ಕೋಲಾರದಿಂದಲೇ ಸಿದ್ದರಾಮಯ್ಯ ಸ್ಪರ್ಧೆ: ಪುತ್ರ ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟನೆ
ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಮೈಸೂರಿನ ವರುಣ ಕ್ಷೇತ್ರದಿಂದ ಸ್ಪರ್ಧಿಸುವುದಿಲ್ಲ. ಕೋಲಾರ ವಿಧಾನಸಭಾ ಕ್ಷೇತ್ರದಿಂದಲೇ ಸ್ವರ್ಧಿಸುತ್ತಾರೆ...
Published: 31st January 2023 10:10 AM | Last Updated: 31st January 2023 04:55 PM | A+A A-

ಸಂಗ್ರಹ ಚಿತ್ರ
ಕೋಲಾರ: ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಮೈಸೂರಿನ ವರುಣ ಕ್ಷೇತ್ರದಿಂದ ಸ್ಪರ್ಧಿಸುವುದಿಲ್ಲ. ಕೋಲಾರ ವಿಧಾನಸಭಾ ಕ್ಷೇತ್ರದಿಂದಲೇ ಸ್ವರ್ಧಿಸುತ್ತಾರೆ ಎಂದು ಸಿದ್ದರಾಮಯ್ಯ ಅವರ ಪುತ್ರ ಹಾಗೂ ವರುಣ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಡಾ.ಯತೀಂದ್ರ ಸಿದ್ದರಾಮಯ್ಯ ಅವರು ಸ್ಪಷ್ಟಪಡಿಸಿದ್ದಾರೆ.
ಸೋಮವಾರ ಕೋಲಾರಕ್ಕೆ ಭೇಟಿ ನೀಡಿ ಸಿದ್ದರಾಮಯ್ಯ ಅವರಿಗಾಗಿ ಬಸವನತ್ತ ಗ್ರಾಮದಲ್ಲಿ ಬಾಡಿಗೆಗೆ ಪಡೆದಿರುವ ಮನೆ ಪರಿಶೀಲಿಸಿದ ನಂತರ ಯತೀಂದ್ರ ಸಿದ್ದರಾಮಯ್ಯ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
ಕಾಂಗ್ರೆಸ್ ಹೈಮಾಂಡ್ ಯಾವ ಕ್ಷೇತ್ರದಲ್ಲಿ ಕಣಕ್ಕಿಳಿಯುವಂತೆ ಟಿಕೆಟ್ ನೀಡುತ್ತದೋ ಅದೇ ಕ್ಷೇತ್ರದಲ್ಲಿ ಸ್ಪರ್ಧಿಸುವುದಾಗಿ ಸಿದ್ದರಾಮಯ್ಯ ಅವರು ತಿಳಿಸಿರವುದು ಪಕ್ಷದ ಸಂಪ್ರದಾಯದ ಪಾಲನೆಯಾಗಿದೆ. ಕೋಲಾರದಿಂದ ಸ್ಪರ್ಧಿಸಲು ಹೈಕಮಾಂಡ್ ಸಮ್ಮತಿ ಸಿಗಲಿದೆ. ಇದರಲ್ಲಿ ಯಾವುದೇ ಸಂಶಯ ಬೇಡ ಎಂದು ಹೇಳಿದರು.
ಇದನ್ನೂ ಓದಿ: ಕೋಲಾರದಿಂದಲೇ ನನ್ನ ಸ್ಪರ್ಧೆ, ಸೂರ್ಯ ಇರುವುದು ಎಷ್ಟು ಸತ್ಯವೋ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಅಷ್ಟೇ ಸತ್ಯ: ಸಿದ್ದರಾಮಯ್ಯ
ವರುಣದಿಂದ ಸ್ಪರ್ಧಿಸುವಂತೆ ನಾನು ನಮ್ಮ ತಂದೆಗೆ ಆಹ್ವಾನ ನೀಡಿದ್ದೆ. ಆದರೆ, ಅವರು ಕೋಲಾರದಿಂದ ಸ್ಪರ್ಧೆಗೆ ತೀರ್ಮಾನ ತೆಗೆದುಕೊಂಡಿದ್ದಾರೆ. ಬಾದಾಮಿ ಕ್ಷೇತ್ರದ ಜನ ಸಹ ಚುನಾವಣೆಗೆ ಸ್ಪರ್ಧಿಸುವಂತೆ ಸಿದ್ದರಾಯಯ್ಯರನ್ನು ಆಹ್ವಾನಿಸುತ್ತಿದ್ದಾರೆ. ಕಾಪ್ಟರ್ ಅನ್ನು ನಾವೇ ಕೊಡಿಸುತ್ತೇವೆ, ಚುನಾವಣೆ ವೆಚ್ಚವನ್ನೂ ನಾವೇ ಭರಿಸುತ್ತೇವೆ. ನೀವು ನಾಮಪತ್ರ ಸಲ್ಲಿಸಿ ಸಾಕು ಎಂದು ಒತ್ತಾಯಿಸಿದರು. ಆದರೆ, ಸಿದ್ದರಾಮಯ್ಯ ಕೋಲಾರದ ಜನತೆ ತೋರುತ್ತಿರುವ ಅಭಿಮಾನದಿಂದಾಗಿ ಇಲ್ಲಿಂದಲೇ ಸ್ಪರ್ಧಿಸಲು ತೀರ್ಮಾನಿಸಿದ್ದಾರೆ. ಕೋಲಾರ ಕಾಂಗ್ರೆಸ್‌ನ ಭದ್ರಕೋಟೆ. ಇಲ್ಲಿಂದಲೇ ನಮ್ಮ ತಂದೆ ಸ್ಪರ್ಧೆಗೆ ಇಂಗಿತ ವ್ಯಕ್ತಪಡಿಸಿದ್ದಾರೆ ಎಂದು ತಿಳಿಸಿದರು.