10 ಬಿಜೆಪಿ ಶಾಸಕರ ಅಮಾನತು: ಇಂದು ಬಿಜೆಪಿ ಶಾಸಕಾಂಗ ಸಭೆ, ಜೆಡಿಎಸ್ ನಿಂದಲೂ ಸಭೆ
ವಿಧಾನಸಭೆಯಲ್ಲಿ(Karnataka Assembly Session) ಸ್ಪೀಕರ್ ಪೀಠಕ್ಕೆ ಅಗೌರವ ತೋರಿಸಿದ ಕಾರಣಕ್ಕಾಗಿ ಬಿಜೆಪಿಯ 10 ಶಾಸಕರನ್ನು ವಿಧಾನಸಭೆ ಅಧಿವೇಶನ ಮುಗಿಯುವವರೆಗೆ ಅಮಾನತು ಮಾಡಿರುವ ಘಟನೆಗೆ ಸಂಬಂಧಿಸಿದಂತೆ ಇಂದು ಗುರುವಾರ ಬೆಳಗ್ಗೆ 10 ಗಂಟೆಗೆ ಬಿಜೆಪಿ ಶಾಸಕಾಂಗ ಸಭೆ ಕರೆಯಲಾಗಿದೆ.
Published: 20th July 2023 10:19 AM | Last Updated: 20th July 2023 10:25 AM | A+A A-

ಬಿಜೆಪಿ ಶಾಸಕರ ಪ್ರತಿಭಟನೆ
ಬೆಂಗಳೂರು: ವಿಧಾನಸಭೆಯಲ್ಲಿ(Karnataka Assembly Session) ಸ್ಪೀಕರ್ ಪೀಠಕ್ಕೆ ಅಗೌರವ ತೋರಿಸಿದ ಕಾರಣಕ್ಕಾಗಿ ಬಿಜೆಪಿಯ 10 ಶಾಸಕರನ್ನು ವಿಧಾನಸಭೆ ಅಧಿವೇಶನ ಮುಗಿಯುವವರೆಗೆ ಅಮಾನತು ಮಾಡಿರುವ ಘಟನೆಗೆ ಸಂಬಂಧಿಸಿದಂತೆ ಇಂದು ಗುರುವಾರ ಬೆಳಗ್ಗೆ 10 ಗಂಟೆಗೆ ಬಿಜೆಪಿ ಶಾಸಕಾಂಗ ಸಭೆ ಕರೆಯಲಾಗಿದೆ.
ಬೆಂಗಳೂರಿನ ಮಲ್ಲೇಶ್ವರಂನ ಬಿಜೆಪಿ(BJP) ರಾಜ್ಯ ಕಚೇರಿಯಲ್ಲಿ ಶಾಸಕರು,ವಿಧಾನ ಪರಿಷತ್ ಸದಸ್ಯರ ಸಭೆ ಕರೆಯಲಾಗಿದೆ. ಪ್ರತಿಭಟನೆ ವಿಚಾರವಾಗಿ ಮುಂದಿನ ನಡೆ ಬಗ್ಗೆ ಚರ್ಚೆ ನಡೆಯಲಿದೆ.
At the Assembly
Speaker UT Khader suspends BJP MLAs Dr Ashwathnarayan, Sunil Kumar, R Ashok, Vedavya Kamath, Yashpal Suvarna, Dheeraj Muniraj, Umanath Kotian, AravindBellad, AragaJnanendra & Bharath Shetty from attending session till Friday for allegedly misbehaving in the house https://t.co/PnX7DFTOHt— Ashwini M Sripad/ಅಶ್ವಿನಿ ಎಂ ಶ್ರೀಪಾದ್
ಜೆಡಿಎಸ್ ಶಾಸಕಾಂಗ ಸಭೆ: ಇನ್ನೊಂದೆಡೆ ಜೆಡಿಎಸ್(JDS) ಕೂಡ ಶಾಸಕಾಂಗ ಪಕ್ಷದ ಸಭೆ ಕರೆದಿದೆ. ವಿಧಾನಸೌಧದ ಜೆಡಿಎಸ್ ಕಚೇರಿಯಲ್ಲಿ ಇಂದು ಬೆಳಗ್ಗೆ ಸಭೆ ನಡೆಯಲಿದೆ.