ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕಡಿಮೆ ಬಡ್ಡಿ ದರದಲ್ಲಿ ರೈತರಿಗೆ 20 ಲಕ್ಷ ರೂ. ವರೆಗೆ ಸಾಲ: ಸಿದ್ದರಾಮಯ್ಯ

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ 200 ಯೂನಿಟ್ ಉಚಿತ ವಿದ್ಯುತ್ ಮತ್ತು ಪ್ರತಿ ಮಹಿಳೆಗೆ ತಿಂಗಳಿಗೆ 2,000 ರೂ. ನೀಡುವ ಭರವಸೆ ನೀಡಿದ ನಂತರ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಮಂಗಳವಾರ ಮತ್ತೊಂದು ಅಚ್ಚರಿ ಘೋಷಣೆಯನ್ನು ಮಾಡಿದ್ದಾರೆ.
ಸಿದ್ದರಾಮಯ್ಯ
ಸಿದ್ದರಾಮಯ್ಯ

ತುಮಕೂರು: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ 200 ಯೂನಿಟ್ ಉಚಿತ ವಿದ್ಯುತ್ ಮತ್ತು ಪ್ರತಿ ಮಹಿಳೆಗೆ ತಿಂಗಳಿಗೆ 2,000 ರೂ. ನೀಡುವ ಭರವಸೆ ನೀಡಿದ ನಂತರ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಮಂಗಳವಾರ ಮತ್ತೊಂದು ಅಚ್ಚರಿ ಘೋಷಣೆಯನ್ನು ಮಾಡಿದ್ದಾರೆ.

ತುಮಕೂರಿನಲ್ಲಿ ನಡೆದ ಪ್ರಜಾಧ್ವನಿ ಯಾತ್ರೆಯಲ್ಲಿ ಮಾತನಾಡಿದ ಅವರು, ಶೇ 3ರಷ್ಟು ಬಡ್ಡಿ ದರದಲ್ಲಿ ನೀಡುತ್ತಿರುವ ಸಾಲದ ಮೊತ್ತವನ್ನು ರೂ.10 ಲಕ್ಷದಿಂದ ರೂ.20 ಲಕ್ಷಕ್ಕೆ ಏರಿಕೆ ಮಾಡಲಾಗುವುದು. ಕೊಬ್ಬರಿಗೆ ಪ್ರೋತ್ಸಾಹ ಧನ ನೀಡಲಾಗುವುದು ಎಂದು ಘೋಷಿಸಿದ್ದಾರೆ.

“ಸರ್ಕಾರದ ಸಹಕಾರಿ ಬ್ಯಾಂಕ್‌ಗಳಿಂದ ಶೂನ್ಯ ಬಡ್ಡಿದರದಲ್ಲಿ 3 ಲಕ್ಷ ರೂಪಾಯಿಗಳ ಅಲ್ಪಾವಧಿಯ ಬೆಳೆ ಸಾಲವನ್ನು 5 ಲಕ್ಷ ರೂಪಾಯಿಗಳಿಗೆ ಮತ್ತು 10 ಲಕ್ಷ ರೂಪಾಯಿಗಳ ದೀರ್ಘಾವಧಿ ಸಾಲವನ್ನು ಶೇಕಡಾ 3 ರ ಬಡ್ಡಿದರದಲ್ಲಿ 20 ಲಕ್ಷಕ್ಕೆ ಹೆಚ್ಚಿಸಲಾಗುವುದು ಎಂದು ಹೇಳಿದ್ದಾರೆ.

ಇದೇ ವೇಳೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲಾ ಅವರು ಚುನಾವಣೆಗೂ ಮುನ್ನ ಪಕ್ಷವು ಇಂತಹ ಚುನಾವಣಾ ಭರವಸೆಗಳ ಯೋಜನೆಗಳನ್ನು ಘೋಷಿಸುತ್ತಲೇ ಇರಲಿದೆ ಎಂಬ ಸುಳಿವನ್ನೂ ನೀಡಿದ್ದಾರೆ.

ಬಳಿಕ ಯೋಜನೆಗಳನ್ನು ಸಮರ್ಥಿಸಿಕೊಂಡ ಅವರು, ಸರ್ಕಾರದಲ್ಲಿ ಶೇಕಡಾ 40 ರಷ್ಟು ಕಮಿಷನ್ ಅನ್ನು ಕೊನೆಗೊಳಿಸಿದ್ದೇ ಆದರೆ, ನಾವು 7,000 ಕೋಟಿ ರೂಪಾಯಿಗಳನ್ನು ಉಳಿಸಬಹುದು ಎಂದು ತಿಳಿಸಿದರು.

ಜೆಡಿಎಸ್ ಪಕ್ಷವನ್ನು ಬಿಟೀಂ ಎಂದು ಸುರ್ಜೇವಾಲಾ ಕರೆದಿದ್ದರು. ಈ ಹೇಳಿಕೆ ವಿರುದ್ಧ ಹೆಚ್'ಡಿ,ಕುಮಾರಸ್ವಾಯವರು ವಾಗ್ದಾಳಿ ನಡೆಸಿದ್ದರು.

ಕುಮಾರಸ್ವಾಮಿಯವರ ಹೇಳಿಕೆ ಕುರಿತು ಮಾತನಾಡಿ, ಬಿಜೆಪಿ ಮುಸ್ಲಿಮರನ್ನು ಬಹಿರಂಗವಾಗಿ ದ್ವೇಷಿಸುತ್ತಿದ್ದರೆ, ಜೆಡಿಎಸ್ ತೆರೆಮರೆಯಲ್ಲಿ ಈ ಕೆಲಸವನ್ನು ಮಾಡುತ್ತಿದೆ ಎಂದರು.

ಜೆಡಿಎಸ್ ಅನ್ನು ನಂಬಬೇಡಿ ಎಂದು ನಾನು ಸಮುದಾಯದ ಜನರಲ್ಲಿ ಮನವಿ ಮಾಡುತ್ತೇನೆ. 2006ರಲ್ಲಿ ಎನ್‌.ಧರಮ್‌ಸಿಂಗ್‌ ನೇತೃತ್ವದ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಸರ್ಕಾರವನ್ನು ಪತನಗೊಳಿಸಿದ ಕುಮಾರಸ್ವಾಮಿ ಕೋಮುವಾದಿ ಬಿಜೆಪಿ ಜತೆಗೂಡಿ ಸಮ್ಮಿಶ್ರ ಸರ್ಕಾರ ರಚಿಸಿದ್ದರು. ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡಲು ಕಾಂಗ್ರೆಸ್ ಜೆಡಿಎಸ್ ಮನೆ ಬಾಗಿಲಿಗೆ ಹೋಗಿದ್ದು, ಅವರು ಒಳ್ಳೆಯವರು ಎಂದು ಭಾವಿಸಿ ಅಲ್ಲ, ಬಿಜೆಪಿಯನ್ನು ಅಧಿಕಾರದಿಂದ ದೂರವಿಡುವ ಸಲುವಾಗಿಯಷ್ಟೇ ಎಂದು ಹೇಳಿದರು.

ಇದೇ ವೇಳೆ ಬಿಜೆಪಿ ಹಾಗೂ ಕಾಂಗ್ರೆಸ್ ಸರಕಾರಗಳ ಅವಧಿಯಲ್ಲಿ ನಡೆದಿರುವ ಎಲ್ಲ ಹಗರಣಗಳ ತನಿಖೆಗೆ ಸುಪ್ರೀಂ ಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ಸಮಿತಿ ರಚಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಸವಾಲು ಹಾಕಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com