ಅವಹೇಳನಕಾರಿ ಪೋಸ್ಟ್: ಜೆಪಿ ನಡ್ಡಾ, ಅಮಿತ್ ಮಾಳವೀಯ ವಿರುದ್ಧ ದೂರು ದಾಖಲಿಸಿದ ಕಾಂಗ್ರೆಸ್

ಕಾಂಗ್ರೆಸ್ ನಾಯಕರ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಮತ್ತು ಪಕ್ಷದ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ವಿರುದ್ಧ ಕರ್ನಾಟಕ ಕಾಂಗ್ರೆಸ್ ಸೋಮವಾರ...
ದೂರು ದಾಖಲಿಸಿದ ಕಾಂಗ್ರೆಸ್
ದೂರು ದಾಖಲಿಸಿದ ಕಾಂಗ್ರೆಸ್

ಬೆಂಗಳೂರು: ಕಾಂಗ್ರೆಸ್ ನಾಯಕರ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಮತ್ತು ಪಕ್ಷದ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ವಿರುದ್ಧ ಕರ್ನಾಟಕ ಕಾಂಗ್ರೆಸ್ ಸೋಮವಾರ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸರಿಗೆ ದೂರು ನೀಡಿದೆ.

ಕಾಂಗ್ರೆಸ್ ದೇಶ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿದೆ ಎಂದು ಆರೋಪಿಸಿ ರಾಹುಲ್ ಗಾಂಧಿ ಅವರ ಅನಿಮೇಟೆಡ್ ವಿಡಿಯೋವನ್ನು ಬಿಡುಗಡೆ ಮಾಡಿದ್ದಕ್ಕಾಗಿ ಸಚಿವ ಪ್ರಿಯಾಂಕ್ ಖರ್ಗೆ ಮತ್ತು ಕೆಪಿಸಿಸಿ ವಕ್ತಾರ ರಮೇಶ್ ಬಾಬು ಅವರು ಬಿಜೆಪಿ ನಾಯಕರ ವಿರುದ್ಧ ದೂರು ದಾಖಲಿಸಿದ್ದಾರೆ. ಈ ಸಂಬಂಧ ಚಂಡೀಗಢ ಬಿಜೆಪಿ ರಾಜ್ಯಾಧ್ಯಕ್ಷ ಅರುಣ್ ಸೂದ್ ವಿರುದ್ಧವೂ ದೂರು ದಾಖಲಾಗಿದೆ.

ಜೂನ್ 17 ರಂದು ಅಮಿತ್ ಮಾಳವೀಯ ಅವರು ತಮ್ಮ ಅಧಿಕೃತ ಖಾತೆಯಿಂದ ಅನಿಮೇಟೆಡ್ ವೀಡಿಯೊವನ್ನು ಪೋಸ್ಟ್ ಮಾಡಿದ್ದರು.

"ಕಾಂಗ್ರೆಸ್ ಪಕ್ಷ ದೇಶವಿರೋಧಿ ಚಟುವಟಿಕೆಗಳಲ್ಲಿ ತೊಡಗಿದೆ ಎಂದು ಆ ವಿಡಿಯೋದಲ್ಲಿ ಹೇಳಲಾಗಿದೆ ಮತ್ತು ರಾಹುಲ್ ಗಾಂಧಿ ವಿದೇಶಕ್ಕೆ ಹೋದಾಗಲೆಲ್ಲಾ ಅವರು ದೇಶವಿರೋಧಿ ಚಟುವಟಿಕೆಗಳಲ್ಲಿ ತೊಡಗುತ್ತಾರೆ ಎಂದು ಆರೋಪಿಸಲಾಗಿದೆ ಎಂದು ಖರ್ಗೆ ಹೇಳಿದ್ದಾರೆ.

ಬಿಜೆಪಿಯ ಸುಳ್ಳು ಫ್ಯಾಕ್ಟರಿಯನ್ನು ನಾವು ಬಂದ್ ಮಾಡುತ್ತೇವೆ. ಹೋದ ಸಲ ಅವರ ಸರ್ಕಾರದಲ್ಲಿ ಅವರ ಆಟ ನಡೆದಿತ್ತು. ಯಾರು ಶಾಂತಿ ಕದಡುವ ಪ್ರಯತ್ನ ಮಾಡುತ್ತಾರೆ ಅವರ ವಿರುದ್ದ ಕಾನೂನು ಚೌಕಟ್ಟಿನ ಅಡಿ ಕ್ರಮ ಕೈಗೊಳ್ಳುತ್ತೇವೆ ಎಂದು ದೂರು ನೀಡಿದ ಬಳಿಕ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com