ಬಿಬಿಎಂಪಿ ಚುನಾವಣೆಗೆ ಕಾಂಗ್ರೆಸ್ ಸಜ್ಜು: ಕೈ ನಾಯಕರಿಂದ ಆಪರೇಷನ್ ಹಸ್ತ!

ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವಿನ ನಂತರ ಕಾಂಗ್ರೆಸ್ ಬಿಬಿಎಂಪಿ ಚುನಾವಣೆಗೆ ಸಜ್ಜಾಗುತ್ತಿದೆ. ಸಾರಿಗೆ ಸಚಿವ ಆರ್ ರಾಮಲಿಂಗಾ ರೆಡ್ಡಿ ಸೇರಿದಂತೆ ಪಕ್ಷದ ಉನ್ನತ ನಾಯಕರು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ಅವರಿಗೆ ಬಿಜೆಪಿ ಶಾಸಕರು ಮತ್ತು ಬಿಬಿಎಂಪಿ ಮಾಜಿ ಕಾರ್ಪೊರೇಟರ್‌ಗಳ ಆಪ್ತರನ್ನು ಸಂಪರ್ಕಿಸಲು ಸಹಾಯ ಮಾಡುತ್ತಿದ್ದಾರೆ.
ಡಿ.ಕೆ ಶಿವಕುಮಾರ್ ಮತ್ತು ರಾಮಲಿಂಗಾ ರೆಡ್ಡಿ
ಡಿ.ಕೆ ಶಿವಕುಮಾರ್ ಮತ್ತು ರಾಮಲಿಂಗಾ ರೆಡ್ಡಿ

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವಿನ ನಂತರ ಕಾಂಗ್ರೆಸ್ ಬಿಬಿಎಂಪಿ ಚುನಾವಣೆಗೆ ಸಜ್ಜಾಗುತ್ತಿದೆ. ಸಾರಿಗೆ ಸಚಿವ ಆರ್ ರಾಮಲಿಂಗಾ ರೆಡ್ಡಿ ಸೇರಿದಂತೆ ಪಕ್ಷದ ಉನ್ನತ ನಾಯಕರು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ಅವರಿಗೆ ಬಿಜೆಪಿ ಶಾಸಕರು ಮತ್ತು ಬಿಬಿಎಂಪಿ ಮಾಜಿ ಕಾರ್ಪೊರೇಟರ್‌ಗಳ ಆಪ್ತರನ್ನು ಸಂಪರ್ಕಿಸಲು ಸಹಾಯ ಮಾಡುತ್ತಿದ್ದಾರೆ.

ಭಾನುವಾರ  ಮಾಜಿ ಕಾರ್ಪೊರೇಟರ್‌ಗಳಾದ ಮೋಹನ್ ಕುಮಾರ್, ಶ್ರೀನಿವಾಸ್ ಮತ್ತು ವೇಲು ನಾಯ್ಕರ್ ಕೇಸರಿ ಪಕ್ಷವನ್ನು ತೊರೆದು ಕಾಂಗ್ರೆಸ್ ಸೇರಿದ್ದಾರೆ. ಜೆಡಿಎಸ್-ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸಿ 2019ರಲ್ಲಿ ಮುಂಬೈಗೆ ತೆರಳಿದ್ದ ಡಿ.ಕೆ.ಶಿವಕುಮಾರ್ ಅವರನ್ನು ಅವಮಾನಿಸಿದ ಶಾಸಕರಿಗೆ ಪ್ರಬಲ ಸಂದೇಶ ರವಾನಿಸುವ ಉದ್ದೇಶದಿಂದ ಕೆಆರ್ ಪುರಂ, ಯಶವಂತಪುರ, ಮಹಾಲಕ್ಷ್ಮಿ ಲೇಔಟ್ ಗಳತ್ತ ಪಕ್ಷ ಗಮನ ಹರಿಸಿದೆ.

ಬಿಬಿಎಂಪಿ ಮಾಜಿ ಕಾರ್ಪೊರೇಟರ್‌ಗಳೊಂದಿಗೆ ಮಾತುಕತೆ ನಡೆಸಲಾಗುತ್ತಿದೆ ಎಂದು ರಾಮಲಿಂಗಾ ರೆಡ್ಡಿ ಖಚಿತಪಡಿಸಿದ್ದಾರೆ. “ಕೆಲವು ಹಾಲಿ ಬಿಜೆಪಿ ಕಾರ್ಪೊರೇಟರ್‌ಗಳು ಕಾಂಗ್ರೆಸ್ ಸೇರುವ ಇಚ್ಛೆ ವ್ಯಕ್ತಪಡಿಸಿದ್ದಾರೆ. ಯಾವುದೇ ಷರತ್ತುಗಳಿಲ್ಲದೆ ಪಕ್ಷಕ್ಕೆ ಬಂದರೆ, ಕಾಂಗ್ರೆಸ್ ತತ್ವಕ್ಕೆ ಬದ್ಧರಾಗಿ ಎಲ್ಲರನ್ನೂ ಒಳಗೊಳ್ಳುವ ಬೆಳವಣಿಗೆಗೆ ಶ್ರಮಿಸುವವರಿಗೆ ಅವಕಾಶ ನೀಡಲಾಗುವುದು ಎಂದು ರೆಡ್ಡಿ ಹೇಳಿದರು.

ಕೆಆರ್ ಪುರಂ ವಿಧಾನಸಭಾ ಕ್ಷೇತ್ರದ ಡಿ.ಕೆ.ಮೋಹನ್ ಅವರು ಕೆಲವು ಮುಖಂಡರೊಂದಿಗೆ ಮಾತುಕತೆ ನಡೆಸಿರುವುದಾಗಿ ತಿಳಿಸಿದ್ದಾರೆ. ಪಟ್ಟಿಯಲ್ಲಿ ಕೆಲವು ಹಾಲಿ ಕಾರ್ಪೊರೇಟರ್‌ಗಳು ಮತ್ತು ಬಿಜೆಪಿಗೆ ಸಂಬಂಧಿಸಿದ ಕೆಲವು ಮಾಜಿ ಸಿಎಂಸಿ ಸದಸ್ಯರು ಇದ್ದಾರೆ. ಒಂದು ವಾರದಲ್ಲಿ ಸ್ಪಷ್ಟ ಚಿತ್ರಣ ಸಿಗಲಿದೆ ಎಂದರು.

ಭಾನುವಾರ ಲಕ್ಷ್ಮಿದೇವಿ ನಗರ ವಾರ್ಡ್‌ನಿಂದ ಮಾಜಿ ಕಾರ್ಪೊರೇಟರ್‌ಗಳಾದ ವೇಲು ನಾಯ್ಕರ್, ಜಾಲಹಳ್ಳಿಯಿಂದ ಶ್ರೀನಿವಾಸ್ ಮತ್ತು ಕೊಟ್ಟಿಗೆಪಾಳ್ಯದಿಂದ ಮೋಹನ್ ಕುಮಾರ್ ಅವರು ಕಾಂಗ್ರೆಸ್‌ಗೆ ಸೇರ್ಪಡೆಗೊಂಡರು.

ನಾವು ಕಾಂಗ್ರೆಸ್‌ನಲ್ಲಿದ್ದೇವೆ ಮತ್ತು ನಮ್ಮ ಶಾಸಕರು ಬಿಜೆಪಿಗೆ ಸೇರಿದ ನಂತರ ನಾವುಗಳು ಅವರನ್ನು ಹಿಂಬಾಲಿಸಿದ್ದೆವು.  ಆದರೆ ಈ ನಡೆ ನಮ್ಮ ಪಕ್ಷದ ಕಾರ್ಯಕರ್ತರಿಗೆ ಸರಿ ಹೋಗಿಲ್ಲ, ಹೀಗಾಗಿ ನಾವು ಕಾಂಗ್ರೆಸ್‌ಗೆ ಮರಳುತ್ತಿದ್ದೇವೆ ಎಂದಿದ್ದಾರೆ. ಎಚ್‌ಎಂಟಿ ವಾರ್ಡ್‌ನ ಮಾಜಿ ಕಾರ್ಪೊರೇಟರ್‌ ಆಶಾ ಸುರೇಶ್‌ ಕಾಂಗ್ರೆಸ್‌ ಸೇರಲಿದ್ದಾರೆ ಎಂದು ವೇಲು ನಾಯ್ಕರ್‌ ಹೇಳಿದರು.

ಲೋಕಸಭೆ ಚುನಾವಣೆ ವೇಳೆಗೆ ಪ್ರತಿಸ್ಪರ್ಧಿ ಶಾಸಕರನ್ನು ಬಲಹೀನಗೊಳಿಸುವುದು ಅವರ ಆಪ್ತರನ್ನು ಕಣಕ್ಕಿಳಿಸುವುದು ಕಾಂಗ್ರೆಸ್ ತಂತ್ರವಾಗಿದೆ. ಮಾಜಿ ಕಾರ್ಪೊರೇಟರ್‌ಗಳು ಮತ್ತು ನಾಯಕರು ಮತದಾರರೊಂದಿಗೆ ಸಂಪರ್ಕ ಹೊಂದಿದ್ದಾರೆ ಮತ್ತು ಅವರನ್ನು ಕಾಂಗ್ರೆಸ್ ತೆಕ್ಕೆಗೆ ತರುವ ಮೂಲಕ ಪಕ್ಷವು ಲೋಕಸಭೆ ಚುನಾವಣೆಗೆ ಸಜ್ಜಾಗುತ್ತಿದೆ ಎಂದು ಹಿರಿಯ ಕಾಂಗ್ರೆಸ್ ನಾಯಕ ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com