ಜೆಡಿಎಸ್ ವರಿಷ್ಠ ದೇವೇಗೌಡರ ಭದ್ರಕೋಟೆ ಹಾಸನ ಜಿಲ್ಲಾ ಉಸ್ತುವಾರಿ ಸಚಿವರಾಗಿ ಕೆಎನ್ ರಾಜಣ್ಣ ನೇಮಕ!

ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರ ಭದ್ರಕೋಟೆಯಾದ ಹಾಸನಕ್ಕೆ ಸಹಕಾರಿ ಸಚಿವ ಕೆ.ಎನ್.ರಾಜಣ್ಣ ಜಿಲ್ಲಾ ಉಸ್ತುವಾರಿ ಸಚಿವರಾಗಿ ನೇಮಕಗೊಂಡಿದ್ದಾರೆ.
ಹೆಚ್ ಡಿ ದೇವೇಗೌಡ, ಕೆಎನ್ ರಾಜಣ್ಣ
ಹೆಚ್ ಡಿ ದೇವೇಗೌಡ, ಕೆಎನ್ ರಾಜಣ್ಣ
Updated on

ಹಾಸನ: ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರ ಭದ್ರಕೋಟೆಯಾದ ಹಾಸನಕ್ಕೆ ಸಹಕಾರಿ ಸಚಿವ ಕೆ.ಎನ್.ರಾಜಣ್ಣ ಜಿಲ್ಲಾ ಉಸ್ತುವಾರಿ ಸಚಿವರಾಗಿ ನೇಮಕಗೊಂಡಿದ್ದಾರೆ. ಗೌಡರ ರಾಜಕೀಯ ಎದುರಾಳಿ ಕೆ.ಎನ್.ರಾಜಣ್ಣ ಅವರನ್ನು ಹಾಸನ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ಮುಖ್ಯಮಂತ್ರಿಗಳು ನೇಮಕ ಮಾಡುತ್ತಾರೆ ಎಂದು ಕಾಂಗ್ರೆಸ್ ನಾಯಕರು ಕೂಡ ನಿರೀಕ್ಷಿಸಿರಲಿಲ್ಲ. ನೇಮಕಾತಿ ಕುರಿತು ರಾಜಕೀಯ ಪಕ್ಷಗಳ ಮುಖಂಡರು ವಿಭಿನ್ನ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ.

ಕೆ.ಎನ್.ರಾಜಣ್ಣ ಅವರನ್ನು ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಿಸಿರುವುದು ಮಿಶ್ರ ಪ್ರತಿಕ್ರಿಯೆಗೆ ಕಾರಣವಾಗಿದೆ. ಈ ನಿರ್ಧಾರವನ್ನು ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರು ಸ್ವಾಗತಿಸಿದ್ದು, ಜೆಡಿಎಸ್ ನಾಯಕರು ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ. ಗೌಡರ ರಾಜಕೀಯ ಎದುರಾಳಿಯೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿರ್ಧಾರವನ್ನು ಜೆಡಿಎಸ್ ಶಾಸಕರು ನಿರೀಕ್ಷಿಸಿರಲಿಲ್ಲ. 

ಜಿಲ್ಲೆಯ ಹಿತದೃಷ್ಟಿಯಿಂದ  ಸಹಕಾರಿ ಸಚಿವ ಕೆ.ಎನ್.ರಾಜಣ್ಣ ಅವರನ್ನು ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಿಸುವ ಮೂಲಕ ಮುಖ್ಯಮಂತ್ರಿಗಳು ಸರಿಯಾದ ನಿರ್ಧಾರ ಕೈಗೊಂಡಿದ್ದಾರೆ ಎಂದು ಹೆಸರು ಹೇಳಲಿಚ್ಛಿಸದ ಬಿಜೆಪಿ ಮುಖಂಡರೊಬ್ಬರು ತಿಳಿಸಿದರು. ಅವರು ಯಾವುದೇ ವಿಷಯಗಳಲ್ಲಿ ರಾಜಿ ಮಾಡಿಕೊಳ್ಳುವುದಿಲ್ಲ ಮತ್ತು ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಾರೆ. ಆಯಾ ಪಕ್ಷದ ನಾಯಕರು ಎಲ್ಲ ವಿಚಾರಗಳಲ್ಲಿ ಮೂಗುತೂರಿ ಜಿಲ್ಲೆಯ ಮೇಲೆ ಹಿಡಿತ ಸಾಧಿಸಲು ಪ್ರಯತ್ನಿಸುವಂತಹ ಹಾಸನದಂತಹ ಜಿಲ್ಲೆಗೆ ರಾಜಣ್ಣ ಸೂಕ್ತ ರಾಜಕಾರಣಿಯಾಗಿದ್ದಾರೆ ಎಂದು ಅವರು ಹೇಳಿದರು. 

ಸೈದ್ಧಾಂತಿಕ ಹಾಗೂ  ಯಾವುದೇ ಸಂದರ್ಭದಲ್ಲೂ ಜೆಡಿಎಸ್ ಜತೆ ಹೊಂದಾಣಿಕೆ ರಾಜಕಾರಣ ಮಾಡಿಕೊಳ್ಳದ ಕೆ.ಎನ್. ರಾಜಣ್ಣ ಅವರ ನೇಮಕದಿಂದ ಹಾಸನ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಉತ್ತೇಜನ ಸಿಗಲಿದೆ ಎಂದರು.ಈ ಹಿಂದಿನ ಜಿಲ್ಲಾ ಉಸ್ತುವಾರಿ ಸಚಿವರು ಜಿಲ್ಲೆಯಲ್ಲಿ ಜೆಡಿಎಸ್ ಜೊತೆ ನಂಟು ಹೊಂದಿದ್ದರು ಎಂದು ಬಿಜೆಪಿಯ ಹಿರಿಯ ಕಾರ್ಯಕರ್ತ ಪುಟ್ಟಸ್ವಾಮಿ ಆರೋಪಿಸಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರು ಪ್ರತಿಪಕ್ಷದ ನಾಯಕರಿಗೆ ಪ್ರಾಮುಖ್ಯತೆ ನೀಡಿದ್ದರಿಂದ ಪಕ್ಷದ ಕಾರ್ಯಕರ್ತರೂ ಹತಾಶರಾದರ ಎಂದು ಅವರು ತಿಳಿಸಿದರು.  ಜೆಡಿಎಸ್ ಪ್ರಾಬಲ್ಯವಿರುವ ಹಾಸನ ಜಿಲ್ಲೆಯಲ್ಲಿ ಕೆ.ಎನ್.ರಾಜಣ್ಣ ಅವರ ಆಡಳಿತ ಮತ್ತು ಅವರ ನಿರ್ಧಾರಗಳನ್ನು ವೀಕ್ಷಿಸಲು ರಾಜಕೀಯ ಮುಖಂಡರು ಕಾಯುತ್ತಿದ್ದಾರೆ.

2019ರ ಲೋಕಸಭೆ ಚುನಾವಣೆ ವೇಳೆ ಕೆ.ಎನ್.ರಾಜಣ್ಣ ಸುದ್ದಿಯಾಗಿದ್ದನ್ನು ಇಲ್ಲಿ ಸ್ಮರಿಸಬಹುದು. 2019 ರ ಲೋಕಸಭಾ ಚುನಾವಣೆಯಲ್ಲಿ ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಗೌಡರನ್ನು ಸೋಲಿಸಲು ಕೆ.ಎನ್.ರಾಣಣ್ಣ ಪ್ರಯತ್ನ ನಡೆಸಿದ್ದಾರೆ ಎಂಬ ಆರೋಪದ ಮೇಲೆ ಗೌಡರ ಕುಟುಂಬ ಹಾಗೂ ಜೆಡಿಎಸ್ ಅಭಿಮಾನಿಗಳು ಕೆ.ಎನ್.ರಾಣಣ್ಣ ಅವರಿಗೆ ಶಾಪ ಹಾಕಿದ್ದರು. ನಾಲ್ವರು ಜೆಡಿಎಸ್, ಇಬ್ಬರು ಬಿಜೆಪಿ ಹಾಗೂ ಒಬ್ಬರು ಕಾಂಗ್ರೆಸ್ ಶಾಸಕರಿರುವ ಹಾಸನ ಜಿಲ್ಲೆಯನ್ನು ಮುನ್ನಡೆಸುವುದು ಕೆಎನ್ ರಾಜಣ್ಣ ಅವರಿಗೆ ಸವಾಲಾಗಬಹುದು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com