ಬೊಮ್ಮಾಯಿ ಪ್ರಾಜ್ಞರು- ಪ್ರಜ್ಞಾವಂತರೆಂದು ಭಾವಿಸಿದ್ದೆ: ಕೋಮುವಾದಿಗಳ ಸಹವಾಸ ಮಾಡಿ ಅವಿವೇಕದ ತುಟ್ಟತುದಿಗೆ ಏರಿದ್ದಾರೆ!

ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೋಮುವಾದಿಗಳ ಸಹವಾಸ ಮಾಡಿ ಅವಿವೇಕದ ತುಟ್ಟತುದಿಗೆ ಏರಿದ್ದಾರೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ವಾಗ್ದಾಳಿ ನಡೆಸಿದ್ದಾರೆ
ಬಸವರಾಜ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೋಮುವಾದಿಗಳ ಸಹವಾಸ ಮಾಡಿ ಅವಿವೇಕದ ತುಟ್ಟತುದಿಗೆ ಏರಿದ್ದಾರೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ವಾಗ್ದಾಳಿ ನಡೆಸಿದ್ದಾರೆ

ಈ ಸಂಬಂಧ ಟ್ವೀಟ್ ಮಾಡಿರುವ ಅವರು ‘ಬೊಮ್ಮಾಯಿ ಅವರನ್ನು ನಾನು ಪ್ರಾಜ್ಞರು ಹಾಗೂ ಪ್ರಜ್ಞಾವಂತರೆಂದು ಭಾವಿಸಿದ್ದೆ. ಆದರೆ, ಸಹವಾಸ ದೋಷದಿಂದ ಸನ್ಯಾಸಿ ಕೆಟ್ಟ ಎಂಬಂತೆ ಜನತಾ ಪರಿವಾರದ ಬೊಮ್ಮಾಯಿ, ಕೋಮುವಾದಿಗಳ ಸಹವಾಸ ಮಾಡಿ ಅವಿವೇಕದ ತುತ್ತತುದಿಗೆ ಏರಿದ್ದಾರೆ ಎಂದು ಲೇವಡಿ ಮಾಡಿದ್ದಾರೆ.

ಬೊಮ್ಮಾಯಿಯವರೇ, ನೀವು ಮುಖ್ಯಮಂತ್ರಿ ಆಗಿದ್ದವರು. ಕಾನೂನು ಉಲ್ಲಂಘಿಸುವವರ ವಿರುದ್ಧ ಕ್ರಮ ತೆಗೆದುಕೊಳ್ಳುವುದು ತಪ್ಪೇ ಎಂದು ಗುಂಡೂರಾವ್ ಪ್ರಶ್ನಿಸಿದ್ದಾರೆ. ಬೊಮ್ಮಾಯಿಯವರೇ, ಯುಪಿಎ ಅವಧಿಯಲ್ಲಿ ಅಪರಾಧಿಗಳ ರಕ್ಷಣೆಯಾಗುತಿತ್ತು ಎಂದು ಹೇಳಿದ್ದೀರಿ‌.

ನಮ್ಮ ಅವಧಿಯಲ್ಲಿ ಯಾವ ಅಪರಾಧಿಯ ರಕ್ಷಣೆಯಾಗಿದೆ ಎಂದು ಹೇಳಿ? ನಾರಾಯಣ ರಾಣೆ, ಸುವೇಂದು ಅಧಿಕಾರಿಯನ್ನು ಮಹಾಭ್ರಷ್ಟರೆಂದು ಬಿಂಬಿಸಿದ್ದು ನಿಮ್ಮ ಪಕ್ಷವೇ ಅಲ್ಲವೇ?, ಅವರೀಗ ನಿಮ್ಮ ಪಕ್ಷದ ಸದಸ್ಯರು, ಬೇರೆ ಪಕ್ಷದಲ್ಲಿದ್ದಾಗ ಮಹಾಭ್ರಷ್ಟರು ಈಗ ಅವರೇನು’ ಎಂದು ಗುಂಡೂರಾವ್ ಪ್ರಶ್ನಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com