ಯಾವುದೇ ಕಾರಣಕ್ಕೂ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ; ಬಿಜೆಪಿ ಋಣ ತೀರಿಸಲು ರಾಜ್ಯಾದ್ಯಂತ ಸಂಚಾರ: ಬಿ.ಎಸ್.ಯಡಿಯೂರಪ್ಪ
ನನಗೀಗ 80 ವರ್ಷ, ಯಾವುದೇ ಕಾರಣಕ್ಕೂ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಶಾಸಕ ಬಿ.ಎಸ್.ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.
Published: 30th January 2023 08:53 AM | Last Updated: 30th January 2023 05:19 PM | A+A A-

ಬಿ.ಎಸ್ ಯಡಿಯೂರಪ್ಪ
ಬೆಳಗಾವಿ: ನನಗೀಗ 80 ವರ್ಷ, ಯಾವುದೇ ಕಾರಣಕ್ಕೂ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಶಾಸಕ ಬಿ.ಎಸ್.ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಬಂದಿದ್ದೇನೆ. ನನಗೀಗ 80 ವರ್ಷ ವಯಸ್ಸಾಗುತ್ತಿದೆ. ಹೀಗಾಗಿ ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸದಿರಲು ತೀರ್ಮಾನಿಸಿದ್ದೇನೆ. ಆದರೆ, ಪಕ್ಷದ ಸಂಘಟನೆಗಾಗಿ ರಾಜ್ಯದಾದ್ಯಂತ ಪ್ರವಾಸ ಮಾಡುತ್ತೇನೆ’ ಎಂದರು.
‘ಮಗ ರಾಘವೇಂದ್ರ ಸಂಸದ, ಮತ್ತೊಬ್ಬ ಮಗ ವಿಜಯೇಂದ್ರ ಕೂಡ ಬಿಜೆಪಿ ಗಟ್ಟಿಗೊಳಿಸಲು ರಾಜ್ಯ ಪ್ರವಾಸ ಮಾಡುತ್ತಿದ್ದಾರೆ. ನಾನು ರಾಜಕೀಯದಿಂದ ನಿವೃತ್ತಿ ಹೊಂದಿಲ್ಲ. ಈ ಚುನಾವಣೆಯಲ್ಲಿ ಓಡಾಡುತ್ತೇನೆ. ದೇವರು ಶಕ್ತಿ ಕೊಟ್ಟರೆ ಮುಂದಿನ ಚುನಾವಣೆವರೆಗೂ ಪಕ್ಷಕ್ಕಾಗಿ ದುಡಿಯುತ್ತೇನೆ. ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ತರಲು ಪ್ರಯತ್ನಿಸುತ್ತೇನೆ’ ಎಂದು ಹೇಳಿದರು.
ಇದನ್ನೂ ಓದಿ: ಯಡ್ಡಿಯೂರಪ್ಪನವರಿಗೆ ಕಲ್ಲು ಹೊಡೆದ್ರೆ ಪೆಟ್ಟು ಬೀಳೋದು ಬಿಜೆಪಿಗೇ: ಬಿವೈ ವಿಜಯೇಂದ್ರ
‘ರಾಜ್ಯದಲ್ಲಿ ಪಕ್ಷವೂ ನನಗೆ ಸ್ಥಾನಮಾನ, ಅಧಿಕಾರ ಮತ್ತು ಗೌರವ ಕೊಟ್ಟಿದೆ. ಹಾಗಾಗಿ ರಾಷ್ಟ್ರ ರಾಜಕಾರಣಕ್ಕೆ ನಾನು ಹೋಗುವುದಿಲ್ಲ. ಬಿಜೆಪಿ ಋಣ ತೀರಿಸಲು ರಾಜ್ಯಾದ್ಯಂತ ಸಂಚರಿಸುತ್ತೇನೆ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. ಸೂರ್ಯಚಂದ್ರ ಇರುವುದು ಎಷ್ಟು ಸತ್ಯವೋ, ಕರ್ನಾಟಕದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದು ಅಷ್ಟೇ ಸತ್ಯ’ ಎಂದರು.