ಪಕ್ಷ ಟಿಕೆಟ್ ನೀಡಿದರೆ ಮತ್ತೊಮ್ಮೆ ಸ್ಪರ್ಧಿಸುತ್ತೇನೆ: ದಾವಣಗೆರೆ ಸಂಸದ ಜಿ ಎಂ ಸಿದ್ದೇಶ್ವರ್
2019ರ ವರೆಗೆ ಸತತ 7 ಬಾರಿ ದಾವಣಗೆರೆ ಲೋಕಸಭಾ ಕ್ಷೇತ್ರವನ್ನು ತಮ್ಮ ಕುಟುಂಬಕ್ಕೆ ನೀಡಿದ್ದಕ್ಕಾಗಿ ಬಿಜೆಪಿಗೆ ಧನ್ಯವಾದ ಅರ್ಪಿಸಿದ ಸಂಸದ ಡಾ.ಜಿ.ಎಂ.ಸಿದ್ದೇಶ್ವರ್ ಈ ಕ್ಷೇತ್ರದಲ್ಲಿ ತಮ್ಮ ಕುಟುಂಬ ಸತತ ಗೆಲುವು ಸಾಧಿಸುತ್ತಾ ಬಂದಿದೆ ಎಂದು ಹೇಳಿದ್ದಾರೆ.
Published: 06th July 2023 09:03 AM | Last Updated: 06th July 2023 09:03 AM | A+A A-

ಸಂಸದ ಜಿ ಎಂ ಸಿದ್ದೇಶ್ವರ್
ದಾವಣಗೆರೆ: 2019ರ ವರೆಗೆ ಸತತ 7 ಬಾರಿ ದಾವಣಗೆರೆ ಲೋಕಸಭಾ ಕ್ಷೇತ್ರವನ್ನು ತಮ್ಮ ಕುಟುಂಬಕ್ಕೆ ನೀಡಿದ್ದಕ್ಕಾಗಿ ಬಿಜೆಪಿಗೆ ಧನ್ಯವಾದ ಅರ್ಪಿಸಿದ ಸಂಸದ ಡಾ.ಜಿ.ಎಂ.ಸಿದ್ದೇಶ್ವರ್ ಈ ಕ್ಷೇತ್ರದಲ್ಲಿ ತಮ್ಮ ಕುಟುಂಬ ಸತತ ಗೆಲುವು ಸಾಧಿಸುತ್ತಾ ಬಂದಿದೆ ಎಂದು ಹೇಳಿದ್ದಾರೆ.
ತಮ್ಮ 71ನೇ ಜನ್ಮದಿನದ ಶುಭಾಶಯ ಕೋರಿದ ಸಾರ್ವಜನಿಕರನ್ನುದ್ದೇಶಿಸಿ ನಿನ್ನೆ ಕ್ಷೇತ್ರದಲ್ಲಿ ಮಾತನಾಡಿದ ಜಿ.ಎಂ.ಸಿದ್ದೇಶ್ವರ 1990ರಿಂದ ನನ್ನ ತಂದೆ ಜಿ ಮಲ್ಲಿಕಾರ್ಜುನಪ್ಪ ಎರಡು ಬಾರಿ ಗೆದ್ದಿದ್ದು, ನಾಲ್ಕು ಬಾರಿ ನಾನು ಕ್ಷೇತ್ರದಲ್ಲಿ ಗೆದ್ದಿದ್ದೇನೆ. ಇದು ಕ್ಷೇತ್ರದ ಜನರ ಪ್ರೀತಿ ವಾತ್ಸಲ್ಯವನ್ನು ತೋರಿಸುತ್ತದೆ.
ದಾವಣಗೆರೆ ಸಂಸದೀಯ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಎಂಟು ವಿಧಾನಸಭಾ ಕ್ಷೇತ್ರಗಳ ಪೈಕಿ ಏಳರಲ್ಲಿ ಬಿಜೆಪಿ ಸೋತಿರುವುದರಿಂದ ವಿಧಾನಸಭಾ ಚುನಾವಣೆಯಲ್ಲಿ ಸಣ್ಣ ಹಿನ್ನಡೆಯಾಗಿದೆ, ಆದರೆ 2024 ರ ಸಾರ್ವತ್ರಿಕ ಚುನಾವಣೆಯಲ್ಲಿ ಪಕ್ಷ ಗೆಲ್ಲಲು ನಮ್ಮ ಪಕ್ಷದ ಕಾರ್ಯಕರ್ತರು ಸಾಕಷ್ಟು ಪ್ರಬಲರಾಗಿದ್ದಾರೆ ಎಂದು ಹೇಳಿದರು.
ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿಯ ಗೆಲುವಿಗೆ ನಾವು ಶ್ರಮಿಸಬೇಕು. ಪ್ರಧಾನ ಮಂತ್ರಿ ಜನ್ ಧನ್, ಸ್ವಾನಿಧಿ ಮತ್ತು ಸ್ವಚ್ಛ ಭಾರತದಂತಹ ಅನೇಕ ಕಾರ್ಯಕ್ರಮಗಳನ್ನು ನೀಡಿದ ಪ್ರಧಾನಿ ನರೇಂದ್ರ ಮೋದಿಯವರ ಕೈಗಳನ್ನು ಬಲಪಡಿಸಬೇಕು. ಕೋವಿಡ್ ಬಂದ ಸಂದರ್ಭದಲ್ಲಿ ಮೋದಿಯವರು ಕೋಟಿಗಟ್ಟಲೆ ಜನರಿಗೆ ಉಚಿತ ಲಸಿಕೆ ನೀಡಿದ್ದಾರೆ ಎಂದರು.
ಶೀಘ್ರದಲ್ಲೇ ನಡೆಯಲಿರುವ ಜಿಲ್ಲಾ ಪಂಚಾಯತ್ ಮತ್ತು ತಾಲ್ಲೂಕು ಪಂಚಾಯತ್ ಚುನಾವಣೆಗಳನ್ನು ಗೆಲ್ಲುವ ಕಾರ್ಯವನ್ನು ಕಾರ್ಯಕರ್ತರು ಕೈಗೊಳ್ಳಬೇಕೆಂದು ಅವರು ವಿನಂತಿ ಮಾಡಿಕೊಂಡರು. ಇದು 2024 ರ ಮಧ್ಯದಲ್ಲಿ ಸಂಸತ್ತಿನ ಚುನಾವಣೆಗೆ ಮುನ್ನುಡಿಯಾಗಬೇಕು ಎಂದು ಹೇಳಿದರು.
Davangere MP @GMSBJP said that if @BJP4India gives a ticket he is ready to contest elections for fifth time.@santwana99@XpressBengaluru@BJP4Karnataka@Cloudnirad @S27chandr1_TNIE @KannadaPrabha @AshwiniMS_TNIE @Cloudnirad @NewIndianXpress pic.twitter.com/ePmvNfCsAg
— Nagaraja Gadekal (@gadekal2020) July 5, 2023
ಪಕ್ಷ ಟಿಕೆಟ್ ನೀಡಿದರೆ 2024ರ ಸಾರ್ವತ್ರಿಕ ಚುನಾವಣೆಯಲ್ಲಿ ಸ್ಪರ್ಧಿಸಲು ಸಿದ್ಧ ಎಂದು ಹೇಳಿದ ಸಿದ್ದೇಶ್ವರ ಅವರು ಐದನೇ ಬಾರಿಗೆ ಗೆಲ್ಲುವ ವಿಶ್ವಾಸವಿದೆ ಎಂದರು. ಬಿಜೆಪಿಯ ಆಜ್ಞಾಧಾರಕ ಕಾರ್ಯಕರ್ತನಾಗಿ ಪಕ್ಷದ ಗೆಲುವಿಗೆ ಶ್ರಮಿಸುತ್ತೇನೆ ಎಂದರು.