಚಿನ ಸೀಟು ಗೆಲ್ಲಲು ರಣತಂತ್ರ ರೂಪಿಸುತ್ತಿರುವ ಬಿಜೆಪಿ ಸರ್ಕಾರ, ಈಗ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾಗಿ ಕಂದಾಯ ಸಚಿವ ಆರ್. ಅಶೋಕ ಅವರನ್ನು ನೇಮಕ ಮಾಡಿ ಮಂಗಳವಾರ ಆದೇಶ ಹೊರಡಿಸಿದೆ.

ಈ ಹಿಂದೆ ಅಬಕಾರಿ ಸಚಿವ ಕೆ. ಗೋಪಾಲಯ್ಯ ಅವರು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಆದರೆ, ಈಗ ಚುನಾವಣೆ ಇನ್ನು ಎರಡು ತಿಂಗಳು ಬಾಕಿ ಇರುವಾಗ ಒಕ್ಕಲಿಗ ಸಮುದಾಯಕ್ಕೆ ಸೇರಿದ ಆರ್. ಅಶೋಕ್‌ ಅವರನ್ನು ಮಂಡ್ಯ ಜಿಲ್ಲೆಗೆ ಉಸ್ತುವಾರಿ ಸಚಿವರನ್ನಾಗಿ ನಿಯೋಜನೆ ಮಾಡಿದೆ.

ಕೆ.ಗೋಪಾಲಯ್ಯ ಅವರು ಹಾಸನ ಜಿಲ್ಲಾ ಉಸ್ತುವಾರಿ ಸಚಿವರಾಗಿ ಮುಂದುವರಿಯಲಿದ್ದಾರೆ. ಹಾಸನ ಜಿಲ್ಲಾ ಉಸ್ತುವಾರಿ ಜೊತೆಗೆ ಮಂಡ್ಯ ಜಿಲ್ಲೆಯನ್ನು ಸಹ ಹೆಚ್ಚುವರಿಯಾಗಿ ಗೋಪಾಲಯ್ಯ ಅವರಿಗೆ ನೀಡಲಾಗಿತ್ತು. ಆದರೆ ಇದೀಗ ಚುನಾವಣೆ ಸಂದರ್ಭದಲ್ಲಿ ಬದಲಾವಣೆ ಮಾಡಿ ಮಂಡ್ಯ ಜಿಲ್ಲಾ ಜವಾಬ್ದಾರಿಯನ್ನು ಕಂದಾಯ ಸಚಿವ ಆರ್ ಅಶೋಕ್ ಅವರಿಗೆ​ ನೀಡಲಾಗಿದೆ.

ಆರ್ ಅಶೋಕ್​ ಅವರು ಬೆಂಗಳೂರು ನಗರ ಉಸ್ತುವಾರಿ ಮೇಲೆ ಕಣ್ಣಿಟ್ಟಿದ್ದರು. ಆದರೆ ಅವರಿಗೆ ಬೆಂಗಳೂರು ಬದಲಿಗೆ ಮಂಡ್ಯ ಜಿಲ್ಲಾ ಉಸ್ತುವಾರಿ ನೀಡಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com