ಕಾಂಗ್ರೆಸ್ ಸುಳ್ಳು ಭರವಸೆ ನೀಡಿ ಜನರನ್ನು ದಾರಿ ತಪ್ಪಿಸುತ್ತಿದೆ: ಕರ್ನಾಟಕ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್
ಮಂಗಳವಾರ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಅಧಿಕಾರವಿಲ್ಲದೆ ಹಳೆಯ ಪಕ್ಷವು 'ರಾಜಕೀಯ ಬೂಟಾಟಿಕೆ'ಯಲ್ಲಿ ತೊಡಗಿದೆ ಎಂದು ಹೇಳಿದರು.
Published: 25th January 2023 08:07 AM | Last Updated: 25th January 2023 03:38 PM | A+A A-

ನಳಿನ್ ಕುಮಾರ್ ಕಟೀಲ್
ಚಿಕ್ಕಮಗಳೂರು: ಮಂಗಳವಾರ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಅಧಿಕಾರವಿಲ್ಲದೆ ಹಳೆಯ ಪಕ್ಷವು 'ರಾಜಕೀಯ ಬೂಟಾಟಿಕೆ'ಯಲ್ಲಿ ತೊಡಗಿದೆ ಎಂದು ಹೇಳಿದರು.
ಇಲ್ಲಿ ಸುದ್ದಿಗಾರರನ್ನುದ್ದೇಶಿಸಿ ಮಾತನಾಡಿದ ಅವರು, ಏಪ್ರಿಲ್ ಅಥವಾ ಮೇನಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆ ಎದುರಿಸಲು ಬಿಜೆಪಿ ಸಿದ್ಧವಿದೆ. ಆದರೆ, ಸಂಘಟನೆ ವಿಚಾರದಲ್ಲಿ ಹಿಂದೆ ಬಿದ್ದಿರುವ ಕಾಂಗ್ರೆಸ್ ತನ್ನ ಪಕ್ಷದ ವಿರುದ್ಧ ಆಧಾರ ರಹಿತ ಆರೋಪ ಹೊರಿಸುವಲ್ಲಿ ನಿರತವಾಗಿದೆ. ಮತದಾರರ ಅಭಿಪ್ರಾಯ ಸಂಗ್ರಹಿಸುವಲ್ಲಿ ಯಶಸ್ವಿಯಾದ ಬೂತ್‌ಲೆವೆಲ್ ಗೆಲುವಿನ ಅಭಿಯಾನವನ್ನು ಪೂರ್ಣಗೊಳಿಸಿದ ನಂತರ ಬಿಜೆಪಿ ‘ವಿಜಯ ಸಂಕಲ್ಪ ಅಭಿಯಾನ’ ಆರಂಭಿಸಿದೆ ಎಂದರು.
ಅದರಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ನೇತೃತ್ವದ ತಂಡಗಳು ತಮ್ಮ ಪಕ್ಷದ ನೇತೃತ್ವದ ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ಸಾಧನೆ ಮತ್ತು ಯೋಜನೆಗಳ ಬಗ್ಗೆ ಜನರಿಗೆ ತಿಳಿಸಲಿವೆ. ಒಂದು ಕೋಟಿ ಸದಸ್ಯರನ್ನು ನೋಂದಾಯಿಸುವುದು ಮತ್ತು ಒಂದು ಕೋಟಿ ಕರಪತ್ರಗಳನ್ನು ಹಂಚುವುದು ನಮ್ಮ ಗುರಿಯಾಗಿದೆ. ಇದನ್ನು ಅರಗಿಸಿಕೊಳ್ಳಲಾಗದ ಕಾಂಗ್ರೆಸ್ ರಾಜಕೀಯ ಬೂಟಾಟಿಕೆಯಲ್ಲಿ ತೊಡಗಿದೆ. ಸುಳ್ಳು ಭರವಸೆಗಳನ್ನು ನೀಡಿ ಜನರನ್ನು ದಾರಿ ತಪ್ಪಿಸುತ್ತಿದೆ' ಎಂದು ಕಟೀಲ್ ಆರೋಪಿಸಿದರು.
ಇದನ್ನೂ ಓದಿ: ಸಮಯ ಬಂದಾಯ್ತು ಪ್ಯಾಕ್ ಮಾಡ್ಕೊಳ್ಳಿ, ವಿಧಾನಸೌಧವನ್ನು ಡೆಟಾಲ್ ಹಾಕಿ ಕ್ಲೀನ್ ಮಾಡ್ತೇವೆ: ಬಿಜೆಪಿಗೆ ಡಿಕೆ.ಶಿವಕುಮಾರ್
ಪ್ರಚಾರಕ್ಕೆ ಪಕ್ಷದ ಕಾರ್ಯಕರ್ತರ ಕೊರತೆಯನ್ನು ಕಾಂಗ್ರೆಸ್ ಎದುರಿಸುತ್ತಿದೆ. ಅಲ್ಲದೆ, ಪಕ್ಷದೊಳಗೆ ಕಚ್ಚಾಟವಿದೆ. ಸಿಎಲ್‌ಪಿ ನಾಯಕ ಸಿದ್ದರಾಮಯ್ಯ ಸ್ವತಃ ಸುರಕ್ಷಿತ ಕ್ಷೇತ್ರವನ್ನು ಹುಡುಕುತ್ತಿದ್ದಾರೆ. ಚುನಾವಣೆಯಲ್ಲಿ ಬಿಜೆಪಿ 150 ಸ್ಥಾನಗಳನ್ನು ಗೆಲಲ್ಲಿದೆ ಎಂಬ ಭಯದಲ್ಲಿರುವ ಕಾಂಗ್ರೆಸ್‌ನಲ್ಲಿ ಸಿಎಂ ಅಭ್ಯರ್ಥಿ ವಿಚಾರದಲ್ಲಿ ಗೊಂದಲ ಉಂಟಾಗಿದೆ. ಬಿಜೆಪಿ ಸರ್ಕಾರದ ವಿರುದ್ಧ ಹೊರಿಸಲಾದ ಭ್ರಷ್ಟಾಚಾರದ ಆರೋಪಗಳನ್ನು ಉಲ್ಲೇಖಿಸಿದ ಕಟೀಲ್, ಸಿದ್ದರಾಮಯ್ಯ ಸರ್ಕಾರ ಲೋಕಾಯುಕ್ತ ಕಚೇರಿಯನ್ನು ಏಕೆ ಕಿತ್ತೊಗೆಯಿತು ಎಂದು ಕೇಳಿದರು.
ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತದಲ್ಲಿ ಮೂರು ಪ್ರಕರಣಗಳು ದಾಖಲಾಗಿವೆ. ಯಾವುದೇ ಬಿಜೆಪಿ ನಾಯಕರ ವಿರುದ್ಧ ಪ್ರಕರಣ ದಾಖಲಾಗಿಲ್ಲ. ಕೆಪಿಸಿಸಿ ಮುಖ್ಯಸ್ಥರು ಭ್ರಷ್ಟಾಚಾರದ ಆರೋಪದಲ್ಲಿ ಜೈಲಿಗೆ ಹೋಗಿದ್ದರು. ಬಹುತೇಕ ಕಾಂಗ್ರೆಸ್ ನಾಯಕರು ಜಾಮೀನಿನ ಮೇಲೆ ಹೊರಗಿದ್ದಾರೆ. ಬಿಜೆಪಿಯಲ್ಲಿ ಯಡಿಯೂರಪ್ಪ ಅವರನ್ನು ಬದಿಗಿರಿಸಲಾಗುತ್ತಿದೆ ಎಂಬ ಆರೋಪದ ಬಗ್ಗೆ, ಅವರು ಪಕ್ಷದ ಸರ್ವೋಚ್ಚ ನಾಯಕ ಮತ್ತು ಈ ಆರೋಪ ನಿರಾಧಾರ ಎಂದು ಹೇಳಿದರು.