ಹಾಸನದ ಯಾವುದೇ ಕ್ಷೇತ್ರದಿಂದ ಸ್ಪರ್ಧಿಸಲು ಸಿದ್ಧ: ಪ್ರೀತಂ ಜೆ ಗೌಡ
ಪಕ್ಷದ ಹೈಕಮಾಂಡ್ ತೀರ್ಮಾನದಂತೆ ಹಾಸನ ಜಿಲ್ಲೆಯ ಯಾವುದೇ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಸಿದ್ಧ ಎಂದು ಹಾಸನದ ಬಿಜೆಪಿ ಶಾಸಕ ಪ್ರೀತಂ ಜೆ ಗೌಡ ಮಂಗಳವಾರ ಹೇಳಿದ್ದಾರೆ.
Published: 25th January 2023 08:03 AM | Last Updated: 25th January 2023 03:36 PM | A+A A-

ಪ್ರೀತಂ ಜೆ ಗೌಡ
ಹಾಸನ: ಪಕ್ಷದ ಹೈಕಮಾಂಡ್ ತೀರ್ಮಾನದಂತೆ ಹಾಸನ ಜಿಲ್ಲೆಯ ಯಾವುದೇ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಸಿದ್ಧ ಎಂದು ಹಾಸನದ ಬಿಜೆಪಿ ಶಾಸಕ ಪ್ರೀತಂ ಜೆ ಗೌಡ ಮಂಗಳವಾರ ಹೇಳಿದ್ದಾರೆ.
ಒಬಿಸಿ ನೌಕರರ ಕಾರ್ಯಕಾರಿ ಸಮಿತಿ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಕಳೆದ ನಾಲ್ಕೂವರೆ ವರ್ಷಗಳಲ್ಲಿನ ನನ್ನ ಸಾಧನೆ ಮತ್ತು ಅಭಿವೃದ್ಧಿ ಕಾರ್ಯಗಳನ್ನು ಪರಿಗಣಿಸಿ ಜಿಲ್ಲೆಯ ಜನರು ಅವರನ್ನು ಬೆಂಬಲಿಸುತ್ತಾರೆಂಬ ವಿಶ್ವಾಸವಿದೆ ಎಂದು ಹೇಳಿದ್ದಾರೆ.
ಕಳೆದ ಆರು ತಿಂಗಳ ಹಿಂದೆ ಹೇಳಿಕೆ ನೀಡಿದ್ದ ಪ್ರೀತಂ ಅವರು, ತಮ್ಮ ವಿರುದ್ಧ ಸ್ಥಳೀಯ ಜೆಡಿಎಸ್‌ನ ಹಿರಿಯ ನಾಯಕ ಎಚ್‌ಡಿ ರೇವಣ್ಣ ಸ್ಪರ್ಧಿಸಿದರೂ ಗೆಲ್ಲಬಲ್ಲೆ ಎಂದು ಹೇಳಿದ್ದರು.
ಇದನ್ನೂ ಓದಿ: ಭವಾನಿ 'ಬಯಕೆ'ಯ ಬಿರುಗಾಳಿ: ಪ್ರಬಲ ಆಕಾಂಕ್ಷಿ ಸ್ವರೂಪ್ ಪ್ರಕಾಶ್ ಗೆ ತಲ್ಲಣ; ಅತ್ತಿಗೆ ನಡೆಯಿಂದ ಎಚ್ ಡಿಕೆಗೆ ಮುಜುಗರ!
ಜೆಡಿಎಸ್ ಪ್ರೈವೇಟ್ ಲಿಮಿಟೆಡ್ ಕಂಪನಿಯಾಗಿದ್ದು, ಅಲ್ಲಿ ಏಕಪಕ್ಷೀಯವಾಗಿ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ. ಹಲವು ವರ್ಷಗಳಿಂದ ಸಮುದಾಯಗಳನ್ನು ನಿರ್ಲಕ್ಷಿಸಿರುವ ಜೆಡಿಎಸ್ ಮುಖಂಡರು ಚುನಾವಣೆ ಹತ್ತಿರ ಬಂದಾಗ ಮಾತ್ರ ಕ್ಷೇತ್ರಗಳಿಗೆ ಭೇಟಿ ನೀಡುತ್ತಿದ್ದಾರೆ.
ಕಾಂಗ್ರೆಸ್ ಪಕ್ಷದಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಪ್ರಾಬಲ್ಯ ಹೊಂದಿರುವುದರಿಂದ ಇದು ಸಿಂಗಲ್ ಲಿಮಿಟೆಡ್ ಕಂಪನಿಯಾಗಿದೆ. ಕಾಂಗ್ರೆಸ್ ಕೂಡ ರಾಜ್ಯದಲ್ಲಿ ಒಬಿಸಿ, ಎಸ್‌ಸಿ/ಎಸ್‌ಟಿ ಮತ್ತು ಅಲ್ಪಸಂಖ್ಯಾತರನ್ನು ನಿರ್ಲಕ್ಷಿಸಿದೆ ಎಂದು ತಿಳಿಸಿದ್ದಾರೆ.