ಪ್ರಧಾನಿ ನರೇಂದ್ರ ಮೋದಿ ಅವರನ್ನು ಹಿಟ್ಲರ್‌ಗೆ ಹೋಲಿಸಿದ ಸಿದ್ದರಾಮಯ್ಯ ಕ್ಷಮೆ ಕೇಳಬೇಕು: ಕರ್ನಾಟಕ ಬಿಜೆಪಿ

ಪ್ರಧಾನಿ ನರೇಂದ್ರ ಮೋದಿ ಅವರನ್ನು ಹಿಟ್ಲರ್‌ಗೆ ಹೋಲಿಸಿರುವ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಖಂಡಿಸಿರುವ ಆಡಳಿತಾರೂಢ ಬಿಜೆಪಿ, ಮಾಜಿ ಮುಖ್ಯಮಂತ್ರಿ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದೆ. 
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಮೈಸೂರು: ಪ್ರಧಾನಿ ನರೇಂದ್ರ ಮೋದಿ ಅವರನ್ನು ಹಿಟ್ಲರ್‌ಗೆ ಹೋಲಿಸಿರುವ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಖಂಡಿಸಿರುವ ಆಡಳಿತಾರೂಢ ಬಿಜೆಪಿ, ಮಾಜಿ ಮುಖ್ಯಮಂತ್ರಿ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದೆ. 

ಬಿಜೆಪಿ ವಕ್ತಾರ ಕೆ.ವಸಂತಕುಮಾರ್ ಮಾತನಾಡಿ, ಪ್ರಧಾನಿಯವರು ಎಲ್ಲ ವರ್ಗಗಳ ಸಬಲೀಕರಣಕ್ಕಾಗಿ ದೇಶ ಸೇವೆ ಮಾಡುತ್ತಿರುವ ನಾಯಕರಾಗಿದ್ದು, ಅವರು ಸರ್ವಾಧಿಕಾರಿಯಲ್ಲ. ಜಿ ಪರಮೇಶ್ವರ್, ಮಲ್ಲಿಕಾರ್ಜುನ ಖರ್ಗೆ, ಕೆಎಚ್ ಮುನಿಯಪ್ಪ ಸೇರಿದಂತೆ ಹಿರಿಯ ಕಾಂಗ್ರೆಸ್ ನಾಯಕರ ವಿರುದ್ಧ ಸಿದ್ದರಾಮಯ್ಯ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ದಲಿತರ ಪರ ಮಾತನಾಡುವ ಸಿದ್ದರಾಮಯ್ಯ, ಮೋದಿಯವರು ಲಂಬಾಣಿಗಳಿಗೆ ಹಕ್ಕುಪತ್ರ ನೀಡಿ, ಎಸ್‌ಸಿ/ಎಸ್‌ಟಿಗೆ ಮೀಸಲಾತಿ ಹೆಚ್ಚಿಸಿದ್ದನ್ನು ಪ್ರಸ್ತಾಪಿಸಿ ಅವರ ನಾಯಕರ ನಾಯಕತ್ವವನ್ನು ಮುಗಿಸಿದ್ದಾರೆ. ಸಮಾಜವಾದಿ ಹಿನ್ನೆಲೆಯಿಂದ ಬಂದವರು ಎಂದು ಹೇಳಿಕೊಳ್ಳುವ ವಿರೋಧ ಪಕ್ಷದ ನಾಯಕ ತಮ್ಮ ಹುಟ್ಟುಹಬ್ಬವನ್ನು ಆಚರಿಸಲು 70 ಕೋಟಿ ರೂಪಾಯಿ ಖರ್ಚು ಮಾಡಿದ್ದಾರೆ ಎಂದು ಆರೋಪಿಸಿದ್ದರು. 

ಸಿದ್ದರಾಮಯ್ಯ ಅವರು ಮುಖ್ಯಮತ್ರಿ ಆಗಿದ್ದ ಅವಧಿಯಲ್ಲಿ 900 ಎಕರೆ ಡಿನೋಟಿಫಿಕೇಶನ್‌ಗೆ ಆದೇಶ ನೀಡಿದ್ದರು ಮತ್ತು ಇದು 1,000 ಕೋಟಿ ರೂಪಾಯಿ ಹಗರಣ ಎಂದು ಆರೋಪಿಸಿದರು.

ಹಿಂದಿನ ಸರ್ಕಾರವು ವಸತಿ ಯೋಜನೆ ಮತ್ತು ರಾಷ್ಟ್ರೀಯ ಆರೋಗ್ಯ ಮಿಷನ್‌ನಂತಹ ಇತರ ಹಗರಣಗಳಲ್ಲಿ ಭಾಗಿಯಾಗಿದೆ ಎಂದು ಆರೋಪಿಸಿದ ಅವರು, ಮೈಸೂರಿನ ಸಮಗ್ರ ಅಭಿವೃದ್ಧಿಗೆ ಸಿದ್ದರಾಮಯ್ಯ ವಿಫಲವಾದರೆ, ಯಡಿಯೂರಪ್ಪ ಮತ್ತು ಕುಮಾರಸ್ವಾಮಿ ಕ್ರಮವಾಗಿ ಶಿವಮೊಗ್ಗ ಮತ್ತು ಹಾಸನವನ್ನು ಅಭಿವೃದ್ಧಿಪಡಿಸಿದ್ದಾರೆ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com