13 ಮಂದಿ ನಾಲಾಯಕ್ ಸಂಸದರು; ತೇಜೋವಧೆ ನಡೆಯುತ್ತಿದ್ದರೂ ಮೌನವೇಕೆ? ಬಿಜೆಪಿ ಹಿರಿಯರ ಸೂಚನೆಯಂತೆ ಷಡ್ಯಂತ್ರ!
ರಾಜ್ಯದಲ್ಲಿ ಆಯ್ಕೆಯಾಗಿರುವ 25 ಬಿಜೆಪಿ ಸಂಸದರ ಪೈಕಿ 13 ಮಂದಿ ನಾಲಾಯಕ್ ಸಂಸದರು ಎಂದು ತೇಜೋವಧೆ ಮಾಡುವ ಕೆಲಸವಾಗುತ್ತಿದೆ. ಈ ಮೂಲಕ ಹಿರಿಯ ಸಂಸದರ ಮನೋಸ್ಥೈರ್ಯ ಕುಗ್ಗಿಸುವ ಪ್ರಯತ್ನವಾಗುತ್ತಿದೆ.
Published: 07th June 2023 08:40 AM | Last Updated: 07th June 2023 05:56 PM | A+A A-

ಸದಾನಂದಗೌಡ
ಬೆಂಗಳೂರು: ರಾಜ್ಯದಲ್ಲಿ ಆಯ್ಕೆಯಾಗಿರುವ 25 ಬಿಜೆಪಿ ಸಂಸದರ ಪೈಕಿ 13 ಮಂದಿ ನಾಲಾಯಕ್ ಸಂಸದರು ಎಂದು ತೇಜೋವಧೆ ಮಾಡುವ ಕೆಲಸವಾಗುತ್ತಿದೆ. ಈ ಮೂಲಕ ಹಿರಿಯ ಸಂಸದರ ಮನೋಸ್ಥೈರ್ಯ ಕುಗ್ಗಿಸುವ ಪ್ರಯತ್ನವಾಗುತ್ತಿದೆ.
ಕೂಡಲೇ ರಾಷ್ಟ್ರೀಯ ಹಾಗೂ ರಾಜ್ಯದ ಬಿಜೆಪಿ ನಾಯಕರು ಮಧ್ಯಪ್ರವೇಶಿಸಿ ಗೊಂದಲಕ್ಕೆ ತೆರೆ ಎಳೆಯಬೇಕು ಎಂದು ಬೆಂಗಳೂರು ಉತ್ತರ ಲೋಕಸಭಾಕ್ಷೇತ್ರದ ಸಂಸದ ಹಾಗೂ ಮಾಜಿ ಕೇಂದ್ರ ಸಚಿವ ಡಿ.ವಿ ಸದಾನಂದಗೌಡ ಆಗ್ರಹಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಜ್ಯದ 13 ಮಂದಿ ಬಿಜೆಪಿ ಪಕ್ಷದ ಸಂಸದರು ಯಾವುದೇ ಕೆಲಸ ಮಾಡಿಲ್ಲ, ಅಯೋಗ್ಯರು ಎಂದು ಮಾನಹಾನಿ ಆಗುವ ರೀತಿ ವರದಿಗಳ ಕುರಿತು ರಾಜ್ಯದ ಬಿಜೆಪಿ ನಾಯಕರು ಮೌನವಾಗಿ ಇರುವುದು ಏಕೆ?' ಎಂದು ಡಿ.ವಿ.ಸದಾನಂದಗೌಡ ಪ್ರಶ್ನಿಸಿದ್ದಾರೆ.
ಇದನ್ನೂ ಓದಿ: ಶತ್ರುವಿನ ಶತ್ರು- ಮಿತ್ರ: ಮುಂಬರುವ ಚುನಾವಣೆಗಳಲ್ಲಿ ಕಾಂಗ್ರೆಸ್ ವಿರುದ್ಧ ಬಿಜೆಪಿ- ಜೆಡಿಎಸ್ ಮೈತ್ರಿ ಅಸ್ತ್ರ!
ರಾಜ್ಯದಲ್ಲಿ ಆಯ್ಕೆಯಾಗಿರುವ 25 ಬಿಜೆಪಿ ಸಂಸದರ ಪೈಕಿ 13 ಮಂದಿ ನಾಲಾಯಕ್ ಸಂಸದರು ಎಂದು ತೇಜೋವಧೆ ಮಾಡುವ ಕೆಲಸವಾಗುತ್ತಿದೆ. ಬಿಜೆಪಿ ಸಂಸದರ ಮಾನಹಾನಿ ಆಗುತ್ತಿರುವುದು ನೋಡಿಯೂ ಸ್ಪಷ್ಟನೆ ನೀಡದಿರುವುದು ತರವಲ್ಲ. ಇದು ರಾಜ್ಯಕ್ಕೆ ಬೇರೆ ರೀತಿಯ ಸಂದೇಶ ಹೋಗಲಿದೆ. ಈ ಮೂಲಕ ಹಿರಿಯ ಸಂಸದರ ಮನೋಸ್ಥೈರ್ಯ ಕುಗ್ಗಿಸುವ ಪ್ರಯತ್ನವಾಗುತ್ತಿದೆ. ಕೂಡಲೇ ರಾಷ್ಟ್ರೀಯ ಹಾಗೂ ರಾಜ್ಯದ ಬಿಜೆಪಿ ನಾಯಕರು ಮಧ್ಯಪ್ರವೇಶಿಸಿ ಗೊಂದಲಕ್ಕೆ ತೆರೆ ಎಳೆಯಬೇಕು ಎಂದು ಒತ್ತಾಯಿಸಿದರು.
ಲೋಕಸಭಾ ಚುನಾವಣೆಗೆ ಇನ್ನೊಂದು ವರ್ಷ ಬಾಕಿಯಿದೆ. ಈ ಹಂತದಲ್ಲಿರುವಾಗಲೇ ಸಂಸದರನ್ನು ತೇಜೋವಧೆ ಮಾಡುವ ಕೆಲಸವಾಗುತ್ತಿದೆ. ಮಾನಹಾನಿ ಹಿಂದೆ ಯಾರಿದ್ದಾರೋ ಗೊತ್ತಿಲ್ಲ. ಆಯ್ಕೆಯಾಗಿರುವ 25 ಸಂಸದರ ಪೈಕಿ 13 ಮಂದಿ ಕ್ಷೇತ್ರದಲ್ಲಿ ಅಭಿವೃದ್ಧಿಯೇ ಮಾಡಿಲ್ಲ. ಇನ್ನೂ ಕೆಲ ಸಂಸದರು ಅನಾರೋಗ್ಯ ಪೀಡಿತರಾಗಿದ್ದಾರೆ.
ಇದನ್ನೂ ಓದಿ: "2024 ರ ಲೋಕಸಭಾ ಚುನಾವಣೆ ಗೆಲ್ಲಲು ಮೋದಿ ಮ್ಯಾಜಿಕ್, ಹಿಂದುತ್ವವಷ್ಟೇ ಸಾಲದು": ಬಿಜೆಪಿಗೆ ಆರ್ ಎಸ್ಎಸ್ ಮುಖವಾಣಿ
ಮುಂದಿನ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ಸಿಗುವುದಿಲ್ಲ ಎಂಬ ರೀತಿಯಲ್ಲಿ ಕೆಲ ಮಾಧ್ಯಮಗಳಲ್ಲಿ ಸುದ್ದಿ ಪ್ರಸಾರವಾಗುತ್ತಿದೆ ಎಂದರು. ಅಲ್ಲದೆ, ಮತದಾರರಿಂದ ಆಯ್ಕೆಗೊಂಡ ಸಂಸದರನ್ನು ತೇಜೋವಧೆ ಮಾಡುವ ಕೆಲಸ ಎಷ್ಟು ಸರಿ? ಈ ಬಗ್ಗೆ ನನಗೆ 12 ಮಂದಿ ಸಂಸದರು ಕರೆ ಮಾಡಿ ಅಳಲು ತೋಡಿಕೊಂಡಿದ್ದಾರೆ.
ಪಕ್ಷದ ಹಿರಿಯರ ಸೂಚನೆಯಂತೆ ಈ ಷಡ್ಯಂತ್ರ ನಡೆಯುತ್ತಿದೆಯೇ ಎಂದೂ ಅವರು ಖಾರವಾಗಿ ಪ್ರಶ್ನಿಸಿದ್ದಾರೆ. ವಿಧಾನಸಭಾ ಚುನಾವಣೆಯ ಸೋಲಿನ ಸಂದರ್ಭದಲ್ಲಿ ಪಕ್ಷದ ನಾಯಕರು ಹಾಗೂ ಜನಪ್ರತಿನಿಧಿಗಳ ತೇಜೋವಧೆ ಮಾಡುವ ಪ್ರಯತ್ನ ನಡೆಯುತ್ತಿದೆ.