ರಾಜ್ಯದಲ್ಲಿ ಬಿಜೆಪಿ ಗೆಲುವನ್ನು ಖಚಿತಪಡಿಸಲಿದೆ ರಥಯಾತ್ರೆ: ಅರುಣ್ ಸಿಂಗ್

ಎಪ್ರಿಲ್-ಮೇನಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ 150 ಸ್ಥಾನಗಳನ್ನು ಗೆದ್ದು ಕರ್ನಾಟಕದಲ್ಲಿ ಪಕ್ಷವು ಅಧಿಕಾರವನ್ನು ಉಳಿಸಿಕೊಳ್ಳಲಿದೆ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರು ಭಾನುವಾರ ವಿಶ್ವಾಸ ವ್ಯಕ್ತಪಡಿಸಿದ್ದಾರೆ,
ಬೆಂಗಳೂರಿನಲ್ಲಿ ಭಾನುವಾರ ನಡೆದ ಕ್ಷತ್ರಿಯ ಸಮಾವೇಶದಲ್ಲಿ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರೊಂದಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತುಕತೆ ನಡೆಸುತ್ತಿರುವುದು.
ಬೆಂಗಳೂರಿನಲ್ಲಿ ಭಾನುವಾರ ನಡೆದ ಕ್ಷತ್ರಿಯ ಸಮಾವೇಶದಲ್ಲಿ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರೊಂದಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತುಕತೆ ನಡೆಸುತ್ತಿರುವುದು.

ಬೆಂಗಳೂರು: ಎಪ್ರಿಲ್-ಮೇನಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ 150 ಸ್ಥಾನಗಳನ್ನು ಗೆದ್ದು ಕರ್ನಾಟಕದಲ್ಲಿ ಪಕ್ಷವು ಅಧಿಕಾರವನ್ನು ಉಳಿಸಿಕೊಳ್ಳಲಿದೆ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರು ಭಾನುವಾರ ವಿಶ್ವಾಸ ವ್ಯಕ್ತಪಡಿಸಿದ್ದಾರೆ,

ಬೆಂಗಳೂರಿನ ಶಿವಾಜಿನಗರದಲ್ಲಿ ನಡೆದ ವಿಜಯ ಸಂಕಲ್ಪ ಯಾತ್ರೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಚುನಾವಣೆಯಲ್ಲಿ ವಿಜಯ ಸಾಧಿಸಲು ರಥಯಾತ್ರೆಯನ್ನು ಪ್ರಾರಂಭಿಸಲಾಗುವುದು. ಈ ಸಂಬಂಧ ಚಿಂತನೆಗಳು ನಡೆಯುತ್ತಿವೆ. ಈ ರಥಯಾತ್ರೆಗೆ ನೀಲನಕ್ಷೆಯನ್ನು ಸಿದ್ಧಪಡಿಸಲಾಗುತ್ತದೆ. ಬಿಜೆಪಿಯನ್ನು ಸ್ವಂತ ಬಲದಿಂದ ಅಧಿಕಾರಕ್ಕೆ ತರಲು ಬೇಕಾದ ಸಿದ್ಧತೆಗಳೂ ನಡೆಯುತ್ತಿವೆ ಎಂದು ಹೇಳಿದ್ದಾರೆ.

'ವಿಜಯ ಸಂಕಲ್ಪ ಯಾತ್ರೆ'ಗೆ ರಾಜ್ಯಾದ್ಯಂತ ಅಭೂತಪೂರ್ವ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ರಾಜ್ಯದ ಜನರು ಬಿಜೆಪಿ ಅಧಿಕಾರದಲ್ಲಿ ಮುಂದುವರಿಯಬೇಕೆಂದು ಬಯಸುತ್ತಿದ್ದಾರೆ. ಈ ನಿಟ್ಟಿನಲ್ಲಿ ಕೇಂದ್ರ ಮತ್ತು ರಾಜ್ಯಗಳ ಯೋಜನೆಗಳನ್ನು ಹೆಚ್ಚಿನ ಜನರಿಗೆ ತಲುಪಿಸುವ ಪ್ರಯತ್ನಗಳು ನಡೆಯುತ್ತಿವೆ. ಪಕ್ಷದ ಧ್ವಜ ಹಾರಿಸುವ ಮೂಲಕ ಪ್ರತಿ ಬೂತ್‌ನ್ನು ತಲುಪಲಾಗುತ್ತಿದೆ. ಗದಗದಲ್ಲಿ ಬಹುತೇಕ ಎಲ್ಲ ಬೂತ್‌ಗಳನ್ನು ಸಂಪರ್ಕಿಸಲಾಗಿದೆ. ಅಮಿತ್ ಶಾ, ಜೆಪಿ ನಡ್ಡಾ ಮತ್ತು ನಾನು ಇಲ್ಲಿ ಪ್ರಚಾರ ಮಾಡುತ್ತಿದ್ದು, 150 ಸ್ಥಾನಗಳನ್ನು ಗೆದ್ದು ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಬರುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಮೂಲಗಳ ಪ್ರಕಾರ, ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ನೇತೃತ್ವದಲ್ಲಿ 'ರಥಯಾತ್ರೆ' ನಡೆಯಲಿದೆ ಎಂದು ಹೇಳಲಾಗುತ್ತಿದ್ದು, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಫೆಬ್ರವರಿ 27 ರಂದು ಹಾಸನದಲ್ಲಿ ರಥಯಾತ್ರೆಗೆ ಚಾಲನೆ ನೀಡುವ ಸಾಧ್ಯತೆಯಿದೆ ಎನ್ನಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com