ಉಸ್ತುವಾರಿ ಸಚಿವರ ನೇಮಕ: ಆಯಕಟ್ಟಿನ ಜಿಲ್ಲೆಗಳಲ್ಲಿ ಸಿದ್ದು ಆಪ್ತರಿಗೆ ಮಣೆ; ಡಿಕೆಶಿಗೆ ಬಿಜೆಪಿ ಭದ್ರಕೋಟೆ ಭೇದಿಸುವ ಹೊಣೆ!
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜಿಲ್ಲಾ ಉಸ್ತುವಾರಿ ಸಚಿವರ ಆಯ್ಕೆಯು ಪಂಚಾಯತಿ ಮತ್ತು ಲೋಕಸಭೆ ಚುನಾವಣೆಗೆ ಮುನ್ನುಡಿ ಬರೆದಂತಿದೆ.
Published: 10th June 2023 11:53 AM | Last Updated: 10th June 2023 02:07 PM | A+A A-

ಸಿದ್ದರಾಮಯ್ಯ ಸಚಿವ ಸಂಪುಟ
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜಿಲ್ಲಾ ಉಸ್ತುವಾರಿ ಸಚಿವರ ಆಯ್ಕೆಯು ಪಂಚಾಯತಿ ಮತ್ತು ಲೋಕಸಭೆ ಚುನಾವಣೆಗೆ ಮುನ್ನುಡಿ ಬರೆದಂತಿದೆ. ವಿಧಾನಸಭೆ ಚುನಾವಣೆಯ ಗೆಲುವಿನಿಂದ ಬೀಗುತ್ತಿರುವ ರಾಜ್ಯ ಕಾಂಗ್ರೆಸ್ ಗೆ , ಹೈಕಮಾಂಡ್ ಮುಂಬರುವ 2024ರ ಲೋಕಸಭೆ ಚುನಾವಣೆಯಲ್ಲಿ ಕನಿಷ್ಠ 20 ಸ್ಥಾನಗಳ ಗುರಿ ನೀಡಿದೆ.
ಉನ್ನತ ಹುದ್ದೆಗಳ ಬಗ್ಗೆ ನಿರ್ಧರಿಸಲು ನಡೆದ ಸಭೆಯಲ್ಲಿ, ಹೈಕಮಾಂಡ್ ಸಾರ್ವತ್ರಿಕ ಚುನಾವಣೆಯ ಗುರಿಯನ್ನು ಸಿದ್ದರಾಮಯ್ಯ ಅವರಿಗೆ ನೀಡಿದೆ. ಸೆಪ್ಟೆಂಬರ್-ಅಕ್ಟೋಬರ್ ನಲ್ಲಿ ನಡೆಯಲಿರುವ ಪಂಚಾಯತ್ ಚುನಾವಣೆ ಮತ್ತು ಬಿಬಿಎಂಪಿ ಚುನಾವಣೆಗಳಲ್ಲಿಯೂ ಕಾಂಗ್ರೆಸ್ ಮುನ್ನಡೆ ಸಾಧಿಸುವತ್ತ ಕಣ್ಣಿಟ್ಟಿದೆ.
ರಾಜ್ಯ ಸರ್ಕಾರ ಐದು ಖಾತರಿಗಳ ಅನುಷ್ಠಾನಕ್ಕೆ ದಿನಾಂಕಗಳನ್ನು ಪ್ರಕಟಿಸಿದೆ. ಪ್ರತಿಪಕ್ಷಗಳ ಟೀಕೆಗಳನ್ನು ಎದುರಿಸಲು ಜಿಲ್ಲಾ ಸಚಿವರು ಸಜ್ಜಾಗಿರಬೇಕಂದು ಸಿದ್ದರಾಮಯ್ಯ ಬಯಸಿದ್ದಾರೆ. ಸಚಿವರು ತ್ರೈಮಾಸಿಕ ಪರಿಶೀಲನಾ ಸಭೆಗಳನ್ನು ನಡೆಸಬೇಕು ಮತ್ತು ಸಚಿವರು ತಮ್ಮ ಜಿಲ್ಲೆಗಳಿಗೆ ಪ್ರವಾಸ ಮಾಡಬೇಕು ಮತ್ತು ಕಾಂಗ್ರೆಸ್ ಗ್ಯಾರಂಟಿಗಳ ಬಗ್ಗೆ ಪ್ರತಿಕ್ರಿಯೆಗಾಗಿ ಜನರೊಂದಿಗೆ ಸಂವಾದ ನಡೆಸಬೇಕು ಎಂದು ಸಿದ್ದರಾಮಯ್ಯ ಸೂಚಿಸಿದ್ದಾರೆ.
ಮೈಸೂರು ಮತ್ತು ಚಾಮರಾಜನಗರ ಲೋಕಸಭಾ ಕ್ಷೇತ್ರಗಳೆರಡನ್ನೂ ಮರಳಿ ಗೆಲ್ಲುವ ಉತ್ಸಾಹದಲ್ಲಿರುವ ಸಿದ್ದರಾಮಯ್ಯ ಅವರು ತಮ್ಮ ಆಪ್ತರಾದ ಹೆಚ್.ಸಿ.ಮಹದೇವಪ್ಪ ಮತ್ತು ಕೆ.ವೆಂಕಟೇಶ್ ಅವರ ಮೇಲೆ ವಿಶ್ವಾಸವಿಟ್ಟು ಎರಡು ಜಿಲ್ಲೆಗಳ ಉಸ್ತುವಾರಿ ನೀಡಿದ್ದಾರೆ.
ಇದನ್ನೂ ಓದಿ: ಜೆಡಿಎಸ್ ವರಿಷ್ಠ ದೇವೇಗೌಡರ ಭದ್ರಕೋಟೆ ಹಾಸನ ಜಿಲ್ಲಾ ಉಸ್ತುವಾರಿ ಸಚಿವರಾಗಿ ಕೆಎನ್ ರಾಜಣ್ಣ ನೇಮಕ!
ರಾಜಕೀಯ ಸವಾಲುಗಳ ಹೊರತಾಗಿ ಮಹದೇವಪ್ಪ ಅವರು ದಸರಾ, ತಲಕಾಡಿನಲ್ಲಿ ಪಂಚಲಿಂಗ ದರ್ಶನ, ಟಿ ನರಸೀಪುರದಲ್ಲಿ ಕುಂಭಮೇಳಕ್ಕೆ ಸಿದ್ಧತೆ ನಡೆಸಬೇಕಿದೆ. ಸಿದ್ದರಾಮಯ್ಯನವರು ಎರಡು ಸ್ಥಾನಗಳನ್ನು ಕಬಳಿಸಿ ಹೈಕಮಾಂಡ್ ನಿರೀಕ್ಷೆಯನ್ನು ಈಡೇರಿಸಿದರೆ ಉನ್ನತ ಹುದ್ದೆಯಲ್ಲಿ ಅವರ ಸ್ಥಾನ ಮತ್ತಷ್ಟು ಗಟ್ಟಿಯಾಗಬಹುದು. ಅವರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬೆಂಬಲ ನೀಡಲಿದ್ದಾರೆ.
ಕೇಸರಿ ಪಾಳಯವು 15 ಶಾಸಕರನ್ನು ಹೊಂದಿರುವ ಬಿಜೆಪಿಯ ಬೆಂಗಳೂರಿನ ಕೋಟೆಯನ್ನು ಭೇದಿಸುವ ಮಿಷನ್ ಅವರು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ನೀಡಿದ್ದಾರೆ. ಸ್ಥಳೀಯ ಶಾಸಕರ ಅಪೇಕ್ಷೆಯಂತೆ ಬೈರತಿ ಸುರೇಶ್ ಅವರಿಗೆ ಕೋಲಾರ ಜಿಲ್ಲಾ ಉಸ್ತುವಾರಿ ನೀಡಲಾಗಿದೆ. ಇದರಿಂದ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್.ಮುನಿಯಪ್ಪ ಅವರ ಬೆಂಬಲಿಗರು ಆಕ್ರೋಶಗೊಂಡಿದ್ದಾರೆ.