2024 ರ ಲೋಕಸಭೆ: ಜೆಡಿಎಸ್ ಗೆ ಬಿಜೆಪಿ ಮೈತ್ರಿ ಅನಿವಾರ್ಯ, ಆದರೆ ಕೇಸರಿ ಪಕ್ಷಕ್ಕೆ...?

ಲೋಕಸಭೆ ಚುನಾವಣೆ ಹಿನ್ನಲೆಯಲ್ಲಿ ಜುಲೈ 17 ಮತ್ತು 18 ರಂದು ಬೆಂಗಳೂರಿನಲ್ಲಿ ಕಾಂಗ್ರೆಸ್ ಸಮಾನ ಮನಸ್ಕ ವಿರೋಧ ಪಕ್ಷಗಳ ಸಭೆ ಆಯೋಜಿಸಿದೆ. ಲೋಕಸಭೆ ಚುನಾವಣೆಗೆ ಮುಂಚಿತವಾಗಿ ರಾಷ್ಟ್ರಮಟ್ಟದಲ್ಲಿ ತಮ್ಮ ಮಿತ್ರಪಕ್ಷಗಳೊಂದಿಗೆ ಸಮನ್ವಯತೆಯಿಂದ ಕೆಲಸ ಮಾಡಲು ಬಿಜೆಪಿ ತಂತ್ರ ರೂಪಿಸುತ್ತಿದೆ ಎಂದು ಮೂಲಗಳ ತಿಳಿಸಿವೆ.
ಯಡಿಯೂರಪ್ಪ ಮತ್ತು ಕುಮಾರಸ್ವಾಮಿ
ಯಡಿಯೂರಪ್ಪ ಮತ್ತು ಕುಮಾರಸ್ವಾಮಿ
Updated on

ಬೆಂಗಳೂರು: ಲೋಕಸಭೆ ಚುನಾವಣೆ ಹಿನ್ನಲೆಯಲ್ಲಿ ಜುಲೈ 17 ಮತ್ತು 18 ರಂದು ಬೆಂಗಳೂರಿನಲ್ಲಿ ಕಾಂಗ್ರೆಸ್ ಸಮಾನ ಮನಸ್ಕ ವಿರೋಧ ಪಕ್ಷಗಳ ಸಭೆ ಆಯೋಜಿಸಿದೆ. ಲೋಕಸಭೆ ಚುನಾವಣೆಗೆ ಮುಂಚಿತವಾಗಿ ರಾಷ್ಟ್ರಮಟ್ಟದಲ್ಲಿ ತಮ್ಮ ಮಿತ್ರಪಕ್ಷಗಳೊಂದಿಗೆ ಸಮನ್ವಯತೆಯಿಂದ ಕೆಲಸ ಮಾಡಲು ಬಿಜೆಪಿ ತಂತ್ರ ರೂಪಿಸುತ್ತಿದೆ ಎಂದು ಮೂಲಗಳ ತಿಳಿಸಿವೆ.

ಕರ್ನಾಟಕದ ವಿಷಯಕ್ಕೆ ಬಂದರೆ, ಬಿಜೆಪಿ ಮತ್ತು ಜೆಡಿಎಸ್ ಸಂಬಂಧದ ಬಗ್ಗೆ ಈಗಾಗಲೇ ಸಾಕಷ್ಟು ಊಹಾಪೋಹಗಳು ಕೇಳಿ ಬರುತ್ತಿವೆ. ಮೈತ್ರಿ ಮಾಡಿಕೊಂಡು ಒಟ್ಟಿಗೆ ಹೋಗುವುದು ಎರಡೂ ಪಕ್ಷಗಳಿಗೆ ಸಹಾಯ ಮಾಡುತ್ತದೆ ಎಂದು ಕೆಲವರು ಸಲಹೆ ನೀಡಿದ್ದಾರೆ, ಆದರೆ ಇನ್ನು ಕೆಲವರು ಬಿಜೆಪಿಗೆ ಈ ಮೈತ್ರಿಯಿಂದ ಹೆಚ್ಚು ಲಾಭವಾಗುವುದಿಲ್ಲ ಎಂದು ಹೇಳಿದ್ದಾರೆ. 

2019 ರ ಲೋಕಸಭೆ ಚುನಾವಣೆಗೆ ಮೊದಲು ಕಾಂಗ್ರೆಸ್ ಮತ್ತು ಜೆಡಿಎಸ್ ನಡುವಿನ ಮೈತ್ರಿ ಮಾಡಿಕೊಂಡಿತ್ತು ಆದರೆ , ಎರಡೂ ಪಕ್ಷಗಳ ಮೈತ್ರಿಯಿಂದ ಕೇವಲ ಒಂದು ಸ್ಥಾನದಲ್ಲಿ ಗೆಲುವು ಸಾಧಿಸಿತ್ತು.

ಇದೀಗ ಬಿಜೆಪಿ-ಜೆಡಿಎಸ್ ಮೈತ್ರಿ ಕುರಿತು ಮಾತುಕತೆ ನಡೆಯುತ್ತಿದ್ದು, ಎರಡು ಪಕ್ಷಗಳು ಪರಸ್ಪರ ಮತಗಳನ್ನು ವರ್ಗಾಯಿಸಬಹುದೇ ಎಂಬ ಪ್ರಶ್ನೆ ಉದ್ಭವಿಸಿದೆ. ಇತ್ತೀಚೆಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಶೇ.36 ಹಾಗೂ ಜೆಡಿಎಸ್ ಶೇ.14ರಷ್ಟು ಮತಗಳನ್ನು ಪಡೆದಿದ್ದವು. ಆದರೆ ಕಳೆದ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಮಾತ್ರ ಶೇ.52 ರಷ್ಟು ಗಳಿಸಿತ್ತು. ಜೆಡಿಎಸ್‌ಗೆ ಬಿಜೆಪಿ ಅಗತ್ಯವಿದ್ದರೂ ಕೇಸರಿ ಪಕ್ಷ ಪ್ರಾದೇಶಿಕ ಪಕ್ಷವನ್ನು ಅವಲಂಬಿಸಬೇಕಾಗಿಲ್ಲ ಎಂದು ಹೇಳಲಾಗುತ್ತಿದೆ.

ಸದ್ಯ ನಡೆಯುತ್ತಿರುವ ವಿಧಾನಮಂಡಲ ಅಧಿವೇಶನದಲ್ಲಿ ಎರಡು ವಿರೋಧ ಪಕ್ಷಗಳು ಕಾಂಗ್ರೆಸ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿಲ್ಲ. ಬಿಜೆಪಿ ಪ್ರಮುಖ ವಿರೋಧ ಪಕ್ಷವಾಗಿದ್ದರೂ ಜೆಡಿಎಸ್ ಹೆಚ್ಚು ಸದ್ದು ಮಾಡುತ್ತಿದೆ. ಇದು ಬಿಜೆಪಿಗೆ ಸಹಾಯ ಮಾಡುವ ತಂತ್ರವೂ ಆಗಿರಬಹುದು ಎಂದು ಮೂಲಗಳು ತಿಳಿಸಿವೆ.

ಜೆಡಿಎಸ್ ಮತ್ತು ಬಿಜೆಪಿ ಕರ್ನಾಟಕದಲ್ಲಿ ಒಂದೇ ಉದ್ದೇಶಕ್ಕಾಗಿ ಕೆಲಸ ಮಾಡುತ್ತಿವೆ.  ವಿಧಾನಸಭೆ ಮತ್ತು ಪರಿಷತ್ತಿನ ಚುನಾವಣೆಯ ಸಂದರ್ಭದಲ್ಲಿ ಇಬ್ಬರೂ  ಹೊಂದಾಣೆಕೆ ಮಾಡಿಕೊಂಡಿದ್ದರು ಎಂಬುದಪ ಗುಟ್ಟಾಗಿ ಉಳಿದಿಲ್ಲ ಎಂದು ರಾಜಕೀಯ ವಿಶ್ಲೇಷಕ ಬಿ.ಎಸ್ ಮೂರ್ತಿ ತಿಳಿಸಿದ್ದಾರೆ.

ಲೋಕಸಭೆ ಚುನಾವಣೆಗೆ ಜೆಡಿಎಸ್ ಪಕ್ಷವನ್ನು ಒಗ್ಗೂಡಿಸಲು ಬಿಜೆಪಿ ತೀವ್ರ ಪ್ರಯತ್ನ ನಡೆಸುತ್ತಿದೆ. ಮೇಲ್ನೋಟಕ್ಕೆ, ಇದು ಉತ್ತಮ ಸಮೀಕರಣದಂತೆ ತೋರುತ್ತಿದೆ, ಆದರೆ ಇದು ಪ್ರಾಕ್ಟಿಕಲ್ ಆಗಿ ನಡೆಯಲು ಸಾಕಷ್ಟು ದೊಡ್ಡ ಸಮಸ್ಯೆಗಳಿವೆ.

ಲೋಕಸಭೆ ಚುನಾವಣೆಗೂ ಮುನ್ನ ಬಿಬಿಎಂಪಿ ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆ ನಡೆಯಲಿದೆ. ಈ ಚುನಾವಣೆಗಳಲ್ಲಿ ಜೆಡಿಎಸ್ -ಬಿಜೆಪಿ ಮೈತ್ರಿ ಹೇಗೆ ಕೆಲಸ ಮಾಡುತ್ತದೆ ಎಂಬುದನ್ನು ನೋಡಿಕೊಂಡು ಲೋಕಸಭೆಗೆ ಮುಂದುವರಿಸಬೇಕು ಎಂಬುದು ಹಲವರ ಅಭಿಪ್ರಾಯವಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com