ವಿಪಕ್ಷ ನಾಯಕನ ಆಯ್ಕೆ ಕಗ್ಗಂಟು: ಬಿಜೆಪಿ ಅತ್ಯಂತ ಅಶಿಸ್ತಿನ ಪಕ್ಷ ಎಂದ ಸಿಎಂ ಸಿದ್ದರಾಮಯ್ಯ

ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕನನ್ನು ಇನ್ನೂ ಆಯ್ಕೆ ಮಾಡದಿರುವುದು ಬಿಜೆಪಿಯಲ್ಲಿನ ಗುಂಪುಗಾರಿಕೆಯನ್ನು ತೋರಿಸುತ್ತದೆ ಮತ್ತು ಅದೊಂದು 'ಅತ್ಯಂತ ಅಶಿಸ್ತಿನ' ರಾಜಕೀಯ ಪಕ್ಷ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ಹೇಳಿದ್ದಾರೆ.
ಸಿದ್ದರಾಮಯ್ಯ
ಸಿದ್ದರಾಮಯ್ಯ

ಬೆಂಗಳೂರು: ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕನನ್ನು ಇನ್ನೂ ಆಯ್ಕೆ ಮಾಡದಿರುವುದು ಬಿಜೆಪಿಯಲ್ಲಿನ ಗುಂಪುಗಾರಿಕೆಯನ್ನು ತೋರಿಸುತ್ತದೆ ಮತ್ತು ಅದೊಂದು 'ಅತ್ಯಂತ ಅಶಿಸ್ತಿನ' ರಾಜಕೀಯ ಪಕ್ಷ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ಹೇಳಿದ್ದಾರೆ.

'ಅವರಲ್ಲಿ ಗುಂಪುಗಾರಿಕೆ ಇದೆ ಎಂಬುದನ್ನು ಇದು ಸ್ಪಷ್ಟವಾಗಿ ತೋರಿಸುತ್ತದೆ ಎಂದು ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದ ಅವರು, ಬಿಜೆಪಿ ತಮ್ಮನ್ನು ಶಿಸ್ತಿನ ಪಕ್ಷ ಎಂದು ಕರೆದುಕೊಳ್ಳುತ್ತದೆ. ಆದರೆ, ಅದು ಅತ್ಯಂತ ಅಶಿಸ್ತಿನ ಪಕ್ಷ ಎಂದು ಆರೋಪಿಸಿದರು.

ಕರ್ನಾಟಕ ವಿಧಾನಮಂಡಲದ ಬಜೆಟ್ ಅಧಿವೇಶನ ಸೋಮವಾರ ಆರಂಭಗೊಂಡಿದ್ದು, ಬಿಜೆಪಿ ಇನ್ನೂ ಕೆಳಮನೆಯಲ್ಲಿ ತನ್ನ ವಿರೋಧ ಪಕ್ಷದ ನಾಯಕನ ಆಯ್ಕೆ ಮಾಡಿಲ್ಲ.

ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರು ಕೇಂದ್ರ ಸಚಿವ ಮನ್‌ಸುಖ್ ಮಾಂಡವಿಯಾ ಮತ್ತು ಪಕ್ಷದ ಪ್ರಧಾನ ಕಾರ್ಯದರ್ಶಿ ವಿನೋದ್ ತಾವ್ಡೆ ಅವರನ್ನು ಕೇಂದ್ರದ ಚುನಾವಣಾ ವೀಕ್ಷಕರನ್ನಾಗಿ ನೇಮಿಸಿದ್ದಾರೆ.

ಬಿಜೆಪಿಯ ಮುಖ್ಯ ವಕ್ತಾರ ಮತ್ತು ರಾಜ್ಯಸಭಾ ಸಂಸದ ಅನಿಲ್ ಬಲುನಿ ಮಾತನಾಡಿ, ಇಬ್ಬರು ಕೇಂದ್ರ ನಾಯಕರು ರಾಜ್ಯಕ್ಕೆ ಭೇಟಿ ನೀಡಲಿದ್ದು, ರಾಜ್ಯ ವಿಧಾನಸಭೆಯಲ್ಲಿ ಪಕ್ಷದ ನಾಯಕನನ್ನು ಅದರ ಶಾಸಕರು ಆಯ್ಕೆ ಮಾಡುತ್ತಾರೆ ಎಂದಿದ್ದಾರೆ.

ರಾಜ್ಯ ಚುನಾವಣೆಯಲ್ಲಿ ಸೋತ ನಂತರ, ಬಿಜೆಪಿ ಇನ್ನೂ ವಿಧಾನಸಭೆಯಲ್ಲಿ ತನ್ನ ನಾಯಕನನ್ನು ಆಯ್ಕೆ ಮಾಡಿಲ್ಲ. ಬಜೆಟ್ ಅಧಿವೇಶನ ಆರಂಭವಾಗಿದ್ದರೂ, ವಿರೋಧ ಪಕ್ಷದ ನಾಯಕನನ್ನು ನೇಮಿಸಲು ಹೈಕಮಾಂಡ್ ತಮ್ಮ ಆಯ್ಕೆಗಳನ್ನು ಅಳೆದು ತೂಗುವಲ್ಲಿ ನಿರವಾಗಿದೆ.

ರಾಜ್ಯದಲ್ಲಿ ಜಾತಿ ಸಮೀಕರಣವನ್ನು ಸರಿದೂಗಿಸಿಕೊಂಡು ಹಳೆ ನಾಯಕನಿಗೆ ಅಂಟಿಕೊಳ್ಳಬೇಕೋ ಅಥವಾ ಹೊಸ ನಾಯಕನ ಮೇಲೆ ನಂಬಿಕೆ ಇಡಬೇಕೋ ಎಂಬುದನ್ನು ನಿರ್ಧರಿಸಲು ಬಿಜೆಪಿ ಉದ್ದೇಶಿಸಿರುವ ಕಾರಣ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೂಡ ಸ್ಪರ್ಧಿಗಳಲ್ಲಿ ಒಬ್ಬರಾಗಿದ್ದಾರೆ.

224 ಸದಸ್ಯ ಬಲದ ವಿಧಾನಸಭೆಗೆ ಮೇ ತಿಂಗಳಿನಲ್ಲಿ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ 135 ಸ್ಥಾನಗಳೊಂದಿಗೆ ಅಧಿಕಾರಕ್ಕೆ ಬಂದರೆ, ಬಿಜೆಪಿ 66 ಮತ್ತು ಜೆಡಿಎಸ್ 19 ಸ್ಥಾನಗಳನ್ನು ಗೆದ್ದುಕೊಂಡಿತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com