13 ಬಿಜೆಪಿ ಹಾಲಿ ಸಂಸದರಿಗೆ ಈ ಬಾರಿ ಟಿಕೆಟ್ ಮಿಸ್: ಸದಾನಂದಗೌಡ ಹೇಳಿಕೆಗೆ ಜೋಶಿ ಪ್ರತಿಕ್ರಿಯಿಸಿದ್ದು ಹೀಗೆ..
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಕುರಿತು ಮಾಜಿ ಕೇಂದ್ರ ಸಚಿವ ಡಿ.ವಿ. ಸದಾನಂದಗೌಡರು ಯಾವುದೇ ಭಯ ಪಡಬೇಕಾಗಿಲ್ಲ. ಪಕ್ಷ ಸದಾ ಅವರ ಜೊತೆಗಿರುತ್ತದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಭರವಸೆ ನೀಡಿದ್ದಾರೆ.
Published: 08th June 2023 12:54 AM | Last Updated: 08th June 2023 01:11 AM | A+A A-

ಡಿವಿ ಸದಾನಂದಗೌಡ, ಪ್ರಲ್ಹಾದ್ ಜೋಶಿ
ನವದೆಹಲಿ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಕುರಿತು ಮಾಜಿ ಕೇಂದ್ರ ಸಚಿವ ಡಿ.ವಿ. ಸದಾನಂದಗೌಡರು ಯಾವುದೇ ಭಯ ಪಡಬೇಕಾಗಿಲ್ಲ. ಪಕ್ಷ ಸದಾ ಅವರ ಜೊತೆಗಿರುತ್ತದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಭರವಸೆ ನೀಡಿದ್ದಾರೆ.
ತಮ್ಮನ್ನು ಸೇರಿದಂತೆ 13 ಬಿಜೆಪಿ ಹಾಲಿ ಸಂಸದರಿಗೆ ಟಿಕೆಟ್ ನಿರಾಕರಿಸಿರುವ ಕುರಿತು ಮಾಧ್ಯಮಗಳ ವರದಿ ಉಲ್ಲೇಖಿಸಿದ ಸದಾನಂದಗೌಡರು, ತಮ್ಮಗೆ ಟಿಕೆಟ್ ನೀಡಲಾಗುತ್ತದೆಯೋ ಅಥವಾ ಇಲ್ಲವೋ ಎಂಬುದರ ಬಗ್ಗೆ ಬಿಜೆಪಿ ನಾಯಕರು ಸ್ಪಷ್ಟಪಡಿಸಬೇಕೆಂದು ಹೇಳಿಕೆ ನೀಡಿದ್ದರು.
ಇದನ್ನೂ ಓದಿ: 13 ಮಂದಿ ನಾಲಾಯಕ್ ಸಂಸದರು; ತೇಜೋವಧೆ ನಡೆಯುತ್ತಿದ್ದರೂ ಮೌನವೇಕೆ? ಬಿಜೆಪಿ ಹಿರಿಯರ ಸೂಚನೆಯಂತೆ ಷಡ್ಯಂತ್ರ!
ದೆಹಲಿಯಲ್ಲಿ ಬುಧವಾರ ಈ ಕುರಿತು ಪ್ರತಿಕ್ರಿಯಿಸಿದ ಪ್ರಲ್ಹಾದ್ ಜೋಶಿ, ಮಾಧ್ಯಮಗಳಲ್ಲಿ ಬಂದಿರುವ ವರದಿಗಳ ಬಗ್ಗೆ ಸದಾನಂದಗೌಡರು ಚಿಂತೆ ಮಾಡಬೇಕಾದ ಅಗತ್ಯವಿಲ್ಲ. ಹಿರಿಯ ರಾಜಕಾರಣಗಳಲ್ಲಿ ಒಬ್ಬರಾಗಿರುವ ಸದಾನಂದಗೌಡರು ರಾಜ್ಯ ಹಾಗೂ ಕೇಂದ್ರ ಸರ್ಕಾರಗಳಲ್ಲಿ ಹಲವಾರು ಹುದ್ದೆಗಳನ್ನು ನಿರ್ವಹಿಸಿದ್ದಾರೆ. ಅವರಂಥ ಹಿರಿಯ ನಾಯಕರು ಆತಂಕಪಡಬೇಕಿಲ್ಲ. ಪಕ್ಷ ಸದಾ ಗೌಡರ ಜೊತೆಗಿದೆ ಎಂದರು.
ಮುಂದಿನ ವರ್ಷ ನಡೆಯಲಿರುವ ಲೋಕಸಭಾ ಚುನಾವಣೆಗೆ ಯಾರಿಗೆ ಟಿಕೆಟ್ ನೀಡಬೇಕು ಎಂಬ ಬಗ್ಗೆ ಪಕ್ಷ ಇನ್ನೂ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಚುನಾವಣೆ ಸಮೀಪಿಸಿದಾಗ ಅಭ್ಯರ್ಥಿಗಳನ್ನು ನಿರ್ಧರಿಸಲಾಗುತ್ತದೆ. ಪಕ್ಷದ ವರಿಷ್ಠರು ಅಭ್ಯರ್ಥಿಗಳನ್ನು ನಿರ್ಧರಿಸುತ್ತಾರೆಯೇ ಹೊರತು ಮಾಧ್ಯಮಗಳಲ್ಲ ಎಂದು ಜೋಶಿ ಹೇಳಿದರು.