66 ಬಿಜೆಪಿ ಶಾಸಕರಲ್ಲಿ ವಿಪಕ್ಷ ನಾಯಕನಾಗುವ ಅರ್ಹತೆ ಇರುವ ಒಬ್ಬರೂ ಇಲ್ಲದಿರುವುದು ಅತ್ಯಂತ ನಾಚಿಕೆಗೇಡು!

ಸರ್ಕಾರ ರಚನೆ ಆಯ್ತು, ನಮ್ಮ ಸರ್ಕಾರ ಟೆಕಾಫ್ ಆಗಿ ಹಲವು ದಿನಗಳಾಯ್ತು, ನಮ್ಮ ಗ್ಯಾರಂಟಿ ಯೋಜನೆಗಳ ಜಾರಿಯೂ ಆಯ್ತು. ಸದನವೂ ಪ್ರಾರಂಭವಾಯ್ತು. ಎಲ್ಲಿ ನಿಮ್ಮ ವಿರೋಧ ಪಕ್ಷದ ನಾಯಕ? ಬಿಜೆಪಿಗೆ ವಿರೋಧ ಪಕ್ಷದ ನಾಯಕನ ಗ್ಯಾರಂಟಿಯನ್ನೂ ಕೊಡಲಾಗುತ್ತಿಲ್ಲ ಎಂದರೆ ಎಂತಹ ಹಿನಾಯ ಸ್ಥಿತಿಯಲ್ಲಿದೆ! ಎಂದು ಕರ್ನಾಟಕ ಕಾಂಗ್ರೆಸ್ ಸೋಮವಾರ ವಾಗ್ದಾಳಿ ನಡೆಸಿದೆ.
ಬಿಜೆಪಿ
ಬಿಜೆಪಿ
Updated on

ಬೆಂಗಳೂರು: ಸರ್ಕಾರ ರಚನೆ ಆಯ್ತು, ನಮ್ಮ ಸರ್ಕಾರ ಟೆಕಾಫ್ ಆಗಿ ಹಲವು ದಿನಗಳಾಯ್ತು, ನಮ್ಮ ಗ್ಯಾರಂಟಿ ಯೋಜನೆಗಳ ಜಾರಿಯೂ ಆಯ್ತು. ಸದನವೂ ಪ್ರಾರಂಭವಾಯ್ತು. ಎಲ್ಲಿ ನಿಮ್ಮ ವಿರೋಧ ಪಕ್ಷದ ನಾಯಕ? ಬಿಜೆಪಿಗೆ ವಿರೋಧ ಪಕ್ಷದ ನಾಯಕನ ಗ್ಯಾರಂಟಿಯನ್ನೂ ಕೊಡಲಾಗುತ್ತಿಲ್ಲ ಎಂದರೆ ಎಂತಹ ಹಿನಾಯ ಸ್ಥಿತಿಯಲ್ಲಿದೆ! ಎಂದು ಕರ್ನಾಟಕ ಕಾಂಗ್ರೆಸ್ ಸೋಮವಾರ ವಾಗ್ದಾಳಿ ನಡೆಸಿದೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಕಾಂಗ್ರೆಸ್, ಬಿಜೆಪಿಯ 66 ಶಾಸಕರಲ್ಲಿ ವಿರೋಧ ಪಕ್ಷದ ನಾಯಕನಾಗುವ ಅರ್ಹತೆ ಇರುವ ಒಬ್ಬೇ ಒಬ್ಬ ಶಾಸಕನಿಲ್ಲದಿರುವುದು ಅತ್ಯಂತ ನಾಚಿಕೆಗೇಡು. ಕರ್ನಾಟಕದದ ಇತಿಹಾಸದಲ್ಲಿ ವಿರೋಧ ಪಕ್ಷದ ನಾಯಕನಿಲ್ಲದೆ ನಡೆಯುತ್ತಿರುವ ಮೊದಲ ಅಧಿವೇಶನವಿದು. ಬಿಜೆಪಿ ಅಧಿಕಾರದಲ್ಲಿದ್ದಾಗಲೂ ಪ್ರಜಾಪ್ರಭುತ್ವವನ್ನು ಗೌರವಿಸಲಿಲ್ಲ, ವಿಪಕ್ಷದಲ್ಲಿದ್ದಾಗಲೂ ಗೌರವಿಸುತ್ತಿಲ್ಲ ಎಂದು ಕಿಡಿಕಾರಿದೆ.

ಬಿಜೆಪಿಗೆ ವಿರೋಧ ಪಕ್ಷದ ನಾಯಕನ ‘ಗ್ಯಾರಂಟಿ‘ಯೂ ಇಲ್ಲ!. ವಿರೋಧ ಪಕ್ಷದ ನಾಯಕನಿಲ್ಲದೆ ಕಲಾಪ ನಡೆಯುತ್ತಿರುವುದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಕಪ್ಪು ಚುಕ್ಕೆ. ಈ ಕಪ್ಪು ಚುಕ್ಕೆಯನ್ನಿಟ್ಟಿದ್ದು ಬಿಜೆಪಿ ಎಂದು ಆರೋಪಿಸಿದೆ.

ವಿರೋಧ ಪಕ್ಷದ ನಾಯಕನ ಹುದ್ದೆಯನ್ನೂ ಮಾರಾಟಕ್ಕೆ ಇಡಲಾಗಿದೆಯೇ?. ಮುಖ್ಯಮಂತ್ರಿ ಹುದ್ದೆಗೆ 2,500 ಕೋಟಿ ರೂ. ಫಿಕ್ಸ್ ಮಾಡಲಾಗಿತ್ತು. ಈಗ ವಿರೋಧ ಪಕ್ಷದ ನಾಯಕನ ಹುದ್ದೆ ಎಷ್ಟಕ್ಕೆ ಬಿಕರಿಯಾಗುತ್ತಿದೆ? ಆ ಚೌಕಾಶಿ ವ್ಯವಹಾರಕ್ಕಾಗಿಯೇ ಆಯ್ಕೆ ಪ್ರಕ್ರಿಯೆ ವಿಳಂಬವಾಗುತ್ತಿದೆಯೇ? ಎಂದಿರುವ ಕಾಂಗ್ರೆಸ್ ಇದಕ್ಕೆ ಬಿಜೆಪಿ ಉತ್ತರಿಸಬೇಕು ಎಂದು ಹೇಳಿದೆ.

ಪ್ರೀತಿಯ ಬಿಜೆಪಿ, ಸದನ ಪ್ರಾರಂಭವಾಗುವ ಮೊದಲೇ ವಿರೋಧ ಪಕ್ಷದ ನಾಯಕನನ್ನು ವರಿಷ್ಠರು ಆಯ್ಕೆ ಮಾಡುತ್ತಾರೆ ಎಂದು ಗ್ಯಾರಂಟಿ ನೀಡಿದ್ದಿರಿ. ನಿಮ್ಮ ಹೈಕಮಾಂಡ್ ಕನಿಷ್ಠ ವಿರೋಧ ಪಕ್ಷದ ನಾಯಕನ ಆಯ್ಕೆಯಲ್ಲೂ ನಿಮಗೆ ಗ್ಯಾರಂಟಿ ನೀಡದಿರುವುದು ರಾಜಕೀಯ ಇತಿಹಾಸದಲ್ಲಿಯೇ ಅತ್ಯಂತ ಶೋಚನಿಯ ಸಂಗತಿ. ಪಾಪ! ಎಂದು ಕಾಂಗ್ರೆಸ್ ಬಿಜೆಪಿ ಮಾಡಿದ್ದ ಟ್ವೀಟ್‌ನ ಸ್ಕ್ರೀನ್ ಶಾಟ್ ಹಂಚಿಕೊಂಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com