ಬಿಜೆಪಿ ಸಖ್ಯಕ್ಕೆ ಜೆಡಿಎಸ್ 'ಒಡೆದ ಮನೆ': ಮೈತ್ರಿಗೆ ಎಚ್.ಡಿ ರೇವಣ್ಣ ವಿರೋಧ; ಎತ್ತು ಏರಿಗೆ, ಕೋಣ ನೀರಿಗೆ!

ಮುಂಬರುವ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಜೊತೆಗಿನ ಜೆಡಿಎಸ್ ಮೈತ್ರಿಗೆ ಹಲವು ಜೆಡಿಎಸ್ ಶಾಸಕರು ವಿರೋಧ ವ್ಯಕ್ತ ಪಡಿಸಿದ್ದಾರೆ ಎನ್ನಲಾಗಿದೆ. ಇದರಿಂದ ಜೆಡಿಎಸ್ ಉನ್ನತ ನಾಯಕರು ಗೊಂದಲಕ್ಕೊಳಗಾಗಿದ್ದಾರೆ.
ಎಚ್.ಡಿಕೆ, ಜಿಟಿ ದೇವೇಗೌಡ ಮತ್ತು ರೇವಣ್ಣ
ಎಚ್.ಡಿಕೆ, ಜಿಟಿ ದೇವೇಗೌಡ ಮತ್ತು ರೇವಣ್ಣ

ಬೆಂಗಳೂರು: ಮುಂಬರುವ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಜೊತೆಗಿನ ಜೆಡಿಎಸ್ ಮೈತ್ರಿಗೆ ಹಲವು ಜೆಡಿಎಸ್ ಶಾಸಕರು ವಿರೋಧ ವ್ಯಕ್ತ ಪಡಿಸಿದ್ದಾರೆ ಎನ್ನಲಾಗಿದೆ. ಇದರಿಂದ ಜೆಡಿಎಸ್ ಉನ್ನತ ನಾಯಕರು ಗೊಂದಲಕ್ಕೊಳಗಾಗಿದ್ದಾರೆ.

ಏಕೆಂದರೆ ಜೆಡಿಎಸ್ ನ ಒಟ್ಟು19 ಶಾಸಕರಲ್ಲಿ ಕೆಲವರು ಬಿಜೆಪಿಯೊಂದಿಗೆ ಕೈಜೋಡಿಸುವ ಬಗ್ಗೆ ವಿರೋಧ ವ್ಯಕ್ತ ಪಡಿಸಿದ್ದಾರೆ, ವಿಧಾನಸಭೆಯಿಂದ ಅಮಾನತುಗೊಂಡಿರುವ ಬಿಜೆಪಿ ಶಾಸಕರಿಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಬೆಂಬಲ ವ್ಯಕ್ತಪಡಿಸುತ್ತಿದ್ದಾರೆ.

ಆದರೆ ಮಾಜಿ ಸಚಿವ ಜಿ.ಟಿ.ದೇವೇಗೌಡ ಅವರು ‘ಪೇಪರ್ ಹರಿದು ಸ್ಪೀಕರ್ ಕುರ್ಚಿಯ ಮೇಲೆ ಎಸೆದದ್ದು ಅಶಿಸ್ತಿನ ವರ್ತನೆ’ ಎಂದು ಬಿಜೆಪಿ ಶಾಸಕರನ್ನು ತರಾಟೆಗೆ ತೆಗೆದುಕೊಂಡರು. ಘಟನೆಗೆ ಕಾಂಗ್ರೆಸ್ ಮತ್ತು ಬಿಜೆಪಿ ಶಾಸಕರಿಬ್ಬರೂ ಸಮಾನ ಹೊಣೆಗಾರರು ಎಂದು ಅವರು ಹೇಳಿದ್ದಾರೆ.

ಪ್ರಾದೇಶಿಕ ಪಕ್ಷವಾದ ಜೆಡಿಎಸ್ ಅಸ್ತಿತ್ವಕ್ಕಾಗಿ ಎರಡೂ ರಾಷ್ಟ್ರೀಯ ಪಕ್ಷಗಳನ್ನು ಸಮಾನ ಅಂತರದಲ್ಲಿ ಇಡಬೇಕು ಎಂಬ ಸ್ಪಷ್ಟ ಸೂಚನೆಯನ್ನು ಜಿ.ಟಿ ದೇವೇಗೌಡರು ನೀಡಿದ್ದು, ಪಕ್ಷದ ಬಗ್ಗೆ ಸಹಾನುಭೂತಿ ಹೊಂದಿರುವವರು ಕೂಡ ಇದೇ ಸಲಹೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಮಾಜಿ ಸಚಿವ ಹೆಚ್.ಡಿ.ರೇವಣ್ಣ ಅವರಿಗೂ ಇದೇ ಭಾವನೆ ಇದೆ, ಆದರೆ ಎಪಿಎಂಸಿ ತಿದ್ದುಪಡಿ ಕಾಯ್ದೆ ರದ್ದುಪಡಿಸಲು ಕಾಂಗ್ರೆಸ್ ಪಕ್ಷವು ಅಂಗೀಕರಿಸಿದ ಮಸೂದೆಯನ್ನು ವಿರೋಧಿಸಿ ಪಕ್ಷದ ಶಾಸಕರು ಪ್ರತಿಭಟನೆ ನಡೆಸಲು ಮುಂದಾದರು, ಅದು ರೇವಣ್ಣಗೆ ಹಿಡಿಸಲಿಲ್ಲ ಎಂದು ಜೆಡಿಎಸ್ ಮುಖಂಡರೊಬ್ಬರು ತಿಳಿಸಿದ್ದಾರೆ.

ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುವ ಕುಮಾರಸ್ವಾಮಿ ಅವರ ಇಚ್ಛೆಗೆ ಸುಮಾರು 12 ಜೆಡಿಎಸ್ ಶಾಸಕರು ವಿರೋಧ ವ್ಯಕ್ತಪಡಿಸಿದ್ದಾರೆ. ಐಎನ್‌ಡಿಐಎ ಮೈತ್ರಿಕೂಟದ ನಾಯಕರು ಕನಿಷ್ಠ ಪಕ್ಷ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡರನ್ನು ಭೇಟಿಯಾಗುವಂತೆ ಕುಮಾರಸ್ವಾಮಿ ಸೂಚಿಸಬೇಕಿತ್ತು ಎಂದು ಜೆಡಿಎಸ್ ಸದಸ್ಯರು ಅಭಿಪ್ರಾಯಪಟ್ಟಿದ್ದಾರೆ.

ಗುರುವಾರ ಬಿಜೆಪಿ ಶಾಸಕರ ಅಮಾನತಿಗೆ ಸಂಬಂಧಿಸಿದಂತೆ ರಾಜ್ಯಪಾಲ ತಾವರಚಂದ್ ಗೆಹ್ಲೋಟ್ ಅವರಿಗೆ ಬಿಜೆಪಿ ಮತ್ತು ಜೆಡಿಎಸ್ ದೂರು ಸಲ್ಲಿಸಿದ್ದು, ಅದರಲ್ಲಿ ಕುಮಾರಸ್ವಾಮಿ ಮೊದಲ ಸಹಿ ಹಾಕಿರುವುದು ರಾಜಕೀಯ ವಲಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ.

2024 ರ ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ -ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳಬೇಕೆಂದು ಕುಮಾರಸ್ವಾಮಿ ಬಯಸಿದ್ದಾರೆ, ಆದರೆ ರೇವಣ್ಣ ಅವರು ತಮ್ಮ ಮಗ ಮತ್ತು ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ರಾಜಕೀಯ ಭವಿಷ್ಯ ಅತಂತ್ರಗೊಳ್ಳುವ ಭಯದಿಂದ ಅದನ್ನು ವಿರೋಧಿಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X

Advertisement

X
Kannada Prabha
www.kannadaprabha.com