ಆಂತರಿಕ ಕಚ್ಚಾಟ ಮರೆಮಾಚಲು ಕಾಂಗ್ರೆಸ್ ಸುಳ್ಳು ಭರವಸೆ ನೀಡುತ್ತಿದೆ: ಅರುಣ್ ಸಿಂಗ್

ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರ್ಕಾರದ ಕಾರ್ಯವೈಖರಿ ಹಾಗೂ ಕಾಂಗ್ರೆಸ್ ನಲ್ಲಿನ ಆಂತರಿಕ ಕಚ್ಚಾಟದಿಂದ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 150 ಸ್ಥಾನಗಳನ್ನು ಗೆಲ್ಲಲಿದೆ’ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ಉಸ್ತುವಾರಿ ಅರುಣ್ ಸಿಂಗ್ ಹೇಳಿದ್ದಾರೆ.
ಅರುಣ್ ಸಿಂಗ್
ಅರುಣ್ ಸಿಂಗ್

ಹುಬ್ಬಳ್ಳಿ: ‘ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರ್ಕಾರದ ಕಾರ್ಯವೈಖರಿ ಹಾಗೂ ಕಾಂಗ್ರೆಸ್ ನಲ್ಲಿನ ಆಂತರಿಕ ಕಚ್ಚಾಟದಿಂದ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 150 ಸ್ಥಾನಗಳನ್ನು ಗೆಲ್ಲಲಿದೆ’ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ಉಸ್ತುವಾರಿ ಅರುಣ್ ಸಿಂಗ್ ಅವರು ಶುಕ್ರವಾರ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕದಲ್ಲಿ ಕಾಂಗ್ರೆಸ್ ಒಡೆದ ಮನೆಯಾಗಿದೆ. “ಚುನಾವಣೆ ಫಲಿತಾಂಶಕ್ಕೆ ಮುಂಚೆಯೇ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮತ್ತು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನೇತೃತ್ವದ ಎರಡು ಗುಂಪುಗಳು ತಮ್ಮ ನಾಯಕನಿಗೆ ಸಿಎಂ ಸ್ಥಾನವನ್ನು ನೀಡುವಂತೆ ಆಗ್ರಹಿಸುತ್ತಿದ್ದಾರೆ. ಈ ನಾಯಕರು ರಾಜ್ಯದ ಜನರ ಕಲ್ಯಾಣವನ್ನು ಹೇಗೆ ಖಚಿತಪಡಿಸುತ್ತಾರೆ? ಎಂದು ಪ್ರಶ್ನಿಸಿದ್ದಾರೆ.

ಪಕ್ಷದಲ್ಲಿನ ಗುಂಪುಗಾರಿಕೆಯನ್ನು ಸರಿದೂಗಿಸಲು ಕಾಂಗ್ರೆಸ್ ನಾಯಕರು ಉಚಿತ ವಿದ್ಯುತ್ ಎಂಬ ಸುಳ್ಳು ಭರವಸೆಗಳನ್ನು ನೀಡುತ್ತಿದ್ದಾರೆ, 2018 ರಲ್ಲಿ ಪಕ್ಷ ಅಧಿಕಾರಕ್ಕೆ ಬಂದಾಗ ಅಂದಿನ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ರೈತರ ಬೆಳೆ ಸಾಲ ಮನ್ನಾ ಮಾಡುವುದಾಗಿ ಭರವಸೆ ನೀಡಿದ್ದರು, ಆದರೆ ಇದುವರೆಗೆ ಅವರ ರಾಜಸ್ಥಾನದ ಸರ್ಕಾರ ಒಂದೇ ಒಂದು ರೂಪಾಯಿಯನ್ನು ಮನ್ನಾ ಮಾಡಿಲ್ಲ ಎಂದು ವಾಗ್ಧಾಳಿ ನಡೆಸಿದರು.

ಇದೇ ವೇಳೆ ಕಾಂಗ್ರೆಸ್ ಅನ್ನು ಸುಳ್ಳು ಆಶ್ವಾಸನೆಗಳ ವ್ಯಾಪಾರಿ ಎಂದು ಬಣ್ಣಿಸಿದ ಅವರು, ರಾಜಸ್ಥಾನದ ಅಶೋಕ್ ಗೆಹ್ಲೋಟ್ ಸರ್ಕಾರವು ಯುವಕರಿಗೆ ತಿಂಗಳಿಗೆ ರೂ 3,500 ನಿರುದ್ಯೋಗ ಭತ್ಯೆ ನೀಡುವುದಾಗಿ ಭರವಸೆ ನೀಡಿತ್ತು ಆದರೆ, ಅದನ್ನು ಇನ್ನೂ ಈಡೇರಿಸಿಲ್ಲ. 2018ರ ವಿಧಾನಸಭಾ ಚುನಾವಣೆಗೆ ಮುನ್ನ ನೀಡಿದ್ದ ಹಲವಾರು ಭರವಸೆಗಳನ್ನು ಈಡೇರಿಸುವಲ್ಲಿ ಕಾಂಗ್ರೆಸ್ ನೇತೃತ್ವದ ಛತ್ತೀಸ್‌ಗಢ ಸರ್ಕಾರವೂ ವಿಫಲವಾಗಿದೆ ಎಂದು ತಿಳಿಸಿದ್ದಾರೆ.

ಈ ನಡುವೆ ಹಿಂದಿನ ಚುನಾವಣಾ ಪ್ರಚಾರದ ಸಮಯದಲ್ಲಿ ನೀಡಿದ್ದ ವಿವಿಧ ಭರವಸೆಗಳನ್ನು ಈಡೇರಿಸುವಲ್ಲಿ ಬಿಜೆಪಿ ಸರ್ಕಾರದ ವಿಫಲವಾಗಿರುವ ಕುರಿತ ಪ್ರಶ್ನೆಗಳಿಗೆ ಉತ್ತರಿಸಲು ಸಿಂಗ್ ನಿರಾಕರಿಸಿ, ಪ್ರಸ್ತುತದ ಆರ್ಥಿಕ ಪರಿಸ್ಥಿತಿಯಲ್ಲಿ ಬಿಜೆಪಿ ಅತ್ಯುತ್ತವಾಗಿ ಕಾರ್ಯನಿರ್ವಹಿಸಿದೆ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com