'ಸರ್ವಜನಾಂಗದ ಶಾಂತಿಯ ತೋಟದಲ್ಲಿ ಬಿತ್ತಿದ ಬೀಜ, ಬೆಳೆದು ಫಲ ನೀಡಲಿ': ವಿಪಕ್ಷಗಳ ಸಭೆಗೆ ಮುನ್ನ ಸಿಎಂ ಸಿದ್ದರಾಮಯ್ಯ ಟ್ವೀಟ್

ಇಂದಿನಿಂದ(ಜುಲೈ 17) ಎರಡು ದಿನಗಳ ಕಾಲ ಬೆಂಗಳೂರಿನಲ್ಲಿ ನಡೆಯುತ್ತಿರುವ ವಿಪಕ್ಷ ನಾಯಕರ ಸಭೆಯ ಆತಿಥ್ಯವನ್ನು ಕರ್ನಾಟಕದ ಕಾಂಗ್ರೆಸ್ ನಾಯಕರು ವಹಿಸಿಕೊಂಡಿದ್ದಾರೆ. ಇಂದು ರಾತ್ರಿ 24 ವಿಪಕ್ಷಗಳ ನಾಯಕರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಔತಣಕೂಟ ಏರ್ಪಡಿಸಿದ್ದಾರೆ.
ಸಿದ್ದರಾಮಯ್ಯ
ಸಿದ್ದರಾಮಯ್ಯ

ಬೆಂಗಳೂರು: ಇಂದಿನಿಂದ(ಜುಲೈ 17) ಎರಡು ದಿನಗಳ ಕಾಲ ಬೆಂಗಳೂರಿನಲ್ಲಿ ನಡೆಯುತ್ತಿರುವ ವಿಪಕ್ಷ ನಾಯಕರ ಸಭೆಯ ಆತಿಥ್ಯವನ್ನು ಕರ್ನಾಟಕದ ಕಾಂಗ್ರೆಸ್ ನಾಯಕರು ವಹಿಸಿಕೊಂಡಿದ್ದಾರೆ. ಇಂದು ರಾತ್ರಿ 24 ವಿಪಕ್ಷಗಳ ನಾಯಕರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಔತಣಕೂಟ ಏರ್ಪಡಿಸಿದ್ದಾರೆ.

ಇದಕ್ಕೂ ಮುನ್ನ ಹಲವು ಸಭೆಗೆ ಆಗಮಿಸುತ್ತಿರುವ ವಿಪಕ್ಷಗಳ ನಾಯಕರಿಗೆ ಸ್ವಾಗತ ಕೋರಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಸರ್ವಾಧಿಕಾರಿ, ಕೋಮುವಾದಿ ಮತ್ತು ಭ್ರಷ್ಟ ಪ್ರಭುತ್ವದ ವಿರುದ್ದದ ಹೋರಾಟದಲ್ಲಿ ಒಂದಾಗಲು ಆಗಮಿಸುತ್ತಿರುವ ದೇಶದ ಪ್ರಮುಖ ವಿರೋಧಪಕ್ಷಗಳ ನಾಯಕರನ್ನು ಹಾರ್ದಿಕವಾಗಿ ಸ್ವಾಗತಿಸುತ್ತೇನೆ.

ಜಾತ್ಯತೀತ, ಸಮಾಜವಾದಿ ಮತ್ತು ಪ್ರಜಾಪ್ರಭುತ್ವದ ಆಶಯಗಳ ಕೂಡು ಬದುಕಿನ ದೀರ್ಘ ಪರಂಪರೆ ಹೊಂದಿರುವ ಸರ್ವಜನಾಂಗದ ಶಾಂತಿಯ ತೋಟದಲ್ಲಿ ಬಿತ್ತಿದ ಬೀಜ, ಬೆಳೆದು ಫಲ ನೀಡಲಿ ಎನ್ನುವುದು ಕನ್ನಡಿಗರೆಲ್ಲರ ಒಕ್ಕೊರಲಿನ ಹಾರೈಕೆ ಎಂದು ಬರೆದುಕೊಂಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com