ಹಳೇ ಮೈಸೂರು ಭಾಗದಲ್ಲಿ ಸಿದ್ದರಾಮಯ್ಯ ಸ್ಪರ್ಧಿಸುತ್ತಾರೆ: ಭವಿಷ್ಯ ನುಡಿದ ಮಾಜಿ ಸಿಎಂ ಯಡಿಯೂರಪ್ಪ

ಸಿಎಲ್‌ಪಿ ನಾಯಕ ಸಿದ್ದರಾಮಯ್ಯ ಅವರು ಕೋಲಾರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುವ ಸಾಧ್ಯತೆಗಳಿಲ್ಲ, ಮುಂಬರುವ ವಿಧಾನಸಭಾ ಚುನಾವಣೆಗೆ ಮೈಸೂರು ಜಿಲ್ಲೆಯ ಒಂದು ಕ್ಷೇತ್ರದಲ್ಲಿ ಸ್ಪರ್ಧೆಮಾಡುತ್ತಾರೆ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಸೋಮವಾರ ಭವಿಷ್ಯ ನುಡಿದಿದ್ದು, ಈ ಹೇಳಿಗೆ ರಾಜ್ಯ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗಳಿಗೆ ಗ್ರಾಸವಾಗಿದೆ.
ಮಾಜಿ ಸಿಎಂ ಯಡಿಯೂರಪ್ಪ.
ಮಾಜಿ ಸಿಎಂ ಯಡಿಯೂರಪ್ಪ.

ಬೆಂಗಳೂರು: ಸಿಎಲ್‌ಪಿ ನಾಯಕ ಸಿದ್ದರಾಮಯ್ಯ ಅವರು ಕೋಲಾರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುವ ಸಾಧ್ಯತೆಗಳಿಲ್ಲ, ಮುಂಬರುವ ವಿಧಾನಸಭಾ ಚುನಾವಣೆಗೆ ಮೈಸೂರು ಜಿಲ್ಲೆಯ ಒಂದು ಕ್ಷೇತ್ರದಲ್ಲಿ ಸ್ಪರ್ಧೆಮಾಡುತ್ತಾರೆ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಸೋಮವಾರ ಭವಿಷ್ಯ ನುಡಿದಿದ್ದು, ಈ ಹೇಳಿಗೆ ರಾಜ್ಯ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗಳಿಗೆ ಗ್ರಾಸವಾಗಿದೆ.

ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ ಅವರು ಸಿದ್ದರಾಮಯ್ಯ ಕೋಲಾರದಿಂದ ಸ್ಪರ್ಧಿಸುವುದಿಲ್ಲ. ಇದು ಕೇವಲ ನಾಟಕವಷ್ಟೇ. ಹಳೇ ಮೈಸೂರು ಭಾಗದಲ್ಲಿ ಸ್ಪರ್ಧಿಗಿಳಿಯಲಿದ್ದಾರೆ. ಆದರೆ, ಅವರು ಎಲ್ಲಿಯೇ ಸ್ಪರ್ಧಿಸಿದರೂ ಸೋಲು ಕಟ್ಟಿಟ್ಟಬುತ್ತಿ ಎಂದು ಹೇಳಿದ್ದಾರೆ.

ಮೂಲಗಳ ಪ್ರಕಾರ, ವರುಣಾದಿಂದ ಸಿದ್ದರಾಮಯ್ಯ ಸ್ಪರ್ಧಿಸಿದರೆ ಯಡಿಯೂರಪ್ಪ ಅವರ ಪುತ್ರ ಬಿವೈ ವಿಜಯೇಂದ್ರ ಅವರನ್ನು ಸಿದ್ದರಾಮಯ್ಯ ವಿರುದ್ಧ ಕಣಕ್ಕಿಳಿಸಲು ಆರ್‌ಎಸ್‌ಎಸ್ ಚಿಂತನೆ ನಡೆಸಿತ್ತು. ಈ ಬಗ್ಗೆ ಮಾಹಿತಿ ತಿಳಿದುಕೊಂಡ ಸಿದ್ದರಾಮಯ್ಯ ಅವರು ತಮ್ಮ ತಂತ್ರವನ್ನು ಬದಲಿಸಿದ್ದರು ಎಂದು ತಿಳಿದುಬಂದಿದೆ.

2018ರ ವಿಧಾನಸಭಾ ಚುನಾವಣೆಯಲ್ಲಿ ವಿಜಯೇಂದ್ರ ಅವರು, ವರುಣಾ ಕ್ಷೇತ್ರದಿಂದ ಸ್ಪರ್ಧಿಸಲು ನಿರ್ಧರಿಸಿದ್ದರು. ಈ ವೇಳೆ ನಾಮಪತ್ರ ಸಲ್ಲಿಸಲೂ ಮಂದಾಗಿದ್ದರು. ಆದರೆ, ಕೊನೆಯ ಗಳಿಗೆಯಲ್ಲಿ ಬಿಜೆಪಿ ನಾಯಕರು ನಾಮಪತ್ರ ಸಲ್ಲಿಸದಂತೆ ಸಲಹೆ ನೀಡಿದ್ದರು. ಇದರಿಂದಾಗಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಅವರು ಸ್ಪರ್ಧಿಸಿ, ಸುಲಭವಾಗಿ ಗೆಲ್ಲಲು ಸಹಾಯ ಮಾಡಿತ್ತು.

ಈ ಬಾರಿ ಹೈ ಕಮಾಂಡ್ ಘೋಷಣೆ ಮಾಡುವುದಕ್ಕೂ ಮುನ್ನವೇ ಯಡಿಯೂರಪ್ಪ ಅವರು ವಿಜಯೇಂದ್ರ ಅವರು ಶಿಕಾರಿಪುರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆಂದು ಘೋಷಿಸಿದ್ದಾರೆ. ಆದರೆ, ಆರ್'ಎಸ್ಎಸ್ ಹಾಗೂ ಬಿಜೆಪಿ ನಾಯಕರು ವಿಜಯೇಂದ್ರ ಅವರನ್ನು ವರುಣಾ ಕ್ಷೇತ್ರದಿಂದ ನಿಲ್ಲಿಸಲು ಚಿಂತನೆ ನಡೆಸಿದ್ದಾರೆಂದು ತಿಳಿದುಬಂದಿದೆ.

ಯಡಿಯೂರಪ್ಪ ವರ್ಚಸ್ಸನ್ನು ಬಳಸಿ ಶಿಕಾರಿಪುರದಲ್ಲಿ ಗೆಲ್ಲುವುದು ಹಾಗೂ ವಿಜಯೇಂದ್ರ ಅವರ ಸಂಘಟನಾ ಕೌಶಲ್ಯದಿಂದ ವರುಣಾ ಕ್ಷೇತ್ರದಲ್ಲಿ ಗಲ್ಲುವುದು ಬಿಜೆಪಿ ಹಾಗೂ ಆರ್'ಎಸ್ಎಸ್ ತಂತ್ರವಾಗಿದೆ.

ಇದನ್ನು ಮನಗಂಡಿಸುವ ಸಿದ್ದರಾಮಯ್ಯ ಅವರು ಸಾಕಷ್ಟು ಹಿಂದುಳಿದವರು, ಅಲ್ಪಸಂಖ್ಯಾತರು ಮತ್ತು ದಲಿತರಿರುವ ಕೋಲಾರ ಕ್ಷೇತ್ರವನ್ನು ಆಯ್ಕೆ ಮಾಡಿಕೊಂಡಿದ್ದಾರೆಂದು ತಿಳಿದುಬಂದಿದೆ.

'ಅಮಿತ್ ಶಾ ಅವರು ಪಕ್ಷಕ್ಕಾಗಿ ವರುಣಾ ಕ್ಷೇತ್ರದಿಂದ ಸ್ಪರ್ಧಿಸುವಂತೆ ವಿಜಯೇಂದ್ರಗೆ ಸೂಚನೆ ನೀಡಿದ್ದೇ ಆದರೆ, ಸಿದ್ದರಾಮಯ್ಯ ಅವರು ಕೋಲಾರದಲ್ಲಿ ಸ್ಪರ್ಧಿಸುವುದು ಖಚಿತ ಎಂದು ಬಿಜೆಪಿ ಮೂಲಗಳು ತಿಳಿಸಿವೆ. ಆದರೆ, ವರುಣಾ ಮತ್ತು ಕೋಲಾರ ಎರಡೂ ಕ್ಷೇತ್ರಗಳಲ್ಲಿ ತಮ್ಮದೇ ಆದ ಸಮೀಕ್ಷೆಯನ್ನು ನಡೆಸುತ್ತಿರುವ ಸಿದ್ದರಾಮಯ್ಯ ಅವರು, ಅಂತಿಮವಾಗಿ ಫೆಬ್ರವರಿ ಸಮೀಕ್ಷೆಯ ಆಧಾರದ ಮೇಲೆ ಅವುಗಳಲ್ಲಿ ಒಂದನ್ನು ಆಯ್ಕೆ ಮಾಡಿಕೊಳ್ಳಲಿದ್ದಾರೆಂದು ಮೂಲಗಳು ತಿಳಿಸಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com