ಅವನಿಗೆ ಪ್ಯಾಂಟ್ ಬಿಚ್ಚಲು ಹೇಳಿದ್ವಾ? ಕಾಂಗ್ರೆಸ್ ಪಕ್ಷ ಹಾಳು ಮಾಡಿದ್ದೇ ಅವನು!!: ರಮೇಶ್ ಜಾರಕಿಹೊಳಿಗೆ ಡಿಕೆಶಿ ತಿರುಗೇಟು
ರಾಜ್ಯದಲ್ಲಿ ಸಿಡಿ ಪ್ರಕರಣ ಮತ್ತೆ ವ್ಯಾಪಕ ಚರ್ಚೆ ಹುಟ್ಟು ಹಾಕಿದ್ದು, ರಮೇಶ್ ಜಾರಕಿಹೊಳಿ ಆರೋಪಗಳಿಗೆ ತಿರಗೇಟು ನೀಡಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, 'ಅವನಿಗೆ ಪ್ಯಾಂಟ್ ಬಿಚ್ಚಲು ಹೇಳಿದ್ವಾ? ಕಾಂಗ್ರೆಸ್ ಪಕ್ಷ ಹಾಳು ಮಾಡಿದ್ದೇ ಅವನು' ಎಂದು ಏಕವಚನದಲ್ಲಿಯೇ ವಾಗ್ದಾಳಿ ನಡೆಸಿದ್ದಾರೆ.
Published: 25th January 2023 05:08 PM | Last Updated: 25th January 2023 05:08 PM | A+A A-

ಡಿಕೆ ಶಿವಕುಮಾರ್
ಬೆಂಗಳೂರು: ರಾಜ್ಯದಲ್ಲಿ ಸಿಡಿ ಪ್ರಕರಣ ಮತ್ತೆ ವ್ಯಾಪಕ ಚರ್ಚೆ ಹುಟ್ಟು ಹಾಕಿದ್ದು, ರಮೇಶ್ ಜಾರಕಿಹೊಳಿ ಆರೋಪಗಳಿಗೆ ತಿರಗೇಟು ನೀಡಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, 'ಅವನಿಗೆ ಪ್ಯಾಂಟ್ ಬಿಚ್ಚಲು ಹೇಳಿದ್ವಾ? ಕಾಂಗ್ರೆಸ್ ಪಕ್ಷ ಹಾಳು ಮಾಡಿದ್ದೇ ಅವನು' ಎಂದು ಏಕವಚನದಲ್ಲಿಯೇ ವಾಗ್ದಾಳಿ ನಡೆಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಿಕೆ ಶಿವಕುಮಾರ್, 'ಅವನಿಗೆ ಪ್ಯಾಂಟ್ ಬಿಚ್ಚಲು ನಾನು ಹೇಳಿದ್ನಾ, ಲಂಚ ತೆಗೆದುಕೊಳ್ಳಲು ನಾನು ಹೇಳಿದ್ನಾ, ಜನರ ವೋಟಿಗೆ ಆರು ಸಾವಿರ ನೀಡಲು ನಾನು ಹೇಳಿದ್ನಾ, ಅವನು ಕಂಪ್ಲೇಂಟ್ ಆದರೂ ಕೊಡ್ಲಿ, ಏನಾದರೂ ಮಾಡಿಕೊಳ್ಳಿ, ನಾವಂತೂ ಹೆದರಲ್ಲ' ಎಂದು ಹೇಳಿದ್ದಾರೆ.
ಇದನ್ನೂ ಓದಿ: ಚುನಾವಣೆಗೆ 3 ತಿಂಗಳು ಮಾತ್ರ ಇದೆ.. ಸಚಿವ ಸ್ಥಾನ ನೀಡೋದರಲ್ಲಿ ಅರ್ಥ ಇಲ್ಲ: ರಮೇಶ್ ಜಾರಕಿಹೊಳಿ
'ಅವನಿಗೆ ಪ್ಯಾಂಟ್ ಬಿಚ್ಚೋಕೆ ನಾನು ಹೇಳಿದ್ನಾ..?ನಮ್ಮ ಕಾಂಗ್ರೆಸ್ ಪಾರ್ಟಿ ಹಾಳು ಮಾಡಿದ್ದೇ ಅವನು.ಆಪರೇಷನ್ ಕಮಲ ಮಾಡಿ ಕಾಂಗ್ರೆಸ್ ಸರ್ಕಾರ ಬೀಳಿಸಿದ್ದನಲ್ಲಪ್ಪಾ.ಅದೇನೋ ತನಿಖೆ ಮಾಡಿಸ್ತೀನಿ ಅಂದ್ನಲ್ಲಾ ಮಾಡಿಸೋಕೆ ಹೇಳಿ, ಸಿಬಿಐ ತನಿಖೆ ಮಾಡಿಸೋಕೆ ಹೇಳಿ ಅಂತಾ ಡಿಕೆಶಿವಕುಮಾರ್ ರಮೇಶ್ ಜಾರಕಿಹೊಳಿ ವಿರುದ್ದ ಏಕವಚನದಲ್ಲೇ ವಾಗ್ದಾಳಿ ನಡೆಸಿದ್ದಾರೆ.
ಸಿಡಿ ಪ್ರಕರಣದಲ್ಲಿ ಜಾರಕಿಹೊಳಿ ರಾಜೀನಾಮೆ
ಜಲಸಂಪನ್ಮೂಲ ಸಚಿವರಾಗಿದ್ದ ರಮೇಶ ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಯುವತಿಯೋರ್ವಳಿಗೆ ಆಮಿಷ ಒಡ್ಡಿ, ಆಕೆಯನ್ನು ಲೈಂಗಿಕವಾಗಿ ಬಳಸಿಕೊಂಡಿರುವ ಆರೋಪ ಜಾರಕಿಹೊಳಿ ಮೇಲೆ ಕೇಳಿಬಂದಿತ್ತು. ಯುವತಿಯೂ ಸಾರ್ವಜನಿಕವಾಗಿ ರಮೇಶ ಜಾರಕಿಹೊಳಿ ವಿರುದ್ಧ ದೂರು ನೀಡಿದ್ದಳು. ಈ ವಿಚಾರ ದೇಶದಾದ್ಯಂತ ಚರ್ಚೆಗೆ ಗ್ರಾಸವಾಗಿತ್ತು.