ಬೆಂಗಳೂರು: ಸಿಎಂ ಸಿದ್ದರಾಮಯ್ಯ ಭೇಟಿಯಾದ ದಿಗ್ವಿಜಯ್ ಸಿಂಗ್ ದಂಪತಿ
ಮಧ್ಯ ಪ್ರದೇಶ ಮಾಜಿ ಮುಖ್ಯಮಂತ್ರಿ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ಮತ್ತು ಅವರ ಪತ್ನಿ ಅಮೃತಾ ರೈ ಅವರು ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದರು.
Published: 28th July 2023 07:21 PM | Last Updated: 28th July 2023 07:21 PM | A+A A-

ಸಿಎಂ ಸಿದ್ದರಾಮಯ್ಯ ಭೇಟಿಯಾದ ದಿಗ್ವಿಜಯ್ ಸಿಂಗ್ ದಂಪತಿ
ಬೆಂಗಳೂರು: ಮಧ್ಯ ಪ್ರದೇಶ ಮಾಜಿ ಮುಖ್ಯಮಂತ್ರಿ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ಮತ್ತು ಅವರ ಪತ್ನಿ ಅಮೃತಾ ರೈ ಅವರು ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದರು.
ದಿಗ್ವಿಜಯ್ ಸಿಂಗ್ ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಸೌಹಾರ್ದಯುತವಾಗಿ ಭೇಟಿಯಾಗಿದ್ದಾರೆ.
ಇದನ್ನು ಓದಿ: ಗೋಲ್ವಾಲ್ಕರ್ ವಿರುದ್ಧ ಸೋಷಿಯಲ್ ಮೀಡಿಯಾ ಪೋಸ್ಟ್: ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ವಿರುದ್ಧ ದೂರು
ಈ ವೇಳೆ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಡಾ.ಕೆ.ಗೋವಿಂದರಾಜು, ಬೆಳಗಾವಿ ಜಿಲ್ಲೆ ಅಥಣಿ ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ಅವರು ಸಹ ಉಪಸ್ಥಿತರಿದ್ದರು.
ಈ ಕುರಿತು ಟ್ವೀಟ್ ಮಾಡಿರುವ ಮುಖ್ಯಮಂತ್ರಿಗಳ ಕಚೇರಿ, ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ನಾಯಕರಾದ ದಿಗ್ವಿಜಯ್ ಸಿಂಗ್ ಹಾಗೂ ಅವರ ಪತ್ನಿ ಅಮೃತಾ ರೈ ಅವರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.
ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಡಾ. ಕೆ. ಗೋವಿಂದರಾಜು ಹಾಗೂ ಶಾಸಕರಾದ ಲಕ್ಷ್ಮಣ ಸವದಿ ಅವರು ಈ ವೇಳೆ ಉಪಸ್ಥಿತರಿದ್ದರು ಎಂದು ತಿಳಿಸಿದೆ.
ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ನಾಯಕರಾದ ದಿಗ್ವಿಜಯ್ ಸಿಂಗ್ ಹಾಗೂ ಅವರ ಪತ್ನಿ ಅಮೃತಾ ರೈ ಅವರು ಇಂದು ಮುಖ್ಯಮಂತ್ರಿ @siddaramaiah ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.
— CM of Karnataka (@CMofKarnataka) July 28, 2023
ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಡಾ. ಕೆ. ಗೋವಿಂದರಾಜು ಹಾಗೂ ಶಾಸಕರಾದ ಲಕ್ಷ್ಮಣ ಸವದಿ ಅವರು ಈ ವೇಳೆ ಉಪಸ್ಥಿತರಿದ್ದರು. pic.twitter.com/dmSTRGCzdk