ಭವಾನಿ ಅಕ್ಕ ಬಯಸಿದರೆ ಹಾಸನದಿಂದ ಟಿಕೆಟ್ ಕೊಡಲು ಬಿಜೆಪಿ ಸಿದ್ಧ- ಸಿ.ಟಿ ರವಿ: ದೇಶ ಒಡೆದಷ್ಟು ಸುಲಭವಲ್ಲ ದೇವೇಗೌಡರ ಮನೆ ಒಡೆಯುವುದು: ಎಚ್ ಡಿಕೆ
ಭವಾನಿ ರೇವಣ್ಣ ಅವರು ಬಿಜೆಪಿಯಿಂದ ಸ್ಪರ್ಧಿಸಲು ಬಯಸಿದರೆ ಹಾಸನದಿಂದ ಟಿಕೆಟ್ ಕೊಡಲು ತಮ್ಮ ಪಕ್ಷ ಸಿದ್ಧವಿದೆ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಹೇಳಿದ್ದಾರೆ.
Published: 28th January 2023 01:33 PM | Last Updated: 28th January 2023 03:07 PM | A+A A-

ಎಚ್.ಡಿ ಕುಮಾರಸ್ವಾಮಿ ಮತ್ತು ಸಿ.ಟಿ ರವಿ
ಹಾಸನ: ಭವಾನಿ ರೇವಣ್ಣ ಅವರು ಬಿಜೆಪಿಯಿಂದ ಸ್ಪರ್ಧಿಸಲು ಬಯಸಿದರೆ ಹಾಸನದಿಂದ ಟಿಕೆಟ್ ಕೊಡಲು ತಮ್ಮ ಪಕ್ಷ ಸಿದ್ಧವಿದೆ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಹೇಳಿದ್ದಾರೆ.
ಹಾಸನ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ನಲ್ಲಿ ನಡೆಯುತ್ತಿರುವ ಟಿಕೆಟ್ ಫೈಟ್ ಬಗ್ಗೆ ಚಿಕ್ಕಮಗಳೂರಿನಲ್ಲಿ ಪ್ರತಿಕ್ರಿಯಿಸಿದ ಸಿ.ಟಿ.ರವಿ ಭವಾನಿ ರೇವಣ್ಣ ಅವರು ಬಿಜೆಪಿಯಿಂದ ಸ್ಪರ್ಧಿಸಲು ಬಯಸಿದರೆ ಟಿಕೆಟ್ ಕೊಡಲು ಸಿದ್ಧ. ಭವಾನಿ ಅಕ್ಕ ನಮ್ಮ ಪಕ್ಷದಿಂದ ಸ್ಪರ್ಧಿಸಬೇಕೆಂದು ಬಯಸಿದರೆ ಹೊಳೆನರಸೀಪುರ ಕ್ಷೇತ್ರದ ಅಭ್ಯರ್ಥಿಯಾಗಲಿ. ಆ ಕ್ಷೇತ್ರಕ್ಕೆ ಭವಾನಿ ಅವರಿಗಿಂತ ಉತ್ತಮ ಅಭ್ಯರ್ಥಿ ಸಿಗಲ್ಲ ಎಂದು ಹೇಳಿದ್ದಾರೆ.
ಸಿ.ಟಿ ರವಿ ಹೊಳೆನರಸೀಪುರ ಕ್ಷೇತ್ರದಿಂದ ಸ್ಪರ್ಧಿಸಲು ಭವಾನಿ ರೇವಣ್ಣರಿಗೆ ಬಿಜೆಪಿ ಟಿಕೆಟ್ ಆಫರ್ ನೀಡಿರುವ ಬಗ್ಗೆ ರಾಯಚೂರಿನಲ್ಲಿ ಪ್ರತಿಕ್ರಿಯಿಸಿದ ಎಚ್ಡಿ ಕುಮಾರಸ್ವಾಮಿ ಬಿಜೆಪಿಯವರಿಗೆ ಮನೆ ಒಡೆಯೋ ಅಭ್ಯಾಸವಿದೆ. ಅವರು ದೇಶಾನೇ ಹೊಡೆದವರಿಗೆ ಮನೆ ಒಡೆಯೋದು ಸರಳ, ಆದರೆ ದೇವೇಗೌಡರ ಮನೆಯನ್ನು ಒಡೆಯೋದು ಸುಲಭ ಅಲ್ಲ. ಹೊಳೆ ನರಸೀಪುರದಲ್ಲಿ ಭವಾನಿ ಅವರಿಗೆ ಟಿಕೆಟ್ ಕೊಡಲಿ ಸಂತೋಷ ಎಂದರು.