ಬಿಜೆಪಿ ಜೊತೆ ನಾಯಕರ 'ಒಳ ಒಪ್ಪಂದ' ದಿಂದ ಸರ್ಕಾರ ರಚಿಸಬೇಕೆಂಬ ಕಾಂಗ್ರೆಸ್ ಆಶಯಕ್ಕೆ ಧಕ್ಕೆ: ಮ್ಯಾಜಿಕ್ ನಂಬರ್ ಗಳಿಸಲು 'ಕೈ' ಚಡಪಡಿಕೆ!
ರಾಜ್ಯದಲ್ಲಿ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಬೇಕೆಂಬ ಕಾಂಗ್ರೆಸ್ ನಾಯಕರು ಹಪಾಹಪಿ ಮುಂದುವರಿದಿದೆ. ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲಿದೆ ಎಂದು ಕಾಂಗ್ರೆಸ್ ನಡೆಸಿದ ಸಮೀಕ್ಷೆಯಿಂದ ಬಹಿರಂಗವಾಗಿದೆ.
Published: 28th January 2023 10:03 AM | Last Updated: 28th January 2023 03:04 PM | A+A A-

ಕಾಂಗ್ರೆಸ್ ನಾಯಕರು
ಬೆಂಗಳೂರು: ರಾಜ್ಯದಲ್ಲಿ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಬೇಕೆಂಬ ಕಾಂಗ್ರೆಸ್ ನಾಯಕರು ಹಪಾಹಪಿ ಮುಂದುವರಿದಿದೆ. ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲಿದೆ ಎಂದು ಕಾಂಗ್ರೆಸ್ ನಡೆಸಿದ ಸಮೀಕ್ಷೆಯಿಂದ ಬಹಿರಂಗವಾಗಿದೆ.
ಆದರೆ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ ಬಿ ಪಾಟೀಲ್ ನಡೆಸಿರುವ ಸ್ಟಿಂಗ್ ಆಪರೇಶನ್ ಪ್ರಕಾರ ಕೆಲವು ಕಾಂಗ್ರೆಸ್ ನಾಯಕರು ಮತ್ತು ಬಿಜೆಪಿ ಒಳ ಒಪ್ಪಂದ ಮಾಡಿಕೊಂಡಿದ್ದಾರೆ ಎಂದು ಸಮೀಕ್ಷೆಯಿಂದ ತಿಳಿದು ಬಂದಿದೆ. ಈ ರಾಜಕೀಯ ತಂತ್ರ ಹೊಸತಲ್ಲ, ಹಲವು ವರ್ಷಗಳಿಂದ ಚಾಲ್ತಿಯಲ್ಲಿದೆ, ಈ ವಿಧಾನ ವಿಧಾನಸಭೆ ಚುನಾವಣೆಯಲ್ಲಿ ಬಹುಮತ ಗಳಿಸುವ ಕಾಂಗ್ರೆಸ್ ಆಶಯಕ್ಕೆ ಧಕ್ಕೆ ತರುವ ಸಾಧ್ಯತೆಯಿದೆ.
ಈ ಸಮೀಕ್ಷೆಯ ವರದಿಯನ್ನು ಪಕ್ಷದ ಹೈಕಮಾಂಡ್‌ಗೆ ಕಳುಹಿಸುವ ಸಾಧ್ಯತೆಯಿದೆ, ಇದು ಪಕ್ಷದ ಹಿರಿಯರು ತಮ್ಮ ಸ್ವಂತ ಕ್ಷೇತ್ರಗಳಿಗೆ ಸೀಮಿತವಾಗುವಂತೆ ಹಾಗೂ ಅಕ್ಕಪಕ್ಕದ ಕ್ಷೇತ್ರಗಳಲ್ಲಿ ಹಸ್ತಕ್ಷೇಪ ಮಾಡದಂತೆ ಆದೇಶವನ್ನು ಹೊರಡಿಸಬಹುದು.
ಉತ್ತರ ಕನ್ನಡ, ಮಡಿಕೇರಿ, ಬೀದರ್, ಕಲಬುರಗಿ, ಶಿವಮೊಗ್ಗ, ದಾವಣಗೆರೆ, ಕೋಲಾರ, ತುಮಕೂರು ಜಿಲ್ಲೆಗಳ 67 ಸ್ಥಾನಗಳಲ್ಲಿ ಕಾಂಗ್ರೆಸ್ ನ ಮೂರು ತಂಡಗಳು ಸಮೀಕ್ಷೆ ನಡೆಸಿವೆ. 'ಹೊಂದಾಣಿಕೆ' ರಾಜಕೀಯ ಮತ್ತು ಆಂತರಿಕ ಕಚ್ಚಾಟದಲ್ಲಿ ಕಾಂಗ್ರೆಸ್ 45 ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಬಹುದು ಎಂದು ತಿಳಿದು ಬಂದಿದೆ.
ಕಾರವಾರದಲ್ಲಿ ಮಾಜಿ ಸಚಿವ ಆರ್.ವಿ.ದೇಶಪಾಂಡೆ ಅವರ ಪಕ್ಷಾತೀತ ಸಂಬಂಧ ಕಾಂಗ್ರೆಸ್ ಅಭ್ಯರ್ಥಿಗಳ ಮೇಲೆ ಪ್ರತಿಕೂಲ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಸಮೀಕ್ಷೆಯಿಂದ ತಿಳಿದುಬಂದಿದೆ.
ಇದನ್ನೂ ಓದಿ: ಅತಂತ್ರ ಸ್ಥಿತಿಯಲ್ಲಿ ಬಿಜೆಪಿಯ ವಲಸಿಗ ಸಚಿವರು (ಸುದ್ದಿ ವಿಶ್ಲೇಷಣೆ)
ತುಮಕೂರಿನಲ್ಲಿ ಸಿದ್ದರಾಮಯ್ಯ ಬೆಂಬಲಿಗ ಕೆ.ಎನ್.ರಾಜಣ್ಣ ಹಾಗೂ ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಅವರು ಬಹಿರಂಗ ಸಮರ ಸಾರಿದ್ದಾರೆ. 2019ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯ ಜಿ.ಎಸ್.ಬಸವರಾಜು ಅವರನ್ನು ಬಹಿರಂಗವಾಗಿ ಬೆಂಬಲಿಸಿದ್ದಾರೆ.
ಈ ಬಾರಿ ಮಧುಗಿರಿಯ ಆಕಾಂಕ್ಷಿಯಾಗಿರುವ ರಾಜಣ್ಣ ತುಮಕೂರು ನಗರದಲ್ಲಿ ಬಸವರಾಜು ಪುತ್ರ ಜಿ.ಬಿ.ಜ್ಯೋತಿಗಣೇಶ್ ಗೆ ಹಾಗೂ ಕೊರಟಗೆರೆಯಲ್ಲಿ ಪರಮೇಶ್ವರ್ ವಿರುದ್ಧ ಕಣಕ್ಕಿಳಿಯುವ ಬಿಜೆಪಿ ಅಭ್ಯರ್ಥಿಗೆ ಸಹಾಯ ಮಾಡಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.
ಮ್ಯಾಜಿಕ್ ನಂಬರ್ 113 ತಲುಪಲು ಕಾಂಗ್ರೆ,ಸ್ ಪಕ್ಷವು ಸ್ವತಂತ್ರ ಶಾಸಕ ಶರತ್ ಬಚ್ಚೇಗೌಡ ಬಿಜೆಪಿಗೆ ಬಂದರೆ ಕೆಆರ್ ಪೇಟೆ ಶಾಸಕ ಹಾಗೂ ಸಚಿವ ನಾರಾಯಣಗೌಡ, ಹೊಸಕೋಟೆಯ ಮಾಜಿ ಶಾಸಕ ಎಂಟಿಬಿ ನಾಗರಾಜ್ ಮತ್ತು ಯಶವಂತಪುರ ಶಾಸಕ ಎಸ್ ಟಿ ಸೋಮಶೇಖರ್ ಅವರನ್ನು ಪಕ್ಷಕ್ಕೆ ಕರೆತರಲು ಸಿದ್ಧವಾಗಿದೆ.
ಕೆಆರ್ ಪುರಂ ಶಾಸಕ ಬೈರತಿ ಬಸವರಾಜ್ ಕಾಂಗ್ರೆಸ್ ಗೆ ಮರಳುವ ಸಾಧ್ಯತೆ ಇಲ್ಲದಿರುವುದರಿಂದ ಅವರ ಪ್ರತಿಸ್ಪರ್ಧಿ ಹಾಗೂ ಬಿಜೆಪಿಯ ಮಾಜಿ ಶಾಸಕ ನಂದೀಶ್ ರೆಡ್ಡಿ ಅವರನ್ನು ಕಣಕ್ಕಿಳಿಸಲು ಪಕ್ಷ ಪ್ರಯತ್ನಿಸುತ್ತಿದೆ ಎಂದು ಮೂಲಗಳು ತಿಳಿಸಿವೆ.