ಯೂತ್ ಕಾಂಗ್ರೆಸ್ ಸಮಾವೇಶಕ್ಕೆ ತೆರೆ; ಲೋಕಸಭಾ ಚುನಾವಣೆಗೆ ಬೂತ್ ಮಟ್ಟದಲ್ಲಿ ಕೆಲಸ ಮಾಡಲು ಸೂಚನೆ

ಮುಂಬರುವ 2024ರ ಲೋಕಸಭಾ ಚುನಾವಣೆ ನಂತರ ಲೋಕಸಭೆಯಲ್ಲಿ ತನ್ನ ಸ್ಥಾನವನ್ನು ಹೆಚ್ಚಿಸಿಕೊಳ್ಳಲು ಕಾಂಗ್ರೆಸ್ ತನ್ನ ಕಾರ್ಯಕರ್ತರ ಮೇಲೆ ಅದರಲ್ಲೂ ವಿಶೇಷವಾಗಿ ಯುವ ಕಾಂಗ್ರೆಸ್‌ನ ಕಾರ್ಯಕರ್ತರ ಮೇಲೆ ಅವಲಂಬಿತವಾಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಮುಂಬರುವ 2024ರ ಲೋಕಸಭಾ ಚುನಾವಣೆ ನಂತರ ಲೋಕಸಭೆಯಲ್ಲಿ ತನ್ನ ಸ್ಥಾನವನ್ನು ಹೆಚ್ಚಿಸಿಕೊಳ್ಳಲು ಕಾಂಗ್ರೆಸ್ ತನ್ನ ಕಾರ್ಯಕರ್ತರ ಮೇಲೆ ಅದರಲ್ಲೂ ವಿಶೇಷವಾಗಿ ಯುವ ಕಾಂಗ್ರೆಸ್‌ನ ಕಾರ್ಯಕರ್ತರ ಮೇಲೆ ಅವಲಂಬಿತವಾಗಿದೆ.

ಭಾರತೀಯ ಯೂತ್ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಬಿ.ವಿ. ಶ್ರೀನಿವಾಸ್ ಮಾತನಾಡಿ, ಮಣಿಪುರ, ಪ್ರವಾಹ ಅಥವಾ ಇತರೆ ತುರ್ತು ಸಂದರ್ಭಗಳಲ್ಲಿ ಪ್ರತಿ ಬಿಕ್ಕಟ್ಟಿನಲ್ಲೂ ಸ್ವಯಂಸೇವಕರಾಗಿ ಕೆಲಸ ಮಾಡಲು ಕಾರ್ಯಕರ್ತರಿಗೆ ಕರೆ ನೀಡಿದರು. 

ಕೋವಿಡ್ ಸಮಯದಲ್ಲಿ ಕಾರ್ಯಕರ್ತರ ಕೆಲಸಕ್ಕಾಗಿ ಮೆಚ್ಚುಗೆ ವ್ಯಕ್ತಪಡಿಸಿದ ಶ್ರೀನಿವಾಸ್, ಮಣಿಪುರದಲ್ಲಿ, ನಾವು ಒಂದು ತಿಂಗಳ ಕಾಲ 6,000 ಪೀಡಿತ ಜನರಿಗಾಗಿ ನಾವು ಪರಿಹಾರ ಶಿಬಿರವನ್ನು ಸ್ಥಾಪಿಸಿದ್ದೇವೆ' ಎಂದು ಟಿಎನ್ಐಇಗೆ ತಿಳಿಸಿದರು.

'ಯೂತ್ ಜೋಡೋ ಬೂತ್ ಜೋಡೋ' ಎಂಬ ಪಕ್ಷದ ಅಭಿಯಾನ ಈಗಾಗಲೇ ಮಹಾರಾಷ್ಟ್ರ ಮತ್ತು ಇತರ ಸ್ಥಳಗಳಲ್ಲಿ ಪ್ರಾರಂಭವಾಗಿದ್ದು, ಶೀಘ್ರದಲ್ಲೇ ಇದನ್ನು ದೇಶದಾದ್ಯಂತ ವಿಸ್ತರಿಸಲಾಗುವುದು ಎಂದು ಅವರು ಹೇಳಿದರು.

ಕಳೆದ ಮೂರು ದಿನಗಳಿಂದ ಬೆಂಗಳೂರಿನಲ್ಲಿ ನಡೆದ ರಾಷ್ಟ್ರೀಯ ಯುವ ಕಾಂಗ್ರೆಸ್ ಸಮಾವೇಶದಲ್ಲಿ ಭಾಗವಹಿಸಿದ್ದ 15,000ಕ್ಕೂ ಹೆಚ್ಚು ಪಕ್ಷದ ಸದಸ್ಯರಿಗೆ ಬೂತ್ ಮಟ್ಟದಲ್ಲಿ ಕೆಲಸ ಮಾಡಲು ಮತ್ತು ದೇಶದಾದ್ಯಂತ ಪ್ರತಿ ಸದಸ್ಯರಿಗೆ ಕನಿಷ್ಠ ಐದು ಮತದಾರರನ್ನು ಸೇರಿಸಲು ತಿಳಿಸಲಾಗಿದೆ. ಇದರಿಂದ ಬೂತ್ ಮಟ್ಟದಲ್ಲಿ ಕಾಂಗ್ರೆಸ್ ಬಲಗೊಳ್ಳಲಿದೆ ಎಂದರು.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಮಾವೇಶದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ ಎನ್ನಲಾಗಿತ್ತು. ಆದರೆ, ಅವರು ನವದೆಹಲಿಯಲ್ಲಿ ಇದ್ದದ್ದರಿಂದ ಸಾಧ್ಯವಾಗಲಿಲ್ಲ.

ಶುಕ್ರವಾರ ಸಚಿವರಾದ ಸತೀಶ್ ಜಾರಕಿಹೊಳಿ ಮತ್ತು ಲಕ್ಷ್ಮಿ ಹೆಬ್ಬಾಳ್ಕರ್, ಪವನ್ ಖೇರಾ, ಅಲ್ಕಾ ಲಂಬಾ ಮತ್ತು ದೀಪಾ ದಾಸ್ಮುನ್ಶಿ ಸೇರಿದಂತೆ ಪ್ರಮುಖರು ಭಾಗವಹಿಸಿದ್ದರು.

ಪ್ರತಿ ದಿನ ದೇಶದಾದ್ಯಂತ ಸುಮಾರು 5,000 ಯುವ ಕಾಂಗ್ರೆಸ್ ಪದಾಧಿಕಾರಿಗಳು ಭಾಗವಹಿಸಿದ್ದಾರೆ ಎಂದು ಶ್ರೀನಿವಾಸ್ ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com