ಲೂಟಿ ಮಾಡಿ ಓಡಿಹೋಗಿರುವ ನೀರವ್ ಮೋದಿ, ಲಲಿತ್ ಮೋದಿ ಹೆಸರಿನಲ್ಲಿಯೂ ನಿಮ್ಮ ಹೆಸರಿನ ಮೋದಿ ಇದೆಯಲ್ಲಾ?
ಪ್ರಧಾನಿ ನರೇಂದ್ರ ಮೋದಿ ಅವರೇ, ಇಂಡಿಯಾ ಎಂಬ ಸುಂದರ, ಸುಮಧುರ ಮತ್ತು ಪವಿತ್ರ ಹೆಸರಿನ ಬಗ್ಗೆ ನಿಮಗೆ ಯಾಕೆ ಇಷ್ಟೊಂದು ದ್ವೇಷ? ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
Published: 26th July 2023 12:41 PM | Last Updated: 26th July 2023 02:16 PM | A+A A-

ನರೇಂದ್ರ ಮೋದಿ
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರೇ, ಇಂಡಿಯಾ ಎಂಬ ಸುಂದರ, ಸುಮಧುರ ಮತ್ತು ಪವಿತ್ರ ಹೆಸರಿನ ಬಗ್ಗೆ ನಿಮಗೆ ಯಾಕೆ ಇಷ್ಟೊಂದು ದ್ವೇಷ? ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಇಂಡಿಯಾ ಹೆಸರಿನ ಬಗ್ಗೆ ಇಷ್ಟೊಂದು ಅಸಹನೆ ಹೊಂದಿರುವ ನೀವು ನಿಮ್ಮದೇ ಸರ್ಕಾರದ ಕಾರ್ಯಕ್ರಮಗಳಾದ ಮೇಕ್ ಇನ್ ಇಂಡಿಯಾ, ಸ್ಟಾರ್ಟ್ ಅಪ್ ಇಂಡಿಯಾ, ಸ್ಕಿಲ್ ಇಂಡಿಯಾ ಮೊದಲಾದ ಕಾರ್ಯಕ್ರಮಗಳ ಹೆಸರನ್ನೂ ಬದಲಾಯಿಸುವಿರಾ? ಎಂದು ಪ್ರಶ್ನಿಸಿದ್ದಾರೆ.
ಇದನ್ನೂ ಓದಿ: "ನಾವು INDIA, ಮಣಿಪುರದಲ್ಲಿ ಭಾರತದ ಕಲ್ಪನೆ ಮರುನಿರ್ಮಾಣ ಮಾಡುತ್ತೇವೆ": ಪ್ರಧಾನಿ ಮೋದಿಗೆ ರಾಹುಲ್ ತಿರುಗೇಟು
ವಿರೋಧ ಪಕ್ಷಗಳ ಮೈತ್ರಿಕೂಟ ‘ಇಂಡಿಯಾ’ ವನ್ನು ಈಸ್ಟ್ ಇಂಡಿಯಾ ಕಂಪೆನಿ ಮತ್ತು ಇಂಡಿಯನ್ ಮುಜಾಹಿದ್ದೀನ್ ಗೆ ಹೋಲಿಸಿರುವ ಸನ್ಮಾನ ಪ್ರಧಾನಿ ನರೇಂದ್ರ ಮೋದಿ ಅವರೇ, ಭಾರತೀಯರ ನೂರಾರು ಕೋಟಿ ತೆರಿಗೆ ಹಣವನ್ನು ಲೂಟಿ ಮಾಡಿ ದೇಶ ಬಿಟ್ಟು ಓಡಿಹೋಗಿರುವ ನೀರವ್ ಮೋದಿ ಮತ್ತು ಲಲಿತ್ ಮೋದಿ ಅವರ ಹೆಸರಿನಲ್ಲಿಯೂ ನಿಮ್ಮ ಹೆಸರಿನ ಮೋದಿ ಇದೆಯಲ್ಲಾ? ಅವರನ್ನು ನಿಮ್ಮ ಜೊತೆ ಹೋಲಿಸಬಹುದಾ? ಎಂದು ಲೇವಡಿ ಮಾಡಿದ್ದಾರೆ.
ಇದನ್ನೂ ಓದಿ: ಈಸ್ಟ್ ಇಂಡಿಯಾ ಕಂಪನಿ, ಇಂಡಿಯನ್ ಮುಜಾಹಿದೀನ್, ಪಿಎಫ್ಐಗಳಲ್ಲೂ 'ಇಂಡಿಯಾ' ಇದೆ: ಪ್ರಧಾನಿ ಮೋದಿ ಟೀಕೆ
ಲಲಿತ್ ಮತ್ತು ನೀರವ್ ಹೆಸರಲ್ಲಿಯೂ ಮೋದಿ ಇದೆಯಲ್ಲಾ ಎಂಬ ಸಾಮಾನ್ಯ ಪ್ರಶ್ನೆ ಕೇಳಿದ ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿ, ಎರಡು ವರ್ಷ ಜೈಲು ಶಿಕ್ಷೆ ನೀಡಿ, ಲೋಕಸಭೆಯಿಂದ ಅನರ್ಹಗೊಳಿಸಲಾಯಿತು. ಈಗ ಇಂಡಿಯಾವನ್ನು ಈಸ್ಟ್ ಇಂಡಿಯಾ ಕಂಪೆನಿ ಮತ್ತು ಇಂಡಿಯನ್ ಮುಜಾಹಿದ್ದೀನ್ ಗೆ ಹೋಲಿಸಿರುವ ನಿಮ್ಮ ಹೋಲಿಕೆಗೆ ರಾಹುಲ್ ಗಾಂಧಿಯವರ ವಿರುದ್ಧದ ಕ್ರಮ ಅನ್ವಯವಾಗುವುದಿಲ್ಲವೇ? ಎಂದು ಪ್ರಶ್ನಿಸಿದ್ದಾರೆ.
ವಿರೋಧ ಪಕ್ಷಗಳ ಮೈತ್ರಿಕೂಟ ‘ಇಂಡಿಯಾ’ ವನ್ನು ಈಸ್ಟ್ ಇಂಡಿಯಾ ಕಂಪೆನಿ ಮತ್ತು ಇಂಡಿಯನ್ ಮುಜಾಹಿದ್ದೀನ್ ಗೆ ಹೋಲಿಸಿರುವ ಸನ್ಮಾನ ಪ್ರಧಾನಿ @narendramodi ಅವರೇ.
— Siddaramaiah (@siddaramaiah) July 26, 2023
ಭಾರತೀಯರ ನೂರಾರು ಕೋಟಿ ತೆರಿಗೆ ಹಣವನ್ನು ಲೂಟಿ ಮಾಡಿ ದೇಶ ಬಿಟ್ಟು ಓಡಿಹೋಗಿರುವ ನೀರವ್ ಮೋದಿ ಮತ್ತು ಲಲಿತ್ ಮೋದಿ ಅವರ ಹೆಸರಿನಲ್ಲಿಯೂ ನಿಮ್ಮ ಹೆಸರಿನ ಮೋದಿ ಇದೆಯಲ್ಲಾ? ಅವರನ್ನು…