ಬಿಜೆಪಿ, ಜೆಡಿಎಸ್ ನವರ ಅಸೂಯೆಗೆ ನಮ್ಮ ಬಳಿ ಮದ್ದಿಲ್ಲ: ಡಿ.ಕೆ ಶಿವಕುಮಾರ್
ನಮ್ಮ ಸರ್ಕಾರ ತಂದ ಯೋಜನೆಗಳಲ್ಲಿ ಯಾವುದೇ ಗೊಂದಲ ಇಲ್ಲ. ಬಿಜೆಪಿ, ಜನತಾ ದಳದವರಿಗೆ ಈ ಯೋಜನೆ ಜಾರಿಯನ್ನು ಸಹಿಸಿಕೊಳ್ಳಲು ಆಗುತ್ತಿಲ್ಲ. ಅವರ ಅಸೂಯೆಗೆ ಮದ್ದಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.
Published: 07th June 2023 02:07 PM | Last Updated: 07th June 2023 06:54 PM | A+A A-

ಡಿ.ಕೆ ಶಿವಕುಮಾರ್
ಬೆಂಗಳೂರು: ನಮ್ಮ ಸರ್ಕಾರ ತಂದ ಯೋಜನೆಗಳಲ್ಲಿ ಯಾವುದೇ ಗೊಂದಲ ಇಲ್ಲ. ಬಿಜೆಪಿ, ಜನತಾ ದಳದವರಿಗೆ ಈ ಯೋಜನೆ ಜಾರಿಯನ್ನು ಸಹಿಸಿಕೊಳ್ಳಲು ಆಗುತ್ತಿಲ್ಲ. ಅವರ ಅಸೂಯೆಗೆ ಮದ್ದಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.
ಸರ್ಕಾರದಿಂದ ಯಾರಿಗೆ ಒಂದು ರೂಪಾಯಿ ಹಣ ಕೊಟ್ಟರೂ ಅದಕ್ಕೆ ಲೆಕ್ಕ, ಹೊಣೆಗಾರಿಕೆ ಇರಬೇಕು. ಫಲಾನುಭವಿ ಆಗುವವರು ಮತದಾರರ ಗುರುತಿನ ಚೀಟಿ, ಬ್ಯಾಂಕ್ ಖಾತೆ, ಆಧಾರ್ ಕಾರ್ಡ್ ಹೊಂದಿರಬೇಕು. ಬೇರೆಯವರ ಬ್ಯಾಂಕ್ ಖಾತೆಗೆ ಹಣ ನೀಡಲಾಗುವುದಿಲ್ಲ ಎಂದು ತಿಳಿಸಿದ್ದಾರೆ.
ಸದಾಶಿವನಗರ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮನೆ ಯಜಮಾನಿ ಯಾರು ಎಂದು ಮನೆಯವರೇ ತೀರ್ಮಾನ ಮಾಡಬೇಕು. ಅವರ ಮನೆ ವಿಚಾರದಲ್ಲಿ ನಾವು ಹಸ್ತಕ್ಷೇಪ ಮಾಡುವುದಿಲ್ಲ. ಮತದಾರರ ಗುರುತಿನಿ ಚೀಟಿ, ಎಪಿಎಲ್, ಬಿಪಿಎಲ್ ಕಾರ್ಡ್ ಗಳಲ್ಲಿ ಯಾವ ಮನೆಯಲ್ಲಿ ಯಾರೆಲ್ಲಾ ಇದ್ದಾರೆ ಎಂದು ಮಾಹಿತಿ ಇದೆ ಎಂದರು.
ಇದನ್ನೂ ಓದಿ: ಕಾಂಗ್ರೆಸ್ ಆಂತರಿಕ ವಿಚಾರಗಳ ಬಗ್ಗೆ ಚಿಂತಿಸುವ ಅಗತ್ಯವಿಲ್ಲ: ಬಿಜೆಪಿಗೆ ಸತೀಶ್ ಜಾರಕಿಹೊಳಿ
ಬಿಜೆಪಿ, ಜನತಾ ದಳದವರಿಗೆ ಈ ಯೋಜನೆ ಜಾರಿಯನ್ನು ಸಹಿಸಿಕೊಳ್ಳಲು ಆಗುತ್ತಿಲ್ಲ. ಅವರ ಅಸೂಯೆಗೆ ಮದ್ದಿಲ್ಲ. ನಮ್ಮ ಯೋಜನೆ ಬಗ್ಗೆ ಮಾತನಾಡುವವರು ಮೊದಲು ಬಿಜೆಪಿಯವರ ಉದ್ಯೋಗ ಭರವಸೆ ಬಗ್ಗೆ ಮಾತಾಡಲಿ. ಎಲ್ಲರ ಖಾತೆಗೆ 15 ಲಕ್ಷ ಹಾಕಿಸಲಿ. ಆ ಬಗ್ಗೆ ಯಾಕೆ ಯಾರೂ ಕೇಳುತ್ತಿಲ್ಲ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಭಟನೆ ಮಾಡುವವರನ್ನು ಬೇಡ ಎನ್ನಲು ಸಾಧ್ಯವೇ? ಎಂದು ಹೇಳಿದರು.